![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 24, 2021, 4:35 PM IST
ಬಳ್ಳಾರಿ: ಎಸ್‌ಟಿ ಸಮುದಾಯಕ್ಕೆ ಮೀಸಲಾತಿಯನ್ನು ಶೇ. 3.5ರಿಂದ ಶೇ. 7.5ಕ್ಕೆ ಹೆಚ್ಚಿಸಲು ನಾನು ಬದ್ಧನಾಗಿರುವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ರಾಜ್ಯ ಎಸ್ಟಿ (ವಾಲ್ಮೀಕಿ) ನೌಕರರ ಪ್ರಥಮ ಜಿಲ್ಲಾ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಧಿ ಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದೇನೆ. ಹೀಗಾಗಿ ಎಸ್‌ಟಿ ಮೀಸಲಾತಿಯನ್ನು ಶೇ. 3.5ರಿಂದ ಶೇ. 7.5ಕ್ಕೆ ಹೆಚ್ಚಿಸಲು ನಾನು ಬದ್ಧನಾಗಿರುವೆ. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಆದ್ಯತೆಗೆ ಅನುವಾಗುವಂತೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದೆ. ಈ ವರೆಗಿನ
ಸರ್ಕಾರಗಳು ಈ ಬೇಡಿಕೆಯನ್ನು ಈಡೇರಿಸಿಲ್ಲ. ಆದರೆ ನಾನು ಈಗ ಸಮಾಜ ಕಲ್ಯಾಣ ಸಚಿವರಾಗಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹಕಾರದಿಂದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲುಬದ್ಧನಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು.
ಓದಿ : ಎನ್‌ಸಿಸಿ ಕೆಡೆಟ್‌ಗಳಿಗೆ ಶಸ್ತ್ರಾಸ್ತ್ರ ಮಾಹಿತಿ
ಇದೇ ವೇಳೆ ಸಮುದಾಯದ ಗುರುಗಳಾದ ರಾಜನಹಳ್ಳಿ ಪೀಠದ ಅಭಿವೃದ್ಧಿ ಕಾರ್ಯಕ್ರಮಗಳಿಗೆ 10 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ
ತಿಳಿಸಿದರು.
ಅಲ್ಲದೇ ವಾಲ್ಮೀಕಿ ಸಮುದಾಯದ ರಾಜ್ಯದ 13 ಮಠಗಳಿಗೆ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿರುವುದಾಗಿ ತಿಳಿಸಿದರು. ನಗರದ ವಿಜಯನಗರ ಶ್ರೀ ಕೃಷ್ಣವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠಕ್ಕೆ 20 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ಸಮಾರಂಭದಲ್ಲಿ ಶಾಸಕರಾದ ಈ. ತುಕಾರಾಂ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಇದ್ದರು.
ಓದಿ : ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.