ಕಾಯಕವನ್ನೇ ಉಸಿರಾಗಿಸಿಕೊಂಡಿದ್ದ ನಿಜಶರಣರು
Team Udayavani, Jan 24, 2020, 6:30 PM IST
ಬಳ್ಳಾರಿ: ಗಂಡುಗಲಿ ಶರಣ ಎಂದರೇ ಅಂಬಿಗರ ಚೌಡಯ್ಯ. ಯಾವುದನ್ನು ಕ್ಷಣ ಮಾತ್ರಕ್ಕೆ ಒಪ್ಪಿಕೊಳ್ಳದೇ ಸತ್ಯದ ಪರವಾಗಿ ಸದಾ ನಿಂತವರು. ಅವರಲ್ಲಿದ್ದ ಜಾಣ್ಮೆ ಅಪಾರ. ಕಾಯಕವನ್ನೇ ಉಸಿರಾಗಿಸಿಕೊಂಡಿದ್ದ ಅನುಭಾವ ಜೀವಿ ಅವರಾಗಿದ್ದರು ಎಂದು ಶರಣ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಅವರು ಹೇಳಿದರು.
ನಗರದ ಡಾ| ಜೋಳದಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಅಂಬಿಗರ ಚೌಡಯ್ಯ ಅವರು ಸಿದ್ಧಿಸಾಧಕ ನಿಜಶರಣರಾಗಿದ್ದರು. ಮೌಡ್ಯತೆ, ಕಂದಾಚಾರ, ಸಾಮಾಜಿಕ ಸಮಸ್ಯೆಗಳಿಗೆ ತಮ್ಮ ವಚನಗಳ ಮೂಲಕವೇ ಛಾಟಿ ಬೀಸಿರುವುದನ್ನು ಗಮನಿಸಬಹುದಾಗಿದೆ ಎಂದ ಅವರು, ನಿಜಶರಣ ಅಂಬಿಗರ ಚೌಡಯ್ಯ ಅವರ ಜೀವನ, ಹೋರಾಟ ಮತ್ತು ಅವರ ವಚನಗಳಲ್ಲಿದ್ದ ಸಾಮಾಜಿಕ ಕಳಕಳಿಯನ್ನು ವಿವರಿಸಿದರು.
ಗಂಗಾಮತಸ್ಥರ ಸಂಘದ ರಾಜ್ಯಾಧ್ಯಕ್ಷ ಬಿ.ಮೌಲಾಲಿ ಮಾತನಾಡಿ, ಗಂಗಾಮತಸ್ಥ ಸಮಾಜದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹತ್ತು ಎಕರೆ ಜಾಗದಲ್ಲಿ ಶಾಲಾ, ಕಾಲೇಜುಗಳ ನಿರ್ಮಾಣ ಮಾಡಲಾಗುವುದು. ದೇಶದ 14 ರಾಜ್ಯದಲ್ಲಿ ನಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಈಗಾಗಲೇ ಸೇರಿಸಲಾಗಿದೆ. ನಮ್ಮ ರಾಜ್ಯದಲ್ಲೂ ಸೇರಿಸುವ ಭರವಸೆ ಇದ್ದು, ಇದಕ್ಕಾಗಿ ಸಂಘಟಿತ ಹೋರಾಟ ಅಗತ್ಯವಿದೆ ಎಂದರು.
ಅಂಬಿಗರ ಚೌಡಯ್ಯ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು. ಶೈಕ್ಷಣಿಕವಾಗಿ ಮುಂದುವರೆಯಲು ಗಂಗಾಮತಸ್ಥ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದ ಅವರು, ರಾಜ್ಯದ ಎ ಜಿಲ್ಲೆಗಳಲ್ಲಿ ಅಂಬಿಗರ ಚೌಡಯ್ಯ ಸ್ಮಾರಕ ಭವನ ನಿರ್ಮಾಣ ಮಾಡಬೇಕು. ಅದಕ್ಕಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಮಂಗಳೂರು ಸೇರಿ ರಾಜ್ಯದ ನಾಲ್ಕು ವಲಯಗಳಲ್ಲಿ ತಲಾ 10 ಎಕರೆ ಜಾಗ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಬೃಹತ್ ಮೆರವಣಿಗೆ: ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ತ ನಗರದ ಮುನಿಸಿಪಲ್ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಬೃಹತ್ ಮೆರವಣಿಗೆಗೆ ಅಪರ ಜಿಲ್ಲಾ ಧಿಕಾರಿ ಮಂಜುನಾಥ್ ಚಾಲನೆ ನೀಡಿದರು. ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ, ಎಚ್.ಆರ್. ಗವಿಯಪ್ಪ ವೃತ್ತ ಮೂಲಕ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಂಗಾಮತಸ್ಥರ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ, ಉಪಾಧ್ಯಕ್ಷೆ ಪದ್ಮಾವತಿ, ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿ ಕಾರಿ ಪಂಪಾಪತಿ, ಹನುಮಂತಪ್ಪ, ಚೋಮಾರಿ ಹುಲುಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ್ ಕೆ.ರಂಗಣ್ಣವರ್ ಸೇರಿದಂತೆ ಸಮಾಜದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.