ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ

ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Team Udayavani, Feb 1, 2021, 5:32 PM IST

1-19

ಬಳ್ಳಾರಿ: ಸತತ ಪರಿಶ್ರಮದಿಂದಾಗಿ ನಮ್ಮ ದೇಶ ಪೋಲಿಯೋ ಮುಕ್ತವಾಗಿದೆ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ
5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಷಕರು ಕಡ್ಡಾಯವಾಗಿ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಶಾಸಕ ಜಿ.ಸೋಮಶೇಖರ್‌ ರೆಡ್ಡಿ ಹೇಳಿದರು.

ನಗರದ ರಾಮಯ್ಯ ಕಾಲೋನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷೀóಯ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನದ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
2011ರಿಂದ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಭಾರತೀಯ ದೇಶ ಪೋಲಿಯೋ ರೋಗದಿಂದ ಸಂಪೂರ್ಣವಾಗಿ ಹೊರಬಂದಿದೆ. ಇದು ಮುಂದಿನ ಮಕ್ಕಳಿಗೆ ಕಾಣಿಸಿಕೊಳ್ಳದಂತೆ ನೋಡಿಕೊಂಡು ಹೋಗುವ ಕಾರ್ಯ ಮಾಡಬೇಕು
ಎಂದರು.
ಹುಟ್ಟಿದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಿ ಮಕ್ಕಳ ಬೆಳವಣಿಗೆಗೆ ಸಹಕಾರಿ ಆಗುತ್ತದೆ. ಮಕ್ಕಳಲ್ಲಿ ಆರೋಗ್ಯ ಉತ್ತಮವಾಗಿರಲು ಇದೊಂದು ಒಳ್ಳೆಯ ಪ್ರಯತ್ನ. ಕೋವಿಡ್‌ ಸಂಬಂಧಿ ಸಿದ ಲಸಿಕೆಗಳನ್ನು ನಮ್ಮ ದೇಶವು ಇತರೇ ದೇಶಗಳಿಗೆ ಪೂರೈಸುವುದರ ಮೂಲಕ ಇತರೇ ದೇಶಗಳಿಗೆ ಮಾದರಿಯಾಗಿದೆ.

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಆದರೂ ಯಾರೂ ನಿರ್ಲಕ್ಷ ವಹಿಸದೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಆಗಾಗ್ಗೆ ಕೈಗಳನ್ನು ಸ್ಯಾನಿಟೈಸರ್‌ನಿಂದ ಸ್ವತ್ಛಗೊಳಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿ ಕಾರಿ ಪವನ್‌ ಕುಮಾರ್‌ ಮಾಲಪಾಟಿ ಮಾತನಾಡಿ, ನಮ್ಮ ದೇಶದಲ್ಲಿ ಕಳೆದ ಹತ್ತು ವರ್ಷದಿಂದ ಯಾವುದೇ ಪೋಲಿಯೋ ಪ್ರಕರಣ ಕಂಡು ಬಂದಿಲ್ಲ. ಮುಂದೆ ಬರಬಾರದು ಎನ್ನುವ ಉದ್ದೇಶದಿಂದ ಈ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ಕೈಗೆತ್ತಿಕೊಳ್ಳಲಾಗಿದೆ. ನಮ್ಮ ಪಕ್ಕದ ರಾಷ್ಟ್ರವಾದ ಬಾಂಗ್ಲಾ, ಪಾಕಿಸ್ತಾನ, ಅಫ್ಘಾನಿಸ್ತಾನ ರಾಷ್ಟ್ರಗಳಲ್ಲಿ ಇವತ್ತಿಗೂ ಜನರನ್ನು ಪೋಲಿಯೋ ರೋಗ ಕಾಡುತ್ತಿದೆ. ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿ ಮಕ್ಕಳ ಬೆಳವಣಿಗೆಗೆ ಲಸಿಕೆಯಿಂದಲೇ ನಾಂದಿ ಹಾಡಬೇಕು ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿ ಕಾರಿ ಡಾ| ಆರ್‌. ಅನಿಲ್‌ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಸಿಕಾ ಕಾರ್ಯಕ್ರಮ ನಡೆಯುತ್ತದೆ. ಮೊದಲ ದಿನ ಬೂತ್‌ಗಳ ಮಟ್ಟದಲ್ಲಿ ಲಸಿಕಾ ಹಾಕಲಾಗುತ್ತದೆ. ಉಳಿದ ಮೂರು ದಿನಗಳಲ್ಲಿ ನಮ್ಮ ಸಿಬ್ಬಂದಿಯು ಮನೆ ಮನೆಗೆ ಭೇಟಿ ನೀಡಿ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ 3,24,818 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ನಗರ ಪ್ರದೇಶದಲ್ಲಿ 549 ಮತ್ತು ಗ್ರಾಮೀಣ ಪ್ರದೇಶದಲ್ಲಿ 1357 ಲಸಿಕಾ ಬೂತ್‌ಗಳು ಸೇರಿದಂತೆ ಜಿಲ್ಲೆಯಲ್ಲಿ 1906 ಲಸಿಕಾ ಬೂತ್‌ಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.

ಇದಕ್ಕಾಗಿ 1720 ಮನೆ ಭೇಟಿ ತಂಡಗಳು, 103 ಟ್ರಾನ್ಸಿಟ್‌ ತಂಡಗಳು, 22 ಮೊಬೈಲ್‌ ತಂಡಗಳು, ಮೈಗ್ರಟರಿ ಮತ್ತು ಹೈರಿಸ್ಕ್ ಏರಿಯಾದಲ್ಲಿ 602 ತಂಡಗಳು, ಹೈರಿಸ್ಕ್ ಏರಿಯಾದಲ್ಲಿ ಮನೆ ಮನೆ ಭೇಟಿ ಮಾಡಲು 166 ತಂಡಗಳು ಸೇರಿದಂತೆ ಒಟ್ಟು 1845 ತಂಡಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

3812 ಜನ ಲಸಿಕೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು 602 ಕ್ಲಿಷ್ಟಕರ ಸ್ಥಳಗಳನ್ನು ಗುರುತಿಸಲಾಗಿದ್ದು ಅದಕ್ಕಾಗಿ 151 ಕ್ಲಿಷ್ಟಕರ ಸ್ಥಳಗಳಿಗೆ ಮನೆ ಭೇಟಿ ನೀಡುವ ತಂಡಗಳಿವೆ. ಇದಕ್ಕಾಗಿ 363 ಮೇಲುಸ್ತುವಾರಿ ತಂಡಗಳು ಮತ್ತು 8 ತಾಲೂಕು ಉಸ್ತುವಾರಿ ಅಧಿ ಕಾರಿಗಳನ್ನು ನಿಯೋಜಿಸಲಾಗಿದ್ದು. 396278 ಡೋಸ್‌ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿ ಡಾ| ಜನಾರ್ಧನ ಎಚ್‌.ಎಲ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್‌.ಬಸರೆಡ್ಡಿ, ಎಸ್‌ ಎಂಒ ಡಾ| ಆರ್‌.ಎಸ್‌. ಶ್ರೀಧರ್‌, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ| ಗುರುನಾಥ ಚವ್ಹಾಣ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ| ಇಂದ್ರಾಣಿ, ತಾಲೂಕು ಆರೋಗ್ಯಾ ಧಿಕಾರಿ ಡಾ| ಮೋಹನಕುಮಾರಿ, ರಾಮಯ್ಯ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ| ರಾಜಶೇಖರ, ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಈಶ್ವರ್‌ ದಾಸಪ್ಪನವರ್‌, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಗೌರಮ್ಮ, ಪ್ರೊರೊಸಿಸ್‌ ಕನ್ಸಲ್ಟಂಟ್‌ ಡಾ| ಆನಂದ, ವಿಹೆಚ್‌ಎಸ್‌ಎನ್‌ಸಿ ಕನ್ಸಲ್ಟಂಟ್‌ ರಾಘವೇಂದ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಶಾಂತಮ್ಮ ಮತ್ತಿತರರು ಇದ್ದರು.

ಓದಿ: ಕುರಿ ಕಾಳಗದಲ್ಲಿದೆ ಸ್ಪರ್ಧಾ ಮನೋಭಾವ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.