Bellary; ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ 10 ವರ್ಷ ಕಠಿಣ ಸಜೆ
Team Udayavani, Aug 20, 2024, 9:28 PM IST
ಬಳ್ಳಾರಿ: ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಜಿಲ್ಲೆಯ ಸಿರುಗುಪ್ಪ ತಾಲೂಕು ಬೈರಗಾಮ ದಿನ್ನಿ ಗ್ರಾಮದ ನಿವಾಸಿ ಕಾಳಪ್ಪ ಎಂಬ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆಯೊಂದಿಗೆ 1.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಮಂಗಳವಾರ ತೀರ್ಪು ನೀಡಿದ್ದಾರೆ.
ಹಾಳ್‌ಮುರಣಿ ಗ್ರಾಮದ ಸರ್ವೆ ನಂ.37.ಬಿ/21.64 ಎಕರೆ ಜಮೀನಿನಲ್ಲಿ ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ 54 ಗಾಂಜಾ ಗಿಡಗಳನ್ನು ಬೆಳೆಸಿದ್ದಾನೆ. (31.700 ಕಿ.ಗ್ರಾ) ಈ ಕುರಿತು ಮಾಹಿತಿ ತಿಳಿದ ಉಪ ನಿರೀಕ್ಷಕ ಶಂಕರ್ ಗುಡದರ್, ಗಾಂಜಾ ಗಿಡಗಳನ್ನು ಜಪ್ತು ಪಡಿಸಿಕೊಂಡು ಆರೋಪಿ ಕಾಳಪ್ಪನ ವಿರುದ್ಧ ನಿಯಮ ಉಲ್ಲಂಘನೆ ಸೇರಿ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಅಬಕಾರಿ ಉಪನಿರೀಕ್ಷಕರಾದ ಆರ್.ಗಂಗಾಧರ, ಮೌನೇಶ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು, 6 ಜನ ಸಾಕ್ಷಿದಾರರನ್ನು ವಿಚಾರಿಸಿ, 24 ದಾಖಲೆಗಳನ್ನು ಗುರುತಿಸಿ, ವಾದ ಪ್ರತಿವಾವನ್ನು ಆಲಿಸಿ, ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ಕಾಳಪ್ಪನಿಗೆ 10 ವರ್ಷ ಕಠಿಣ ಶಿಕ್ಷೆ, 1.50 ಲಕ್ಷ ರೂ. ಹಣ ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.