ಪಲ್ಸ್ ಪೋಲಿಯೋ ಅಭಿಯಾನ ಯಶಸ್ಸಿ ಗೆ ಕರೆ
ಜ.31ರಿಂದ ಫೆ.3ರವರೆಗೆ ಲಸಿಕಾ ಅಭಿಯಾನ
Team Udayavani, Jan 29, 2021, 4:37 PM IST
ಬಳ್ಳಾರಿ: ಜಿಲ್ಲೆಯಲ್ಲಿ ಇದೇ ಜ.31ರಿಂದ ಫೆ.3ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಹೇಳಿದರು. ನಗರದ ಡಿಸಿ ಕಚೇರಿಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತು ಗುರುವಾರ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 5 ವರ್ಷದೊಳಗಿನ ಯಾವುದೇ ಮಗು ಕೂಡ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು ಎಂದು ಹೇಳಿದರು.
ದೇಶವು ಈಗಾಗಲೇ ಪೋಲಿಯೋ ಮುಕ್ತವಾಗಿದೆ. ಆದರೇ ನೆರೆಹೊರೆಯ ದೇಶಗಳಲ್ಲಿ ಇನ್ನೂ ಇದೆ. ಅದು ನಮ್ಮಲ್ಲಿಯೂ ಮತ್ತೆ ಮರುಕಳಿಸಬಹುದು ಎಂಬ ಹಿನ್ನೆಲೆಯಲ್ಲಿ ಈ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್ ಸುರಕ್ಷ ಕ್ರಮ ಪಾಲಿಸಬೇಕು. ನಗರ ಮತ್ತು
ಗ್ರಾಮೀಣ ಪ್ರದೇಶದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಜನಪ್ರತಿನಿಗಳ ಮೂಲಕ ಉದ್ಘಾಟಿಸಬೇಕು. ಎಲ್ಲ ಬೂತ್ ಗಳ ಉದ್ಘಾಟನೆಯನ್ನು ಅಲ್ಲಿನ ಜನಪ್ರತಿನಿಧಿ ಗಳ ಮೂಲಕ ಅದ್ಧೂರಿಯಾಗಿ ನೆರವೇರಿಸಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಾಕೀತು ಮಾಡಿದರು.
ನಾಲ್ಕು ದಿನಗಳ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಬೇಕಾದ ಅಗತ್ಯ 132 ವಾಹನಗಳ ವ್ಯವಸ್ಥೆಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೂಡಲೇ ಮಾಡುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಮಾಲಪಾಟಿ, ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುತ್‌ತ್ಛಕ್ತಿಯ ಅವಶ್ಯಕತೆ ಇರುವುದರಿಂದ ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರದೇಶಗಳಲ್ಲಿ ವಿದ್ಯುತ್‌ತ್ಛಕ್ತಿ ನಿರಂತರವಾಗಿ ಸರಬರಾಜು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಪ್ರಸ್ತುತ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 5 ವರ್ಷದೊಳಗಿನ 324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ನಗರ ಪ್ರದೇಶದಲ್ಲಿ 549 ಮತ್ತು ಗ್ರಾಮೀಣ ಪ್ರದೇಶದಲ್ಲಿ 1357 ಲಸಿಕಾ ಬೂತ್‌ಗಳು ಸೇರಿದಂತೆ ಜಿಲ್ಲೆಯಲ್ಲಿ 1906 ಲಸಿಕಾ ಬೂತ್‌ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. 1720 ಮನೆ ಭೇಟಿ ತಂಡಗಳು, 103 ಟ್ರಾನ್ಸಿಟ್ ತಂಡಗಳು, 22 ಮೊಬೈಲ್ ತಂಡಗಳು, ಮೈಗ್ರಟರಿ ಮತ್ತು ಹೈ ರಿಸ್ಕ್ ಏರಿಯಾದಲ್ಲಿ 602 ತಂಡಗಳು, ಹೈರಿಸ್ಕ್ ಏರಿಯಾದಲ್ಲಿ ಮನೆ ಮನೆ ಭೇಟಿ ಮಾಡಲು 166 ತಂಡಗಳು ಸೇರಿದಂತೆ ಒಟ್ಟು 1845 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಅನಿಲಕುಮಾರ್
ಅವರು ಸಭೆಗೆ ವಿವರಿಸಿದರು.
ನಗರ ಪ್ರದೇಶದಲ್ಲಿ 1252 ಮತ್ತು ಗ್ರಾಮೀಣ ಪ್ರದೇಶದಲ್ಲಿ 2830 ವ್ಯಾಕ್ಸಿನೇಟರ್ಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈ ಅಭಿಯಾನ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ 363 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಮತ್ತು 8 ಜನ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 415785 ಡೋಸ್ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಡಿಎಚ್‌ಒ ಡಾ| ಎಚ್.ಜನಾರ್ದನ್, ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಓದಿ : ಖಾಸಗಿ ಶಾಲೆಗಳು ಡೊನೇಷನ್, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ಶುಲ್ಕ ನಿಗದಿ ಮಾಡಿದ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.