ವಿಮ್ಸ್ ಶುಶ್ರೂಷಕರ ವೇತನ ಬಿಡುಗಡೆಗೆ ಒತ್ತಾಯ
Team Udayavani, Jul 9, 2020, 2:10 PM IST
ಬಳ್ಳಾರಿ: ವಿಮ್ಸ್ ಗುತ್ತಿಗೆ ಆಧಾರಿತ ಶುಶ್ರೂಷಕರಿಗೆ ಬಾಕಿ ವೇತನ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಕಾರ್ಮಿಕರ ಸಂಘದಿಂದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಳ್ಳಾರಿ: ಕಳೆದ ಐದು ತಿಂಗಳಿಂದ ನೀಡದ ಬಾಕಿ ವೇತನವನ್ನು ಪಾವತಿಸಿ, ಗುತ್ತಿಗೆ ಅವಧಿಯನ್ನು ನವೀಕರಿಸಬೇಕೆಂದು ಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ವಿಮ್ಸ್ ವೈದ್ಯಕೀಯ ಆಸ್ಪತ್ರೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಶುಶ್ರೂಷಕರ ವೇತನದಲ್ಲಿ ತಾರತಮ್ಯ ಎಸಗಲಾಗಿದೆ. ಮೂರು ತಿಂಗಳಿನಿಂದ ಬಾಕಿ ಇರುವ ವೇತನವನ್ನು ಈವರೆಗೆ ಪಾವತಿಸಿಲ್ಲ. ಗುತ್ತಿಗೆ ಆಧಾರದ ಶುಶ್ರೂಷಕರನ್ನು ಕೋವಿಡ್ ವಾರ್ಡುಗಳಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದು ಆದೇಶ ಹೊರಡಿಸಲಾಗಿದ್ದು, ಅದರಂತೆ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಶುಶ್ರೂಷಕರಿಗೆ ಕೋವಿಡ್ ಸೋಂಕು ಹರಡಿದೆ. ಆದರೂ ಜೀವ ಪಣಕ್ಕಿಟ್ಟು ಕಾರ್ಯನಿರ್ವಹಿಸುತ್ತಿದ್ದರೂ ವೇತನ ಪಾವತಿಸಿಲ್ಲ ಎಂದು ಪ್ರತಿಭಟನಾನಿರತ ಶುಶ್ರೂಷಕರು ಆರೋಪಿಸಿದರು.
ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಐಟಿಯು ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘಟನೆ ಮುಖಂಡ ಜೆ. ಸತ್ಯಬಾಬು ಆಗ್ರಹಿಸಿದರು. ಮುಖಂಡರಾದ ಯು. ಬಸವರಾಜ, ಚಂದ್ರಕುಮಾರಿ, ಗಾದಿಲಿಂಗಪ್ಪ, ಕರಿಬಸಪ್ಪ ಮತ್ತು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.