ಎರಡು ತಿಂಗಳ ಬಳಿಕ ರಸ್ತೆಗಿಳಿದ ಬಸ್
Team Udayavani, Jun 21, 2021, 9:08 PM IST
ಹೊಸಪೇಟೆ: ಸರ್ಕಾರ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಬೆನ್ನಲ್ಲಿಯೇ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದಿಂದ ಸೋಮವಾರ ಬಸ್ ಸಂಚಾರ ಆರಂಭವಾಗಲಿದೆ. ಮೊದಲ ಹಂತವಾಗಿ ನೂರು ಬಸ್ ಕಾರ್ಯಾಚರಣೆಗಾಗಿ ಭಾನುವಾರ ಸಿದ್ದತೆ ಮಾಡಿಕೊಂಡಿರುವ ಸಾರಿಗೆ ಸಂಸ್ಥೆ ಬೇಡಿಕೆ ಅನುಗುಣವಾಗಿ ಬಸ್ ಸಂಚಾರ ಹೆಚ್ಚಿಸಲು ಕ್ರಮ ಕೈಗೊಂಡಿದೆ. ತೆಲಂಗಾಣ, ಮಹಾರಾಷ್ಟ್ರ ಅಂತಾರಾಜ್ಯ ಹಾಗೂ ಅಂತರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ.
ಭಾನುವಾರದಿಂದಲೇ ಹೈದರಾಬಾದ್, ಬೆಂಗಳೂರು ಸೇರಿದಂತೆ ದೂರದ ಸ್ಥಳಗಳಿಗೆ ಆನ್‌ಲೈನ್ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಸ್ಯಾನಿಟೈಜೇಷನ್: ವಿಭಾಗದ ಎಲ್ಲ ಡಿಪೋ ಹಾಗೂ ಬಸ್ ನಿಲ್ದಾಣಗಳು ಸೇರಿದಂತೆ ಬಸ್ ಗಳಿಗೆ ಸ್ಯಾನಿಟೈಜೇಷನ್ ಮೂಲಕ ಶುಚಿತ್ವ ಕಾಪಾಡಿಕೊಂಡು ಬಸ್ ರಸ್ತೆಗೆ ಇಳಿಯಲಿವೆ. ವಿಭಾಗದ ವ್ಯಾಪ್ತಿಗೆ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಸಂಡೂರು ಹಾಗೂ ಹೊಸಪೇಟೆ ಬರುತ್ತವೆ. ಇದರಲ್ಲಿ ಚಾಲಕ ಮತ್ತು ನಿರ್ವಾಹಕ, ಆಡಳಿತ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ ಸೇರಿ ಒಟ್ಟು 1,885 ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಸ್ಪೀಪರ್ (ನಾನ್ ಎಸಿ, ಎಸಿ), ಸುಹಾಸ, ರಾಜಹಂಸ, ಸಾಮಾನ್ಯ ಬಸ್ ಸೇರಿದಂತೆ ಒಟ್ಟು 498 ಬಸ್ ಗಳು ಕಾರ್ಯನಿರ್ವಹಿಸುತ್ತಿವೆ.
ನಷ್ಟದ ಸುಳಿ: ಕೋವಿಡ್ ಮೊದಲ ಅಲೆಗೆ 51.83 ಕೋಟಿ ರೂ., ಎರಡನೇ ಅಲೆಗೆ 24.15 ಕೋಟಿ ರೂ. ಆದಾಯಕ್ಕೆ ಕೊಕ್ಕೆ ಬಿದ್ದಿದೆ. ಕೋವಿಡ್ ಒಟ್ಟು 76 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಇದು ಹೊಸಪೇಟೆ ವಿಭಾಗಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮುಷ್ಕರದಿಂದಲೂ ನಷ್ಟ: ವಿವಿಧ ಬೇಡಿಕೆಗಾಗಿ ಸಾರಿಗೆ ನೌಕರರು ಏ. 7ರಿಂದ 21 ರವರೆಗೆ ಪ್ರತಿಭಟನೆ ನಡೆಸಿದ್ದರು.
ಇದರಿಂದಾಗಿ 6.19 ಕೋಟಿ ರೂ. ನಷ್ಟ ಅನುಭವಿಸುವಂತಾಯಿತು. ಸಾರಿಗೆ ಸಂಸ್ಥೆಗೆ ಮೇಲಿಂದ ಮೇಲೆ ಪೆಟ್ಟುಗಳು ಬೀಳುತ್ತಿದ್ದು ನಷ್ಟದ ಹಾದಿಯನ್ನು ಹಿಡಿಯುವಂತಾಗಿದೆ. ವೇತನ ಕಡಿತ: ಹೊಸಪೇಟೆ ವಿಭಾಗದಲ್ಲಿ ಒಟ್ಟು 1,885 ಸಿಬ್ಬಂದಿ ಇದ್ದಾರೆ. ಈ ಪೈಕಿ 548 ಸಿಬ್ಬಂದಿ ಸಾರಿಗೆ ಮುಷ್ಕರ ಸೇರಿದಂತೆ ನಾನಾ ಕಾರಣಗಳಿಂದ ಗೈರು ಹಾಜರಿ ಹಾಕಿದ್ದರು. ಗೈರು ಹಾಜರಿಯನ್ನು ಹಾಕಿದರವರನ್ನು ಬಿಟ್ಟು ಉಳಿದ ಸಿಬ್ಬಂದಿಗೆ ಏಪ್ರಿಲ್ ತಿಂಗಳ ಶೇ. 70ರಷ್ಟು ವೇತನವನ್ನು ನೀಡಲಾಗಿದೆ. ಮೇ ತಿಂಗಳಿನ ಪೂರ್ಣ ಪ್ರಮಾಣದ ವೇತನವನ್ನು ಪಾವತಿಸಲಾಗಿದೆ.
ಕೋವಿಡ್ ಲಸಿಕೆಗೆ ಒತ್ತು: ಹೊಸಪೇಟೆ ವಿಭಾಗದ ಸಿಬ್ಬಂದಿಗೆ ಲಸಿಕೆ ಹಾಕಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. 1885 ಸಿಬ್ಬಂದಿ ಪೈಕಿ ಈಗಾಗಲೇ 1680 ಜನರಿಗೆ ಮೊದಲನೇ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. 122 ಜನರಿಗೆ ಎರಡನೇ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.