ವಲಸಿಗರಿಗೆ 2 ತಿಂಗಳ ಉಚಿತ ಪಡಿತರ
Team Udayavani, May 23, 2020, 6:23 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ವಲಸಿಗರಿಗೆ ಆಹಾರ ಭದ್ರತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಪ್ರತಿ ವಲಸಿಗರಿಗೆ ಅಕ್ಕಿ ಮತ್ತು ಕಡಲೆ ಕಾಳನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ವಲಸಿಗರು ದೇಶದ ಯಾವುದೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರದ ಹಾಗೂ ಪಡಿತರ ಪಡೆಯದ ವಲಸಿಗರಿಗೆ ಈ ಯೋಜನೆ ಅನ್ವಯಿಸುತ್ತದೆ. 2020ರ ಮೇ ಹಾಗೂ ಜೂನ್ ಮಾಹೆಯಲ್ಲಿ ಪ್ರತಿ ವಲಸಿಗರಿಗೆ ತಲಾ 5ಕೆ.ಜಿ ಅಕ್ಕಿ ಹಾಗೂ ಜೂನ್ ತಿಂಗಳಲ್ಲಿ ಪ್ರತಿ ಕುಟುಂಬಕ್ಕೆ ಕಡಲೆ ಕಾಳು ಸಹ ಉಚಿತವಾಗಿ ವಿತರಿಸಲಾಗುವುದು. ಮೇ ತಿಂಗಳಲ್ಲಿ ಪಡಿತರ ಪಡೆಯಲಾಗದ ವಲಸಿಗರಿಗೆ ಜೂನ್ ತಿಂಗಳಲ್ಲಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ಸೇರಿಸಿ ಪ್ರತಿಯೊಬ್ಬರಿಗೆ 10ಕೆ.ಜಿ ಅಕ್ಕಿ ಮತ್ತು ಕಡಲೆಕಾಳು ಸೇರಿಸಿ ನೀಡಲಾಗುವುದು. ಮೇ ತಿಂಗಳ ಪಡಿತರವನ್ನು ಮೇ 26 ರಿಂದ ಮೇ 31 ರವರೆಗೆ ಹಾಗೂ ಜೂನ್‌ತಿಂಗಳ ಪಡಿತರವನ್ನು ಜೂ.01 ರಿಂದ ಜೂ.10 ರವರೆಗೆ ವಿತರಿಸಲಾಗುವುದು. ವಲಸಿಗರಿಗೆ ತಾಲೂಕಿನ ನಗರ, ಪಟ್ಟಣ, ಹೋಬಳಿ, ಪಂಚಾಯತ್ ಮಟ್ಟದ ಆಯ್ದ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ತಾಲೂಕಿನ ತಹಶೀಲ್ದಾರ್ ಕಚೇರಿ (ಆಹಾರ ವಿಭಾಗ) ಹಾಗೂ ಕಾರ್ಮಿಕ ಇಲಾಖೆ ಸಂಪರ್ಕಿಸಬಹುದು.
ಈ ಯೋಜನೆ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಉಚಿತ ಸಹಾಯವಾಣಿ ಸಂ. 1967 ಅಥವಾ ಬಳ್ಳಾರಿ ಆಹಾರ ಇಲಾಖೆ ದೂ.ಸಂ.08392-272557 ಅಥವಾ ಜಿಲ್ಲಾ ಕೋವಿಡ್-19 ನಿಯಂತ್ರಣ ಕೊಠಡಿ ದೂ.ಸಂ. 08392-277102 / 08392-277103 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.