ಅಧಿಕಾರದಲ್ಲಿದ್ದವರಿಗೆ ತಪ್ಪುತಪ್ಪಾಗಿ ಕಾಣೋದೇ ಇಲ್ಲ


Team Udayavani, Aug 23, 2021, 7:16 PM IST

23-13

ಬಳ್ಳಾರಿ: ಪ್ರಸ್ತುತ ದಿನಗಳಲ್ಲಿ ಇಂದು ಅಧಿ ಕಾರದಲ್ಲಿರುವವರಿಗೆ ತಪ್ಪು ಮಾಡುವುದೇನೂ ತಪ್ಪಲ್ಲ ಎಂಬ ಭಾವನೆಯಿದೆ. ಅವರಲ್ಲಿನ ಸ್ವಾರ್ಥ ಮತ್ತು ದುರಾಸೆಗಳಿಂದಾಗಿ ಭ್ರಷ್ಟಾಚಾರ ಲಂಚಗುಳಿತನ ಇಂದು ಈ ಹಂತ ತಲುಪಲು ಕಾರಣವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಾಧಿಧೀಶ ಎನ್‌. ಸಂತೋಷ್‌ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.

ಎಐಡಿವೈಒ ಮತ್ತು ಅಖೀಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿ ವತಿಯಿಂದ ಕೆಪಿಎಸ್‌ಸಿ ಸ್ವತ್ಛಗೊಳಿಸಿ- ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಿ ಎಂಬ ವಿಷಯದ ಕುರಿತು ಭಾನುವಾರ ಹಮ್ಮಿಕೊಳ್ಳಲಾಗಿದ್ದ ವೆಬಿನಾರ್‌ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಿನ ಕೆಪಿಎಸ್‌ಸಿ ಅಧ್ಯಕ್ಷರ ನೇಮಕವು ಮೇಲ್ನೋಟಕ್ಕೆ ಕಾನೂನುಬಾಹಿರವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂತಹ ಉಲ್ಲಂಘನೆಗಳು ಸಾಮಾನ್ಯವಾಗಿ ಬಿಟ್ಟಿವೆ. ಜೈಲಿಗೆ ಹೋಗಿ ಜಾಮೀನು ಕೊಟ್ಟು ಬಿಡುಗಡೆಗೊಂಡವರಿಗೆ ಜೈಕಾರ ಹಾಕುವ ಜನ ನಮ್ಮಲ್ಲಿದ್ದಾರೆ ಎಂದರು.

ಅಪರಾಧ ಮಾಡಿದವರಿಗೆ ಶಿಕ್ಷೆಯ ಅಂತಿಮ ತೀರ್ಪು ಹೊರಬೀಳಲು ಐವತ್ತು ವರ್ಷಗಳೇ ಆಗುತ್ತಿವೆ. ಶಿಕ್ಷೆಯ ಭಯವಿಲ್ಲದ ಭ್ರಷ್ಟರು ಅವ್ಯಾಹತವಾಗಿ ಹಗರಣಗಳನ್ನು ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಹಗರಣಗಳ ಮೊತ್ತ ಏರಿಕೆಯಾಗುತ್ತಿದೆ. 1954ರಲ್ಲಿ 52 ಲಕ್ಷ ರೂಪಾಯಿಗಳ ಜೀಪು ಹಗರಣ ನಡೆದರೆ, 1984ರ ಬೊಫೋರ್ಸ್‌ ಹಗರಣದಲ್ಲಿ ದೇಶಕ್ಕೆ 64 ಕೋಟಿ ರೂ.ಗಳ ನಷ್ಟವಾಗಿತ್ತು. 2010ರ ಕಲ್ಲಿದ್ದಲು ಹಗರಣದಲ್ಲಿ ಅದು 1,88,000 ಕೋಟಿ ರೂ. ಆಯಿತು. ಆಡಳಿತದಲ್ಲಿರುವವರ ಸ್ವಾರ್ಥ-ದುರಾಸೆಗಳು ಇವುಗಳಿಗೆಲ್ಲ ಕಾರಣ ಎಂದರು.

ಎಐಡಿವೈಒ ಅಖೀಲ ಭಾರತ ಅಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, ಸಮಾಜದಲ್ಲಿನ ಭ್ರಷ್ಟಾಚಾರವನ್ನು ಸ್ವತ್ಛಗೊಳಿಸಲು ಇಂದಿನ ಯುವ ಸಮುದಾಯ ಮುಂದಾಗಬೇಕು. ಆಗ ಮಾತ್ರ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಸಿಗಲು ಸಾಧ್ಯ ಎಂದರು. ದೇಶದಲ್ಲಿ ಸುಮಾರು 75 ಕೋಟಿ ಯುವ ಜನರಿದ್ದಾರೆ. ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 70ರಷ್ಟು ಜನ 15ರಿಂದ 59ರ ವಯೋಮಾನದಲ್ಲಿದ್ದಾರೆ. ದುಡಿಯಲು ಸಮರ್ಥವಾದ ಹೇರಳವಾದ ಮಾನವ ಸಂಪನ್ಮೂಲ ನಮ್ಮಲ್ಲಿದೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳುವ ಇರಾದೆ ನಮ್ಮ ಆಳ್ವಿಕರಿಗಿಲ್ಲ. ಅವರ ಪೊಳ್ಳು ಭರವಸೆಗಳನ್ನು ನಂಬಿ ಕೂತರೆ ಯುವಕರಿಗೆ ಉದ್ಯೋಗ ಸಿಗುವುದಿಲ್ಲ. ಅವರು ಉದ್ಯೋಗಕ್ಕಾಗಿ ಸಮರಶೀಲ ಹೋರಾಟ ಕಟ್ಟುವುದು ಇಂದಿನ ಅವಶ್ಯ ಎಂದರು.

ಅರ್ಹರನ್ನು ಉದ್ಯೋಗಕ್ಕೆ ಆಯ್ಕೆ ಮಾಡಬೇಕಾದ ಕೆಪಿಎಸ್‌ಸಿಯೇ ಇಂದು ಭ್ರಷ್ಟಾಚಾರದಲ್ಲಿ ಮುಳುಗಿರುವುದು ಜಗಜ್ಜಾಹೀರಾಗಿದೆ. ಸರ್ಕಾರದ ಮುಖ್ಯಸ್ಥರೇ ಇಂದು ತಮ್ಮ ದಲ್ಲಾಳಿಗಳನ್ನು ಕೆಪಿಎಸ್‌ಸಿಯ ಸದಸ್ಯರಾಗಿ ಮತ್ತು ಅಧ್ಯಕ್ಷರಾಗಿ ನೇಮಕ ಮಾಡುತ್ತಿದ್ದಾರೆ. ತನ್ಮೂಲಕ ಉದ್ಯೋಗಾಕಾಂಕ್ಷಿಗಳಿಂದ ಹಣ ದೋಚುವ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಅಜೀಂ ಪ್ರೇಮ್‌ಜಿ ಫೌಂಡೇಷನ್‌ನ ಅಧ್ಯಯನದ ವರದಿಯ ಪ್ರಕಾರ ಕೇವಲ 54,000 ಕೋಟಿ ರೂ.ಗಳನ್ನು ಖರ್ಚು ಮಾಡಿದರೆ ದೇಶದ ಎಲ್ಲ ನಗರಗಳಲ್ಲಿರುವ ನಿರುದ್ಯೋಗಿಗಳಿಗೆ ಮಾಸಿಕ 15,000ರೂ. ವೇತನದೊಂದಿಗೆ 8 ತಿಂಗಳು ಉದ್ಯೋಗ ಕೊಡಬಹುದು. ಹಾಗೆಯೇ 1 ಲಕ್ಷ ಕೋಟಿ ರೂ. ಖರ್ಚು ಮಾಡಿದರೆ ಗ್ರಾಮೀಣ ಯುವಜನರಿಗೆ ವರ್ಷ ಪೂರ್ತಿ ಕೆಲಸ ಕೊಡಬಹುದು. ಆದರೆ, ಸರ್ಕಾರ ಇದನ್ನು ಮಾಡುತ್ತಿಲ್ಲ. ಕೇವಲ ಇಂಧನದ ಮೇಲಿನ ತೆರಿಗೆಯಿಂದಲೇ ವರ್ಷಕ್ಕೆ 3,36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಸಿಗುತ್ತಿದೆ.

ಅದರಲ್ಲಿ ಅರ್ಧದಷ್ಟು ಖರ್ಚು ಮಾಡಿದರೂ ಎಲ್ಲ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಬಹುದು. ಆದರೆ ಸರ್ಕಾರಗಳು ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕೆಲವೇ ಬಂಡವಾಳಗಾರರ ಸೇವೆಗೆ ನಿಂತಿವೆ ಎಂದು ಆಪಾದಿಸಿದರು. ಅಧ್ಯಕ್ಷತೆ ವಹಿಸಿದ್ದ ಎಐಡಿವೈಒ ರಾಜ್ಯಾಧ್ಯಕ್ಷೆ ಎಂ.ಉಮಾದೇವಿ, ನಿರುದ್ಯೋಗಿ ಯುವಜನ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಶರಣಪ್ಪ ಉದ್ಭಾಳ್‌ ಮಾತನಾಡಿದರು. ಸಮಿತಿಯ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಕಾರ್ಯಕ್ರಮ ನಿರ್ವಹಿಸಿದರು. ವೆಬಿನಾರ್‌ನಲ್ಲಿ ನೂರಾರು ಯುವಜನರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.