ಡೆಂಘೀ ನಿಯಂತ್ರಣಕ್ಕೆ ಸಹಕರಿಸಿ: ಜನಾರ್ಧನ್
ರಾಷ್ಟ್ರೀಯ ಡೆಂಘೀ ದಿನಾಚರಣೆ-ಜಾಗೃತಿ ಜಾಥಾ |ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ
Team Udayavani, May 20, 2020, 3:35 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಡೆಂಘೀ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖವಾಗಿದೆ. ಸಾರ್ವಜನಿಕರು ರೋಗ ನಿಯಂತ್ರಣಕ್ಕೆ ಸಹಕರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್.ಎಲ್. ಜನಾರ್ಧನ ಹೇಳಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ-2020ರ ನಿಮಿತ್ತ ಏರ್ಪಡಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ನೀರಿನ ಸಿಮೆಂಟ್ ತೊಟ್ಟಿ (ಸಂಪ್), ಬ್ಯಾರಲ್, ಡ್ರಮ್, ಮಡಿಕೆ, ಮನೆ ಮೇಲಿನ ಟ್ಯಾಂಕ್‌ಗಳಲ್ಲಿ ಸೊಳ್ಳೆಗಳು ನುಸುಳದಂತೆ ಭದ್ರವಾಗಿ ಮುಚ್ಚಿ ಹಾಗೂ ಲಾರ್ವಗಳು ಕಂಡು ಬಂದಲ್ಲಿ ನೀರನ್ನು ಖಾಲಿ ಮಾಡಬೇಕು. ನೀರಿನ ಪರಿಕರಗಳನ್ನು ಚೆನ್ನಾಗಿ ತೊಳೆದು ಬಳಸಬೇಕು. ನಿಮ್ಮ ಕುಟುಂಬದವರಿಗೆ ಸೊಳ್ಳೆ ಕಚ್ಚದಂತೆ ಸೊಳ್ಳೆ ಪರದೆ, ಸೊಳ್ಳೆಬತ್ತಿ, ಬಾಡಿ ಲೋಷನ್ ಕ್ರೀಂ ತರಹದ ಇತ್ಯಾದಿಗಳನ್ನು ಉಪಯೋಗಿಸಿ ಎಂದು ಸಲಹೆ ನೀಡಿದ ಡಿಎಚ್‌ಒ ಜನಾರ್ಧನ್, ಮನೆಯ ಮೇಲೆ ಮತ್ತು ಸುತ್ತ-ಮುತ್ತ ಬಿಸಾಡಿದ ಟೈರು, ತೆಂಗಿನಚಿಪ್ಪು, ಡಬ್ಬಿ, ಪ್ಲಾಸ್ಟಿಕ್‌ಗ್ಲಾಸ್ ಅಥವಾ ಕಪ್ ಇತ್ಯಾದಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.
ಸಮುದಾಯದ ಸಹಕಾರದಿಂದ ಡೆಂಘೀ ರೋಗವನ್ನು ತಡೆಗಟ್ಟಬಹುದು. ಯಾವುದೇ ಜ್ವರ ಇರಲಿ ನಿರ್ಲಕ್ಷಿಸಬಾರದು. ಆಶಾ ಹಾಗೂ ಆರೋಗ್ಯ ಸಹಾಯಕರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು. ಡೆಂಘೀ ಜ್ವರದ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ| ಆರ್.ಅಬ್ದುಲ್ಲಾ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ವಿಬಿಡಿಸಿ ಕನ್ಸಲ್ಟೆಂಟ್, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು, ಪ್ರಯೋಗಶಾಲಾ ತಂತ್ರಜ್ಞರು, ತಾಲೂಕು ಆರೋಗ್ಯ ಸಿಬ್ಬಂದಿಗಳು ಸೇರಿದಂತೆ ಡಿ.ವಿ.ಬಿ.ಡಿ.ಸಿ.ಪಿ ಕಚೇರಿಯ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.