ಸರ್ವಜ್ಞರ ಆದರ್ಶ ಅಳವಡಿಸಿಕೊಳ್ಳಿ
ಕುಂಬಾರ ಸಮುದಾಯ ಆರ್ಥಿಕ-ಸಾಮಾಜಿಕವಾಗಿ ಸದೃಢರಾಗಲಿ: ನಾಗರಾಜ್
Team Udayavani, Feb 21, 2020, 2:32 PM IST
ಬಳ್ಳಾರಿ: ಶರಣರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ವ್ಯಕ್ತಿತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಯು. ನಾಗರಾಜ್ ಹೇಳಿದರು.
ನಗರದ ಜೋಳದರಾಶಿ ಡಾ| ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞರ 500ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ಸಾಹಿತ್ಯದಲ್ಲಿ ತ್ರಿಪದಿಗಳ ಬ್ರಹ್ಮ ಸರ್ವಜ್ಞರ ವಿಚಾರಗಳು, ಅವರ ತತ್ವಗಳನ್ನು ಹಾಗೂ ಜೀವನಶೈಲಿ ಮಾರ್ಗಗಳನ್ನು ತಿಳಿದು ಅವುಗಳನ್ನು ಮಕ್ಕಳಲ್ಲಿ ಅಳವಡಿಸುವ ಕಾರ್ಯವನ್ನು ಪೋಷಕರು ಮಾಡಬೇಕು. ಕುಂಬಾರ ಸಮುದಾಯವು ತನ್ನ ಏಳಿಗೆಗಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಹಾಗೂ ಶರಣರ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಅವರು ಹೇಳಿದರು.
ಸಂತಕವಿ ಸರ್ವಜ್ಞ ಕುರಿತು ದಾವಣಗೆರೆಯ ಹಿರಿಯ ಸಾಹಿತಿ ಹಾಗೂ ಖ್ಯಾತ ಸಂಶೋಧಕ ಮಂಜಪ್ಪ ಕುಂಬಾರ ವಿಶೇಷ ಉಪನ್ಯಾಸ ನೀಡಿದರು. ಕೆ.ದೊಡ್ಡಬಸಪ್ಪ ಅವರ ವಚನ ಗಾಯನ ಜನರ ಗಮನಸೆಳೆಯಿತು. ಸಂತಕವಿ ಸರ್ವಜ್ಞರ ಜೀವನ-ಸಾಧನೆಯನ್ನು ಬಿಂಬಿಸುವ ಕಿರು ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ಗಣ್ಯರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣವರ, ಜಿಲ್ಲಾ ಕುಂಬಾರರ ಶಾಲಿವಾಹನ ಸಂಘದ ಜಿಲ್ಲಾಧ್ಯಕ್ಷ ಕೆ. ರಂಗಸ್ವಾಮಿ, ಕುಂಬಾರ ಸಂಘದ ಅಧ್ಯಕ್ಷ ಕೆ. ಸಿದ್ದಪ್ಪ, ಕುಂಬಾರ ಸಮಾಜದ ಮುಖಂಡ ಕೆ.ಯರ್ರಿಸ್ವಾಮಿ, ಕುಂಬಾರ ಸಮುದಾಯದ ಹಾಗೂ ವಿವಿಧ ಸಮುದಾಯಗಳ ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಗಮನ ಸೆಳೆದ ಮೆರವಣಿಗೆ: ಸಂತಕವಿ ಸರ್ವಜ್ಞ ಜಯಂತಿ ಅಂಗವಾಗಿ ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಸರ್ವಜ್ಞರ ಬೃಹತ್ ಭಾವಚಿತ್ರದ ಮೆರವಣಿಗೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ಕೆ. ರಂಗಣ್ಣವರ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಹಾಗೂ ವೇಷಧಾರಿಗಳ ಪ್ರದರ್ಶನಗಳು ಜನರ ಗಮನಸೆಳೆದವು. ಮೆರವಣಿಗೆಯಲ್ಲಿ ಜಿಲ್ಲಾ ಕುಂಬಾರ ಶಾಲಿವಾಹನ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು, ಕುಂಬಾರ ಸಮುದಾಯದ ಮುಖಂಡರು, ಜನರು ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಮತ್ತು ಇತರೆ ಗಣ್ಯವ್ಯಕ್ತಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.