ಬಾಲ್ಯವಿವಾಹಗಳಿಗೆ ತಡೆ
Team Udayavani, Jun 27, 2020, 9:19 AM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುನ್ನಾ ದಿನ ವಿದ್ಯಾರ್ಥಿನಿಯ ಬಾಲ್ಯವಿವಾಹ ತಡೆದಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ಮತ್ತೂಬ್ಬ ವಿದ್ಯಾರ್ಥಿನಿ ಸೇರಿ ಮೂರು ಬಾಲ್ಯ ವಿವಾಹಗಳನ್ನು ಶುಕ್ರವಾರ ತಡೆದಿದ್ದು, ಈ ಮೂಲಕ ಎರಡು ದಿನದಲ್ಲಿ ನಾಲ್ಕು ಬಾಲ್ಯವಿವಾಹಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಹೊರವಲಯದ ಅಲ್ಲಿಪುರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ (16) ಶುಕ್ರವಾರ ನಡೆಯಲಿದ್ದ ಬಾಲ್ಯವಿವಾಹವನ್ನು ತಡೆದು ಪರೀಕ್ಷೆ ಬರೆಯಲು ಅನುವು ಮಾಡಲಾಗಿತ್ತು. ಕಂಪ್ಲಿ ಸಮೀಪದ ಮುದ್ದಾಪುರ ಗ್ರಾಮದ ಸಂಬಂಧಿಕರ ಯುವಕನೊಂದಿಗೆ ನಿಶ್ಚಯಿಸಿದ್ದ ಮದುವೆಯನ್ನು ತಡೆದು ವಿದ್ಯಾರ್ಥಿನಿಯನ್ನು ರಕ್ಷಿಸಿ, ಎರಡು ದಿನ ಬಾಲಮಂದಿರದಲ್ಲಿ ಆಶ್ರಯ ನೀಡಿದ್ದರು. ಪರೀಕ್ಷಾ ಸಿದ್ಧತೆಗೆಂದು ವಿದ್ಯಾರ್ಥಿನಿಯನ್ನು ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡು ಶುಕ್ರವಾರ ಮನೆಗೆ ಕಳಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಲಾಲಪ್ಪ ತಿಳಿಸಿದರು.
ಇಲ್ಲಿನ ವಿನಾಯಕ ನಗರದಲ್ಲಿ 14 ವರ್ಷದ ಮತ್ತು ಗುಗ್ಗರಹಟ್ಟಿ ಪ್ರದೇಶದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ (17) ಸಂಬಂಧಿಕರ ಯುವಕನೊಂದಿಗೆ ಹಾಗೂ 16 ವರ್ಷದ ಬಾಲಕಿಯರಿಗೆ ಶುಕ್ರವಾರ ನಡೆಯಲಿದ್ದ ಮೂರು ಬಾಲ್ಯ ವಿವಾಹಗಳನ್ನು ಶುಕ್ರವಾರ ತಡೆದು ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ ಎಂದು ಸಿಡಿಪಿಒ ಜಲಾಲಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.