ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆ


Team Udayavani, Jun 13, 2020, 1:36 PM IST

13-June-14

ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ದಿನೇ-ದಿನೇ ಹೆಚ್ಚುತ್ತಿದ್ದು, ಶುಕ್ರವಾರ 23 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.

ಕಳೆದ ಜೂನ್‌ 10ರಂದು ಜಿಲ್ಲೆಯಲ್ಲಿ 94 ಇದ್ದ ಸೋಂಕಿತರ ಸಂಖ್ಯೆ ಜೂ.11ರಂದು ಒಂದೇ ದಿನ 53 ಹೊಸ ಪ್ರಕರಣಗಳು ಪತ್ತೆಯಾದವು. ಇದರಿಂದ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿತ್ತು. ಇದೀಗ ಜೂ.12ರಂದು ಪುನಃ 23 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. ಈ ಪೈಕಿ ಸುಮಾರು 100ಕ್ಕೂ ಹೆಚ್ಚು ಪ್ರಕರಣಗಳು ಜಿಂದಾಲ್‌ ಸಂಸ್ಥೆಯ ನೌಕರರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಜಿಲ್ಲೆಯಲ್ಲಿ ಶುಕ್ರವಾರದ ರಾಜ್ಯ ಮೀಡಿಯಾ ಬುಲೆಟಿನ್‌ ನಲ್ಲಿ ಪ್ರಕಟವಾದ ಒಟ್ಟು 97 ಹೊಸ ಪ್ರಕರಣಗಳ ಪೈಕಿ 85 ಜಿಂದಾಲ್‌ ಸಂಸ್ಥೆಯ ನೌಕರರಾಗಿದ್ದು, ಸಂಸ್ಥೆಯ ಪಿ.4184, ಪಿ.4350, ಪಿ.5577, ಪಿ.5578, ಪಿ.5576, ಪಿ.5579, ಪಿ.5580, ಪಿ.5374, ಪಿ.5376 ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಿಂದ ಸೋಂಕು ಆವರಿಸಿದೆ. ಇನ್ನುಳಿದವರ ಪೈಕಿ 9 ಸೋಂಕಿತರು ಮಹಾರಾಷ್ಟ್ರದಿಂದ ವಾಪಸ್ಸಾಗಿದ್ದಾರೆ. ಮೂರು ಐಎಲ್‌ಐ ಪ್ರಕರಣಗಳಾಗಿವೆ. ಒಬ್ಬರು ಹೊಸಪೇಟೆಯ ಈಶ್ವರನಗರ, ಮತ್ತೊಬ್ಬರು ನಗರದ ಹವಂಭಾವಿಯ ಪ್ರದೇಶದ ನಿವಾಸಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಜಿಲ್ಲೆಯಲ್ಲಿ ಈವರೆಗೆ ಒಟ್ಟು 170 ಸೋಂಕು ಪತ್ತೆಯಾಗಿದ್ದು, ಈ ಪೈಕಿ 49 ಜನರು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, ಇನ್ನುಳಿದ 120 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಟಕವಾದ ಜಿಂದಾಲ್‌: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಆರಂಭದಿಂದಲೂ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್‌ ಸೋಂಕಿತರ ಸಂಖ್ಯೆ ಜಿಂದಾಲ್‌ ಸಂಸ್ಥೆಯಿಂದಾಗಿ ಶತಕದ ಗಡಿ ದಾಟಿ 170ಕ್ಕೆ ಏರಿಕೆಯಾಗಿದೆ. ಜಿಲ್ಲೆಗೆ ಕಂಟಕವಾಗಿ ಪರಿಣಮಿಸಿರುವ ಜಿಂದಾಲ್‌ ಸಂಸ್ಥೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.