ಪಾಲಿಕೆ ಚುನಾವಣೆ ಮುಂದೂಡಿಕೆಗೆ ಒತ್ತಡ?
ನಗರದಲ್ಲಿ ಬಿಜೆಪಿಗೆ ಪ್ರತಿಕೂಲ ಪರಿಣಾಮದ ಆತಂಕಕಾಂಗ್ರೆಸ್ ಪಾಳಯ ದಲ್ಲಿ ಗುಮಾನಿ
Team Udayavani, Feb 17, 2020, 12:55 PM IST
ಬಳ್ಳಾರಿ: ನಗರದಲ್ಲಿ ಕೆಲವೊಂದು ವಾರ್ಡ್‌ಗಳ ಮೀಸಲಾತಿ ಸಮಸ್ಯೆಯಿಂದ ಮುಂದೂಡಲಾಗುತ್ತಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಖಂಡರೇ ಒತ್ತಡ ಹೇರಿ ಮುಂದೂಡುತ್ತಿದ್ದಾರಾ? ಇಂಥಹದ್ದೊಂದು ಗುಮಾನಿ ಬಳ್ಳಾರಿ ಮಹಾನಗರ ಪಾಲಿಕೆ ಆವರಣದಲ್ಲಿ ಕೇಳಿಬರುತ್ತಿದೆ.
ಪಾಲಿಕೆ ಸದಸ್ಯರ ಅಧಿ ಕಾರಾವಧಿ ಮುಗಿದು ಒಂದು ವರ್ಷ ಕಳೆದರೂ ಚುನಾವಣೆ ಘೋಷಣೆಯಾಗಿಲ್ಲ. ಈ ಮೊದಲು ವಾರ್ಡ್‌ಗಳ ಮೀಸಲಾತಿ ಬದಲಾವಣೆಗಾಗಿ ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಆದರೆ, ಎನ್ ಆರ್‌ಸಿ, ಸಿಎಎ ಬೆಂಬಲಿಸಿ ನಡೆದ ಸಮಾವೇಶದಲ್ಲಿ ಬಿಜೆಪಿ ಜನಪ್ರತಿನಿಧಿಗಳು, ಮುಖಂಡರು ಒಂದು ವರ್ಗವನ್ನು ಗುರಿಯಾಗಿಸಿಕೊಂಡು ಮಾಡಿದ ಪ್ರಚೋದನಾಕಾರಿ ಭಾಷಣದಿಂದ ನಗರದಲ್ಲಿ ಬಿಜೆಪಿಗೆ ಪ್ರತಿಕೂಲ ಪರಿಣಾಮ ಏರ್ಪಟ್ಟಿದೆ.
ಇಂಥ ಸಂದರ್ಭದಲ್ಲಿ ಪಾಲಿಕೆಗೆ ಚುನಾವಣೆ ನಡೆದರೆ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಲಭಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಯವರ ಲೆಕ್ಕಾಚಾರ. ಹೀಗಾಗಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎಂಬ ಗುಮಾನಿ ಕಾಂಗ್ರೆಸ್ ಪಾಳಯದಲ್ಲಿ ಮೂಡಿದೆ.
ಪಾಲಿಕೆಯ 9 ವಾರ್ಡ್‌ಗಳು ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಈ ವಾರ್ಡ್‌ಗಳಲ್ಲಿ ಅಲ್ಪಸಂಖ್ಯಾತರೆ ಸೋಲು-ಗೆಲುವುಗಳನ್ನು ನಿರ್ಧರಿಸುವ ನಿರ್ಣಾಯಕ ಮತದಾರರಾಗಿದ್ದಾರೆ. ನಗರ ವಿಧಾನಸಭಾ ಕ್ಷೇತ್ರದಲ್ಲಿನ ಇನ್ನುಳಿದ ವಾರ್ಡ್‌ಗಳ ಪೈಕಿ ಕೆಲ ವಾರ್ಡ್‌ಗಳಲ್ಲೂ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎನ್ನಲಾಗುತ್ತಿದೆ.
ವರ್ಷದ ಬಳಿಕ ನಡೆದ ಮೇಯರ್ ಆಯ್ಕೆ: ಬಳ್ಳಾರಿ ಮಹಾನಗರ ಪಾಲಿಕೆಗೆ 2013ರಲ್ಲಿ ನಡೆದ
ಚುನಾವಣೆಯಲ್ಲಿ 26 ಕಾಂಗ್ರೆಸ್, 6 ಬಿಎಸ್‌ಆರ್, 1 ಜೆಡಿಎಸ್, 2 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದರು. ಆಗಲೂ ಸಹ ಮೇಯರ್ ಸ್ಥಾನದ ಮೀಸಲಾತಿ ಬದಲಾವಣೆಗಾಗಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದ ಹಿನ್ನೆಲೆಯಲ್ಲಿ ಆಗಲೂ ಪಾಲಿಕೆಗೆ ಚುನಾವಣೆ ನಡೆದು ವರ್ಷದ ಬಳಿಕ ಮೇಯರ್ ಆಯ್ಕೆ ಮಾಡಲು ಅವಕಾಶ ಲಭಿಸಿತ್ತು. ಪಾಲಿಕೆಗೆ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯಬೇಕಿದ್ದ ಚುನಾವಣೆ, ಸದಸ್ಯರ ಅವಧಿ ಮುಗಿದು ಒಂದು ವರ್ಷವಾದರೂ ಚುನಾವಣೆ ಘೋಷಣೆಯಾಗದಿರುವುದು ಸ್ಪರ್ಧಾಕಾಂಕ್ಷಿಗಳು, ಮತದಾರರಲ್ಲಿ ಬೇಸರ ಮೂಡಿಸಿದೆ.
ನಾಲ್ಕು ವಾರ್ಡ್‌ಗಳು ಹೆಚ್ಚಳ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಈ ಮೊದಲು 35 ಇದ್ದ ವಾರ್ಡ್‌ಗಳ ಸಂಖ್ಯೆಯನ್ನು 39ಕ್ಕೆ ಹೆಚ್ಚಿಸಲಾಗಿದೆ. ಕೆಲವೊಂದು ವಾರ್ಡ್ಗಳನ್ನು ವಿಭಜಿಸಿ ಹೆಚ್ಚುವರಿಯಾಗಿ ನಾಲ್ಕು ವಾರ್ಡ್ಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಸಹ ಸಿದ್ಧಪಡಿಸಲಾಗಿದ್ದು, 39 ವಾರ್ಡ್ ಗಳಿಗೂ ಮೀಸಲಾತಿಯನ್ನು ಸಹ ಪ್ರಕಟಿಸಲಾಗಿದೆ.
ಮೀಸಲಾತಿ ಬದಲಿಗಾಗಿ ಕೋರ್ಟ್ ಮೊರೆ: ಈ ಹಿಂದೆ ಇದ್ದ 22ನೇ ವಾರ್ಡ್ 23ನೇ ವಾರ್ಡ್ ಆಗಿ ಬದಲಾವಣೆಯಾಗಿದ್ದು, ಈ ವಾರ್ಡ್‌ನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿ ಪಾಲಿಕೆ ಅಧಿಕಾರಿಗಳು ಪ್ರಕಟಿಸಿದ್ದರು. ಆದರೆ, ಕೆಲವರು ತಮ್ಮ ಅನುಕೂಲಕ್ಕಾಗಿ ನಿಗದಿತ ಅವಧಿ ಯಲ್ಲಿ ಆಕ್ಷೇಪಣೆ ಸಲ್ಲಿಸಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಈ ವಾರ್ಡ್‌ನ್ನು ಓಬಿಸಿ (ಎ) ಗೆ ಬದಲಾಯಿಸಿಕೊಂಡಿದ್ದಾರೆ. ಈ ವಾರ್ಡ್‌ನಲ್ಲಿ ದಲಿತರು ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಮೇಲಾಗಿ ಕಳೆದ ಎರಡ್ಮೂರು ದಶಕಗಳಿಂದ ಪರಿಶಿಷ್ಟ ಜಾತಿಗೆ ಮೀಸಲಾಗದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ನೀಡಬೇಕು ಎಂದು ಸ್ಥಳೀಯರು ನ್ಯಾಯಾಲಯದ ಮೊರೆ ಹೋಗಿದ್ದಾರೆ. 1, 5ನೇ ವಾರ್ಡ್ ಮೀಸಲಾತಿಯನ್ನು ಬದಲಾವಣೆ ಮಾಡಬೇಕು ಎಂದು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ಕಳೆದ ಒಂದು ವರ್ಷದಿಂದ ನ್ಯಾಯಾಲಯದಲ್ಲಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಚುನಾವಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತಿಲ್ಲ.
ಸಮಸ್ಯೆಗಳ ಕೇಳುವವರಿಲ್ಲ: ಪಾಲಿಕೆ ಸದಸ್ಯರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರದ ಜನರ ಸಮಸ್ಯೆಗಳನ್ನು ಕೇಳುವವರೇ ಇಲ್ಲವಾಗಿದೆ. ನಗರದ ಬಹುತೇಕ ಕಡೆ ಒಳಚರಂಡಿ ಸೋರಿಕೆ ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲೀಪುರ, ಮೋಕಾ ಕೆರೆಯಲ್ಲಿ ಸಮರ್ಪಕವಾಗಿ ಕುಡಿವ ನೀರು ಇದ್ದರೂ 10 ದಿನಕ್ಕೊಮ್ಮೆ ಸರಬರಾಜು ಮಾಡುವ ಪದ್ಧತಿ ಬದಲಾವಣೆಯಾಗುತ್ತಿಲ್ಲ ಎಂದು ಜನರು ಪಾಲಿಕೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.