ಟಿ.ಬಿ.ಡ್ಯಾಂ ಭರ್ತಿಗೆ 8 ಅಡಿ ಬಾಕಿ
Team Udayavani, Jul 25, 2021, 6:18 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಜಲಾಶಯದ ಒಳ ಹರಿವು 1ಲಕ್ಷ 20 ಸಾವಿರ ಕ್ಯೂಸೆಕ್ ದಾಟಿದ್ದು, ಡ್ಯಾಂನಿಂದ ನದಿಗೆ ಹೆಚ್ಚುವರಿ ನೀರು ಹರಿಬಿಡುವ ಹಿನ್ನೆಲೆಯಲ್ಲಿ ನದಿಪಾತ್ರದ ಜನ-ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ತುಂಗಭದ್ರಾ ಮಂಡಳಿ ಸೂಚಿಸಿದೆ. ಜಲಾಶಯದ ಒಳಹರಿವು 1 ಲಕ್ಷದ 20 ಸಾವಿರದ 411 ಕ್ಯೂಸೆಕ್‌ಗೆ ಏರಿಕೆಯಾಗಿದೆ.
ಜಲಾಶಯದಲ್ಲಿ 75 ಟಿಎಂಸಿ ನೀರು ಸಂಗ್ರಹವಾಗಿದೆ. ಜು. 25ಕ್ಕೆ ಒಳ ಹರಿವು 1ಲಕ್ಷದ 50 ಸಾವಿರ ಕ್ಯೂಸೆಕ್ ದಾಟುವ ಸಾಧ್ಯತೆ ಇದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 100.855 ಟಿಎಂಸಿ ಇದೆ. ಭಾರೀ ಪ್ರಮಾಣದಲ್ಲಿ ನೀರು ಡ್ಯಾಂಗೆ ಹರಿದು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು. 25ರಂದು ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮಂಡಳಿ ಅಧಿ ಕಾರಿಗಳು ಸಂಬಂಧಿ ಸಿದ ಜಿಲ್ಲಾಡಳಿತಗಳಿಗೆ ಸಂದೇಶ ರವಾನಿಸಿದ್ದಾರೆ.
ಜಲಾಶಯ ಭರ್ತಿಯಾಗಲು ಇನ್ನು 8 ಅಡಿ ಮಾತ್ರ ಬಾಕಿ ಇದೆ. ಸದ್ಯ ಜಲಾಶಯಕ್ಕೆ 1,20,411 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸೆಂಟ್ರಲ್ ವಾಟರ್ ಕಮಿಷನ್ ಹವಾಮಾನದ ಬಗ್ಗೆ ತಿಳಿಸಿದ್ದು, ಶಿವಮೊಗ್ಗದಿಂದ ನದಿಗೆ 2,11,890 ಕ್ಯೂಸೆಕ್ ನೀರು ನದಿಯಲ್ಲಿ ಹರಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ, ತುಂಗಭದ್ರಾ ಜಲಾಶಯಕ್ಕೆ 1ಲಕ್ಷ 50 ಸಾವಿರದಿಂದ 1ಲಕ್ಷ 60 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದುಬರಬಹುದು ಎಂದು ಸ್ಥಳೀಯ ಅ ಧಿಕಾರಿಗಳು ಅಂದಾಜಿಸಿದ್ದಾರೆ.
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಹಿನ್ನೆಲೆಯಲ್ಲಿ ಜು. 25ರಂದು ಯಾವುದೇ ಸಂದರ್ಭದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಹಾಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಮಂಡಳಿ ತಿಳಿಸಿದೆ. ತುಂಗಭದ್ರಾ ಜಲಾಶಯ ರಾಜ್ಯದ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಿಗೆ ನೀರು ಒದಗಿಸುತ್ತದೆ.
ಇನ್ನೂ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಕೂಡ ನೀರು ಪಡೆಯುತ್ತವೆ. ಈಗ ಒಳ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಜಲಾಶಯದ ಗೇಟ್ ಗಳನ್ನು ತೆರೆದು ನದಿಗೆ ನೀರು ಹರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.