ಕೋವಿಡ್ ಔಷಧ ಕಡಿಮೆ ಬೆಲೆಗೆ ಆಗುವಂತೆ ಕ್ರಮಕ್ಕೆ ಮನವಿ
Team Udayavani, Jul 9, 2020, 5:58 PM IST
ಬಳ್ಳಾರಿ: ಡಿಸಿ ಕಚೇರಿ ಆವರಣದಲ್ಲಿ ಸಿಪಿಐಎಂ ಕಾರ್ಯಕರ್ತರು ಪ್ರತಿಭಟಿಸಿದರು
ಬಳ್ಳಾರಿ: ಕೋವಿಡ್ ನಿರೋಧಕ-19 ರೆಮ್ಟಿಸಿವರ್ ಔಷಧವನ್ನು ಭಾರತದಲ್ಲಿ ಜನರಿಕ್ ಔಷಧವನ್ನಾಗಿ ಉತ್ಪಾದಿಸಬೇಕೆಂದು ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ನಗರದ ಡಿಸಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಕೇವಲ 100 ರೂಗೆ ಉತ್ಪಾದಿಸಬಹುದಾದ ಈ ಔಷಧವನ್ನು ಔಷಧ ತಯಾರಿಕಾ ಕಂಪನಿಗಳು ಧನದಾಹಕ್ಕೆ ಬಿದ್ದು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದರಲ್ಲಿ ನಿರತವಾಗಿವೆ. ಮೂಲಗಳ ಪ್ರಕಾರ ಅಮೆರಿಕಾದಲ್ಲಿ ಈ ಔಷಧ ಈಗಾಗಲೇ 2.25 ಲಕ್ಷ ರೂ.ಗೆ ಮಾರಾಟ ಮಾಡಲು ನಿಗದಿ ಮಾಡಲಾಗುತ್ತಿದೆ ಎನ್ನಲಾಗಿದೆ. ಭಾರತದಲ್ಲೂ ಸಹ ಅನೇಕ ಕಂಪನಿಗಳು ಪೇಟೆಂಟ್ ಪಡೆದು ಉತ್ಪಾದನೆ ಶುರುಮಾಡುವ ತವಕದಲ್ಲಿವೆ. ಭಾರತದಲ್ಲಿ ಉತ್ಪಾದಿಸುವ ಔಷಧಕ್ಕೆ ಕನಿಷ್ಠ 30-35 ಸಾವಿರ ರೂ. ಆಗಬಹುದು ಎಂಬ ಮಾತುಗಳು ಕೇಳಿಬಂದಿವೆ. ಇದರಿಂದ ಈ ಔಷಧ ಜನರಿಗೆ ತಲುಪುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ವಹಿಸಬೇಕು. ಅತಿ ಕಡಿಮೆ ಬೆಲೆಗೆ ಜನರಿಗೆ ಸಿಗುವಂತೆ ಕೊರೊನಾ ಔಷಧ ಮಾರಾಟ ಮಾಡಲು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ರವಾನಿಸಿದರು. ಪಕ್ಷದ ರಾಜ್ಯ ಕಾರ್ಯದರ್ಶಿ ಯು. ಬಸವರಾಜ, ನಗರ ಕಾರ್ಯದರ್ಶಿ ಜೆ.ಚಂದ್ರಕುಮಾರಿ, ಸದಸ್ಯ ಪಿ.ಆರ್. ವೆಂಕಟೇಶ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ. ಸತ್ಯಬಾಬು, ರಂಗನಾಥ, ಜೆ.ಎಸ್. ಮೂರ್ತಿ ಮೆರವಣಿಗೆ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.