ಬಳ್ಳಾರಿ ನಗರ: ಫಲಿತಾಂಶಕ್ಕೂ ಮುನ್ನ ಭವಿಷ್ಯ ನಿರ್ಧರಿಸಿಕೊಂಡ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್
Team Udayavani, May 8, 2023, 12:58 PM IST
ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳು ಲಭಿಸಲಿವೆ ಎಂದಿರುವ ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್, ಅಧಿಕೃತ ಫಲಿತಾಂಶ ಹೊರಬೀಳುವ ಮುನ್ನವೇ ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಿಕೊಂಡು ಕ್ಷೇತ್ರದ ಮತದಾರರಲ್ಲಿ ಅಚ್ಚರಿ ಮೂಡಿಸಿದರು.
ನಗರದ ಮರ್ಚೇಡ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಮತಬ್ಯಾಂಕ್ ಇಲ್ಲ. ಕುಮಾರಣ್ಣ ಅವರ ಸಾಲಮನ್ನಾ, ಪಂಚರತ್ನ ಯೋಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಲಿವೆ. ಹಾಗಾಗಿ ನಗರ ಪ್ರದೇಶದ ಜನರಿಗೆ ಅಷ್ಟಾಗಿ ಯೋಜನೆಗಳಿಲ್ಲ. ಕಳೆದ 2013 ರಲ್ಲಿ ಅಂದಿನ ಜೆಡಿಎಸ್ ಅಭ್ಯರ್ಥಿ ಮುನ್ನಾ ಗೆ 16 ಸಾವಿರಕ್ಕೂ ಹೆಚ್ಚು, ಕಳೆದ 2018 ರಲ್ಲಿ ಮಹ್ಮದ್ ಇಕ್ಬಾಲ್ ಹೊತೂರ್ ಅವರಿಗೆ 6 ಸಾವಿರಕ್ಕೂ ಹೆಚ್ಚು ಮತಗಳು ಲಭಿಸಿವೆ. ಈ ಬಾರಿಯ 2023 ನೇ ಚುನಾವಣೆಯಲ್ಲಿ ನನಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆಯುವೆ. ಅದಕ್ಕಿಂತ ಕಡಿಮೆ ಪಡೆದಲ್ಲಿ ಜನರ ಸೇವೆಗೆ ನಾನು ಅನರ್ಹ ಎಂದಹ ನಿರ್ಧರಿಸುತ್ತೇನೆ ಎಂದು ತಮ್ಮ ಭವಿಷ್ಯವನ್ನು ತಾವೇ ಬಹಿರಂಗ ಪಡಿಸಿಕೊಂಡರು.
ಇದನ್ನೂ ಓದಿ:ಪ್ರವಾಸಿಗರೇ ಗಮನಿಸಿ.. ಮತದಾನ ದಿನದಂದು ಕವಿಶೈಲ, ಕವಿಮನೆ ಬಂದ್
ಈ ವೇಳೆ ಜಿಲ್ಲಾಧ್ಯಕ್ಷ ಸೋಮಲಿಂಗನಗೌಡ, ವಾದಿರಾಜ್ ಶೆಟ್ಟಿ, ರೋಷನ್ ಬಾಷ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.