14 ಜನರಿಗೆ ಸೋಂಕು; 12 ಗುಣಮುಖ
ಸೋಂಕಿತರ ಸಂಖ್ಯೆ 416ಕ್ಕೇರಿಕೆ 302 ಪ್ರಕರಣಗಳು ಸಕ್ರಿಯ-112 ಜನರ ಬಿಡುಗಡೆ
Team Udayavani, Jun 21, 2020, 12:45 PM IST
ಬಳ್ಳಾರಿ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 12 ಜನರು ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಮನೆಗೆ ಕಳುಹಿಸಿಕೊಟಿದ್ದು, ಕೊಂಚ ನೆಮ್ಮದಿ ಮೂಡಿಸಿದರೆ, ಜಿಲ್ಲೆಯಲ್ಲಿ ಪುನಃ 14 ಪ್ರಕರಣಗಳು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಈ ಮೂಲಕ ಗುಣವಾದವರ ಸಂಖ್ಯೆ 112ಕ್ಕೆ, ಸೋಂಕಿತರ ಸಂಖ್ಯೆ 416ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಶುಕ್ರವಾರವಷ್ಟೇ 65 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಶನಿವಾರ ಪುನಃ 14 ಜನರಲ್ಲಿ ಸೋಂಕು ದೃಢಪಟ್ಟಿದೆ. ಹೊಸಪೇಟೆ 6, ಸಂಡೂರು 5, ಬಳ್ಳಾರಿ 1, ಸಿರುಗುಪ್ಪ 1, ಹಗರಿಬೊಮ್ಮನಹಳ್ಳಿ 1 ಸೇರಿ ಒಟ್ಟು 14 ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಇದರಲ್ಲಿ ಆರು ಪ್ರಕರಣಗಳು ಐಎಲ್‌ಐ (ಇನ್‌ಫ್ಲೂಯೆಂಜಾ ಲೈಕ್ ಇಲ್ಲನೆಸ್), 1 ಎಸ್‌ಎಎಐ, 2 ಜಿಂದಾಲ್ ಕಾರ್ಖಾನೆ ನೌಕರರ ಸಂಪರ್ಕ, ಒಬ್ಬರು ಬಿಎಲ್ ಆರ್ 395, ಇಬ್ಬರು ಪಿ.7419, ಮತ್ತೂಬ್ಬರು ಪಿ.7447 ಸೋಂಕಿತರ ಸಂಪರ್ಕ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ 416ಕ್ಕೆ ಏರಿಕೆಯಾಗಿದೆ. ಇದರಲ್ಲಿ 112 ಜನರು ಗುಣಮುಖವಾಗಿ ಮನೆಗೆ ಸೇರಿದ್ದಾರೆ. ಇಬ್ಬರು ಮರಣ ಹೊಂದಿದ್ದು, 314 ಸಕ್ರಿಯ ಪ್ರಕರಣಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.