ಆರೋಗ್ಯಮೇಳ-ಜಾಗೃತಿ ಆಯೋಜನೆ ಅಚ್ಚುಕಟ್ಟಾಗಲಿ
ಅಧಿಕಾರಿಗಳಿಗೆ ಜಿಪಂ ಸಿಇಒ ನಿತೀಶ್ ತಾಕೀತು
Team Udayavani, Mar 1, 2020, 4:44 PM IST
ಬಳ್ಳಾರಿ: ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಹಮ್ಮಿಕೊಳ್ಳುವ ಆರೋಗ್ಯ ಮೇಳವನ್ನು ಅಚ್ಚು ಕಟ್ಟಾಗಿ ನಿರ್ವಹಿಸಬೇಕು. ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಂಡು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಸೇವಾ ಸೌಲಭ್ಯಗಳ ಬಗ್ಗೆ ವ್ಯಾಪಕ ಮಾಹಿತಿಯನ್ನು ತಪ್ಪದೇ ನೀಡಬೇಕು ಎಂದು ಜಿಪಂ ಸಿಇಒ ಕೆ.ನಿತೀಶ್ ತಾಕೀತು ಮಾಡಿದರು.
ನಗರದ ಜಿಪಂ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಮತ್ತು ಬುಡಕಟ್ಟು ಜನಾಂಗದ ಜನಸಂಖ್ಯೆ ಜಾಸ್ತಿ ಇರುವ ಬಳ್ಳಾರಿ ಜಿಲ್ಲೆಯ 7 ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಳ್ಳಲು ಜಿಲ್ಲಾಮಟ್ಟದ ಐಇಸಿ ಅನುಷ್ಠಾನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಬಳ್ಳಾರಿ ಗ್ರಾಮೀಣ, ಸಿರಗುಪ್ಪ, ಸಂಡೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಉಚಿತ ಆರೋಗ್ಯ ಮೇಳವನ್ನು ಹಮ್ಮಿಕೊಂಡು ನುರಿತ ತಜ್ಞ ವೈದ್ಯರನ್ನು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಯಶಸ್ವಿಗೊಳಿಸಬೇಕು. ವಿಧಾನಸಭಾ ಸದಸ್ಯರನ್ನು ಭೇಟಿ ಮಾಡಿ ಮಾರ್ಚ್ 15ರೊಳಗೆ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳುವ ಅಗತ್ಯತೆಯನ್ನು ತಿಳಿಸಿ ಮೇಳವನ್ನು ಯಶಸ್ವಿಗೊಳಿಸಬೇಕು ಎಂದರು.
ಆರೋಗ್ಯ ಮೇಳದ ವೇಳೆ ಆರೋಗ್ಯ ಜಾಗೃತಿಗಾಗಿ ವಸ್ತುಪ್ರದರ್ಶನ, ಜಾನಪದ ಕಲಾತಂಡದ ಮೂಲಕ ಆರೋಗ್ಯ ಜಾಗೃತಿ ಹಾಗೂ ಇನ್ನಿತರ ವಿದ್ಯುನ್ಮಾನಗಳಿಂದ ಜಾಗೃತಿ ನೀಡಬೇಕು. ಶಿಬಿರದ ವೇಳೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿ ಸೌಲಭ್ಯ ಪಡೆಯುವಂತೆ ವ್ಯಾಪಕ ಪ್ರಚಾರ ಕೈಗೊಂಡು ಶಿಬಿರವನ್ನು ಯಶಸ್ವಿಗೊಳಿಸಲು ಪೂರ್ವದಲ್ಲಿಯೇ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಮೇಳಕ್ಕೆ ಶಾಸಕರೊಂದಿಗೆ ಇತರೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ತಪ್ಪದೇ ಆಹ್ವಾನಿಸಲು ಸೂಚಿಸಿದರು.
175 ತಾಯಂದಿರ ಸಭೆಯೊಂದಿಗೆ ಪೌಷ್ಠಿಕ ಆಹಾರ ಶಿಬಿರಗಳನ್ನು ಆಯೋಜಿಸಿ ಗರ್ಭಿಣಿಯರು, ಬಾಣಂತಿಯರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳನ್ನು ಸೇರಿಸಿ ಸ್ಥಳೀಯವಾಗಿ ದೊರೆಯುವ ಪೌಷ್ಠಿಕ ಆಹಾರಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಪೌಷ್ಠಿಕ ಆಹಾರದ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸುವುದು ಮತ್ತು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ, ಗರ್ಭಿಣಿ ಆರೈಕೆ, ಆಸ್ಪತ್ರೆ ಹೆರಿಗೆ, ನವಜಾತ ಶಿಶುವಿನ ಆರೈಕೆ, ತಾಯಿ ಎದೆ ಹಾಲಿನ ಮಹತ್ವ, ಕಾಂಗರೂ ಮದರ್‌ಕೇರ್, ಬಾಣಂತಿ ಆರೈಕೆ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಪೌಷ್ಠಿಕ ಆಹಾರ, ಕುಟುಂಬ ಕಲ್ಯಾಣ ವಿಧಾನಗಳು, ವೈಯುಕ್ತಿಕ ಸ್ವಚ್ಛತೆ, ಹೆಣ್ಣುಮಗುವಿನ ಮಹತ್ವ, ಹೆಣ್ಣು ಮಗುವನ್ನು ಉಳಿಸಿ-ಹೆಣ್ಣು ಮಗುವನ್ನು ಓದಿಸಿ ಹಾಗೂ ಇತರೆ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು ಎಂದರು.
175 ಗ್ರಾಮಗಳಲ್ಲಿ 175 ಗೋಡೆ ಬರಹಗಳನ್ನು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25ರಂತೆ ಅತ್ಯಂತ ಅಚ್ಚುಕಟ್ಟಾಗಿ ಸರ್ಕಾರದಿಂದ ಸೂಚಿಸಿದ ಆರೋಗ್ಯ ಇಲಾಖೆಯ ವಿಷಯಗಳ ವಿವರಗಳನ್ನು ಸಾರ್ವಜನಿಕರಿಗೆ ಕಾಣುವ ಸ್ಥಳಗಳಲ್ಲಿ ಬರೆಸಲು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಚ್.ಎಲ್. ಜನಾರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಜಿಲ್ಲಾ ಮಲೇರಿಯ ಅಧಿಕಾರಿ ಡಾ| ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ವಿಜಯಲಕ್ಷ್ಮೀ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಐಸಿಡಿಎಸ್ ಮೇಲ್ವಿಚಾರಕರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.