ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಸಿಬ್ಬಂದಿ ಬೃಹತ್ ಹೋರಾಟ
Team Udayavani, Feb 1, 2020, 1:04 PM IST
ಬಳ್ಳಾರಿ: ಬ್ಯಾಂಕ್‌ಗಳ ಉದ್ಯೋಗಿ ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬ್ಯಾಂಕ್‌ಗಳ ಸಂಘ (ಯುಎಫ್‌ಬಿಯು)ದಿಂದ ಜ. 31ರಿಂದ ಎರಡು ದಿನಗಳ ಕಾಲ ಬ್ಯಾಂಕ್‌ಗಳನ್ನು ಬಂದ್ ಮಾಡಿ ನಗರದ ಎಸ್‌ಬಿಐ ಮುಖ್ಯಶಾಖೆ, ತಾಲೂಕು ಕಚೇರಿ ಪಕ್ಕದ ಎಸ್‌ಬಿಐ ಶಾಖೆ ಎದುರು ಶುಕ್ರವಾರ ನಗರದ ಪ್ರತಿಭಟನೆ ನಡೆಸಿದರು.
ದ್ವಿಪಕ್ಷೀಯ ಒಪ್ಪಂದಗಳಿಂದ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ವೇತನ ಮತ್ತು ಸೇವಾ ಪರಿಸ್ಥಿತಿಗಳನ್ನು ನಿಯಂತ್ರಿಸಲಾಗುತ್ತಿದೆ. ಯೂನಿಯನ್‌ಗಳು ಸಲ್ಲಿಸಿದ ಬೇಡಿಕೆಗಳ ಆಧಾರದ ಮೇಲೆ ಮತ್ತು ಎಲ್ಲ ಸದಸ್ಯ ಬ್ಯಾಂಕ್‌ಗಳ ಪರವಾರಿ ಭಾರತೀಯ ಬ್ಯಾಂಕ್ ಗಳ ಸಂಘದೊಂದಿಗೆ ಚರ್ಚೆಯಿಂದ ಉದ್ಭವಿಸುವ 5 ವರ್ಷಗಳಿಗೊಮ್ಮೆ ಇದನ್ನು ಪರಿಷ್ಕರಿಸಲಾಗುತ್ತಿದೆ. ಅದರಂತೆ ಕೊನೆಯ ಸೆಟಿಲ್‌ಮೆಂಟ್‌ನ್ನು 2012 ರಿಂದ 2017ರ
ವರೆಗೆ ಅಂತಿಮಗೊಳಿಸಲಾಗಿತ್ತು. ಆದರೆ, 2017 ನವೆಂಬರ್ ತಿಂಗಳಿಂದ ಆಗಬೇಕಿದ್ದ ವೇತನ ಪರಿಷ್ಕರಣೆಯನ್ನು ಈವರೆಗೂ ಮಾಡಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಕ್ರಮಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.
ಮುಷ್ಕರ ಹಿನ್ನೆಲೆಯಲ್ಲಿ ಜ.27 ರಂದು ದೆಹಲಿಯಲ್ಲಿ ಮುಖ್ಯ ಕಾರ್ಮಿಕ ಆಯುಕ್ತರು, ಕಾರ್ಮಿಕ ಸಚಿವಾಲಯ, ಕೇಂದ್ರ ಸರ್ಕಾರ ಸಹಯೋಗದಲ್ಲಿ ರಾಜಿಸಂಧಾನಕ್ಕೆ ಕರೆಯಲಾಗಿತ್ತು. ಸಂಧಾನ ಸಭೆಯಲ್ಲಿ ಐಬಿಎ ಅಧಿಕಾರಿಗಳ ವರ್ತನೆ ಕಠಿಣವಾಗಿತ್ತು. ಪರಿಣಾಮ ಬ್ಯಾಂಕ್ ಅಧಿಕಾರಿ ಮತ್ತು ಉದ್ಯೋಗಿಗಳ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ಅನಿವಾರ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಜ. 31 ಮತ್ತು ಫೆ.1 ರಂದು ಎರಡು
ದಿನಗಳ ಕಾಲ ಬ್ಯಾಂಕ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾನಿರತರು ತಿಳಿಸಿದ್ದಾರೆ.
ಬ್ಯಾಂಕಿಂಗ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ವೇತನವನ್ನು ಪರಿಷ್ಕರಣೆ ಮಾಡಬೇಕು. ವಾರದಲ್ಲಿ 5 ದಿನಕ್ಕೆ ಬ್ಯಾಂಕ್ ಸೇವೆಯನ್ನು ಸೀಮಿತಗೊಳಿಸಬೇಕು. ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್)ಯನ್ನು ರದ್ದುಗೊಳಿಸಬೇಕು. ಮೂಲಭತ್ಯೆಯೊಂದಿಗೆ ವಿಶೇಷ ಭತ್ಯೆಯನ್ನು ವಿಲೀನಗೊಳಿಸಬೇಕು. ಕುಟುಂಬ ಪಿಂಚಣಿಯಲ್ಲಿ ಸುಧಾರಣೆ ತರಬೇಕು. ಗುತ್ತಿಗೆ ನೌಕರರು, ವ್ಯವಹಾರ ವರದಿಗಾರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ನಗರದ ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ನೌಕರರ ಸೇರಿದಂತೆ ನೂರಾರು ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.