ರೇಷನ್ ಕಿಟ್ ವಿತರಣೆಗೆ ಚಾಲನೆ
Team Udayavani, Apr 20, 2020, 2:41 PM IST
ಬಳ್ಳಾರಿ: ಕನಕದುರ್ಗಮ್ಮ ಬಡಾವಣೆಯ ಬಡ ಕುಟುಂಬಗಳಿಗೆ ರೇಷನ್ ಕಿಟ್‌ಗಳನ್ನು ಶಾಸಕ ಜಿ. ಸೋಮಶೇಖರರೆಡ್ಡಿ ವಿತರಿಸಿದರು.
ಬಳ್ಳಾರಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ 2 ಸಾವಿರ ರೇಷನ್ ಕಿಟ್ ಗಳನ್ನು ಸಿದ್ಧಪಡಿಸಲಾಗಿದ್ದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ರೇಷನ್‌ಕಿಟ್ ಗಳನ್ನು ಹೊತ್ತೂಯ್ಯಲು ಸಿದ್ಧಗೊಂಡಿರುವ ಲಾರಿಗೆ ಶಾಸಕ ಜಿ. ಸೋಮಶೇಖರೆಡ್ಡಿ ಭಾನುವಾರ ಚಾಲನೆ ನೀಡಿದರು.
ಕೋವಿಡ್ 19ನಿಂದ ಸಂಕಷ್ಟ ದಿನಗಳಗಳನ್ನು ಎದುರಿಸುತ್ತಿರುವ ಬಡಜನರಿಗೆ ನೆರವಾಗುವ ಸಲುವಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ಬಂದಿದ್ದು, ಒಂದು ಕುಟುಂಬಕ್ಕೆ 15 ದಿನಕ್ಕಾಗುವಷ್ಟು ಅಕ್ಕಿ, ಬೇಳೆ, ಎಣ್ಣೆ ಸೇರಿ ಇನ್ನಿತರೆ ಆಹಾರ ಪದಾರ್ಥಗಳುಳ್ಳ ಒಟ್ಟು 2 ಸಾವಿರ ರೇಷನ್ ಕಿಟ್‌ಗಳನ್ನು ಸಿದ್ಧಪಡಿಸಲಾಗಿದೆ. ಈ ಕಿಟ್‌ಗಳನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುತಿಸಲಾಗಿರುವ ಬಡ ಕುಟುಂಬಗಳಿಗೆ ವಿತರಿಸಲಾಗುತ್ತದೆ ಎಂದು ಬ್ಯಾಂಕ್‌ನ ನಿರ್ದೇಶಕ ಶ್ರೀನಾಥ್ ಜೋಷಿ, ಶಾಸಕ ಜಿ. ಸೋಮಶೇಖರರೆಡ್ಡಿ ತಿಳಿಸಿದರು.
ದುರ್ಗಮ್ಮ ದೇವಸ್ಥಾನ ಬಳಿಯ ಕನಕ ದುರ್ಗಮ್ಮ ಬಡಾವಣೆಯಲ್ಲಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ಶಾಸಕ ಜಿ.ಸೋಮಶೇಖರರೆಡ್ಡಿ ವಿತರಿಸಿದರು. ಬ್ಯಾಂಕ್‌ನ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು ದೇಣಿಗೆ ನೀಡಿದ್ದು, ಒಟ್ಟು 85 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದನ್ನು ಸ್ಮರಿಸಿದರು. ಐನಾತರೆಡ್ಡಿ, ಶ್ರೀನಿವಾಸ ಮೋತ್ಕರ್, ಕೆಎಂಎಫ್ ನಿರ್ದೇಶಕ ವೀರಶೇಖರರೆಡ್ಡಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.