![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 3, 2020, 12:28 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೊಮ್ಮೆ ಸ್ಫೋಟಗೊಂಡಿದೆ. ಗುರುವಾರ ಒಂದೇ ದಿನ 89 ಮಂದಿಯಲ್ಲಿ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದ್ದು, 1019ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಗುರುವಾರ ಹೊಸಪೇಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ 46 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಂಡೂರು ತಾಲೂಕು 19, ಬಳ್ಳಾರಿ 17, ಸಿರುಗುಪ್ಪ 5, ಹ.ಬೊ.ಹಳ್ಳಿ 1, ನೆರೆಯ ಆಂಧ್ರದ ಕರ್ನೂಲ್ ಜಿಲ್ಲೆಯ ಆಲೂಕು ಗ್ರಾಮದ 1 ಒಬ್ಬರು ಸೇರಿ ಒಟ್ಟು 89 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ 32 ಐಎಲ್‌ಐ ಪ್ರಕರಣಗಳಾಗಿವೆ. 2 ದುರ್ಬಲ ವರ್ಗದ ಸಾರಿ ಪ್ರಕರಣಗಳಾಗಿವೆ. ಇಬ್ಬರು ಜಿಂದಾಲ್ ಉದ್ಯೋಗಿಯಾಗಿದ್ದು, ಮೂವರು ಜೈಪುರದಿಂದ ಹಿಂದಿರುಗಿದವರಿಗೆ ಸೋಂಕು ಪತ್ತೆಯಾಗಿದೆ. 17 ಜನರಿಗೆ ಸೋಂಕು ಹೇಗೆ ತಗುಲಿತು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ.
ಮತ್ತೊಬ್ಬ ಆರೋಗ್ಯ ಸಿಬ್ಬಂದಿಗೂ ಸೋಂಕು ಆವರಿಸಿದ್ದು, ಇನ್ನುಳಿದವರಿಗೆ ವಿವಿಧ ಸೋಂಕಿತರಿಂದ ಕೋವಿಡ್ ವೈರಸ್ ಆವರಿಸಿದೆ ಎಂದು ಡಿಸಿ ಎಸ್.ಎಸ್ .ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 1019 ಮಂದಿಗೆ ಕೋವಿಡ್ ಸೋಂಕು ಆವರಿಸಿದ್ದು, ಈವರೆಗೆ 457 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನುಳಿದ 511 ಸಕ್ರಿಯ ಪ್ರಕರಣಗಳಾಗಿವೆ. 33 ಜನರು ಸೋಂಕಿಗೆ ಮೃತಪಟ್ಟಿದ್ದಾರೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.