ಕೊರೊನಾ ತಡೆಗಟ್ಟಲು ಅಗತ್ಯ ಕ್ರಮ
ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾ ಧಿಕಾರಿ ನಕುಲ್ ಸೂಚನೆ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆ
Team Udayavani, Mar 5, 2020, 1:09 PM IST
ಬಳ್ಳಾರಿ: ಕೊರೊನಾ ವೈರಸ್ ಪ್ರಕರಣಗಳನ್ನು ಸಾಂಕ್ರಾಮಿಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಎಲ್ಲ ರೀತಿಯ ಸಿದ್ಧತೆಗಳನ್ನು ಬಳ್ಳಾರಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದ್ದು, ಇದುವರೆಗೆ ಯಾವುದೇ ರೀತಿಯ ಪ್ರಕರಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಕೊರೊನಾ ವೈರಸ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾಗಿರುವ ಜಿಲ್ಲಾ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲೆಯ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು ಹೊಸಪೇಟೆಯ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ಪತ್ತೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಐಸೋಲೆಟೆಡ್ ವಾರ್ಡ್‌ಗಳನ್ನು ತೆರೆಯಲಾಗಿದೆ. 10 ಹಾಸಿಗೆಗಳ ವ್ಯವಸ್ಥೆ, ಕೊರೊನಾ ವೈರಸ್ ಪತ್ತೆ, ಚಿಕಿತ್ಸೆ, ಮಾಸ್ಕ್ ಮತ್ತು ಔಷಧಿಗಳು ಸೇರಿದಂತೆ ಕೊರೊನಾ ವೈರಸ್ ಸಂಬಂಧಿಸಿದ ಕಿಟ್‌ಗಳ ವ್ಯವಸ್ಥೆ, ಸಿಬ್ಬಂದಿ ಕಾರ್ಯನಿರ್ವಹಣೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಜಿಲ್ಲೆಯಲ್ಲಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ ಅವರು, ಮುಂದಿನ 10 ದಿನಗಳಿಗೆ ಬೇಕಾಗುವ ಅಗತ್ಯ ಔಷಧ , ಪರಿಕರಗಳು, ಕಿಟ್‌ಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕೊರೊನಾ ವೈರಸ್ ಪ್ರಕರಣಗಳ ಪರಿಶೀಲನೆಗೆ ಸಂಬಂಧಿಸಿದಂತೆ 4 ತಂಡಗಳನ್ನು ರಚಿಸಲಾಗಿದೆ ಮತ್ತು ಇದರ ಜೊತೆಗೆ ರ್ಯಾಪಿಡ್ ರೆಸ್ಪಾನ್ಸ್ ತಂಡ ಕೂಡ ಕಾರ್ಯನಿರ್ವಹಿಸುತ್ತಿದೆ. 2 ಆಂಬುಲೆನ್ಸ್ ಗಳನ್ನು ಹಾಗೂ ಸಿಬ್ಬಂದಿಗಳನ್ನು ಇದಕ್ಕಾಗಿಯೇ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ ಡಿಸಿ ನಕುಲ್ ಅವರು, ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳ ಸಭೆ ನಡೆಸಿ ಈ ಕುರಿತು ತಿಳಿಸಬೇಕು. ಈ ರೀತಿಯ ಸಂದೇಹಾಸ್ಪದ ಪ್ರಕರಣಗಳು ಕಂಡುಬಂದಲ್ಲಿ ಗಮನಕ್ಕೆ ತರುವಂತೆ ಕೋರಬೇಕು. ಹೋಟೆಲ್ ಮಾಲೀಕರ ಸಭೆ ನಡೆಸಿ ಅಗತ್ಯ ಸಲಹಾ ಸೂಚನೆ ನೀಡಬೇಕು ಎಂದರು.
ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ಬೃಹತ್ ಫಲಕಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕು. ಕರಪತ್ರಗಳ ಮೂಲಕವೂ ಜಾಗೃತಿ ಮೂಡಿಸಬೇಕು. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರು ಯಾವುದೇ ರೀತಿಯ ಹೇಳಿಕೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುವ ಮತ್ತು ತಿಳಿಸುವಂತಿಲ್ಲ ಎಂದು ಅವರು ಸೂಚಿಸಿದರು.
ಸಂದೇಹ, ಗೊಂದಲಗಳಿಗೆ ಜನಸ್ಪಂದನ ಕಂಟ್ರೋಲ್ ರೂಂಗೂ ಕರೆ ಮಾಡಿ. ಕೊರೊನಾ ವೈರಸ್‌ಗೆ ಸಂಬಂಸಿದಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂದೇಹಗಳು ಮತ್ತು ಗೊಂದಲಗಳಿದ್ದರೆ ಜಿಲ್ಲಾಧಿ ಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಜನಸ್ಪಂದನಾ ಕಂಟ್ರೋಲ್ ರೂಂಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದು. ಇದಕ್ಕಾಗಿ ಕಂದಾಯ ಇಲಾಖೆಯ ಸಿಬ್ಬಂದಿ ಜತೆಗೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದರು.
ಜನಸ್ಪಂದನಾ ಕಂಟ್ರೋಲ್ ರೂಂ ನಂ:8277888866 ಹಾಗೂ ದೂ:08392- 277100ಗೆ ಕರೆ ಮಾಡಬಹುದು ಮತ್ತು ವಾಟ್ಸ್ ಆಪ್ ಮಾಡಬಹುದು.1077 ಉಚಿತ ಸಹಾಯವಾಣಿಗೂ ಕರೆ ಮಾಡಬಹುದು ಎಂದು ಅವರು ತಿಳಿಸಿದರು. ಡಿಎಚ್‌ಒ ಅವರು ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗಿರುವ ಕ್ರಮಗಳನ್ನು ಸಭೆಗೆ ವಿವರಿಸಿದರು. ವಿದೇಶಗಳಿಂದ ಆಗಮಿಸುವ ಪ್ರವಾಸಿಗರಲ್ಲಿ ಕೊರೊನಾ ವೈರಸ್ ಪರಿಶೀಲನೆಗೆ ಸಂಬಂಧಿಸಿದಂತೆ ತೋರಣಗಲ್ಲು ವಿಮಾನ ನಿಲ್ದಾಣ, ಬಳ್ಳಾರಿ ಮತ್ತು ಹೊಸಪೇಟೆ ರೈಲ್ವೆ ನಿಲ್ದಾಣಗಳು ಹಾಗೂ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ತಂಡಗಳನ್ನು ನಿಯೋಜಿಸಲಾಗಿದೆ.
ಇರಾನ್‌ನಿಂದ ಆಗಮಿಸಿದ್ದ 12 ಜನರನ್ನು ಹಾಗೂ ರಷ್ಯಾ ಮತ್ತು ದುಬೈ ಕಡೆಯಿಂದ ಆಗಮಿಸಿದ್ದ ಪ್ರವಾಸಿಗರನ್ನು ಪರಿಶೀಲಿಸಲಾಗಿದ್ದು, ಆ ರೀತಿಯ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ ಎಂದು ಅವರು ತಿಳಿಸಿದರು. ಈ ಕೊರೊನಾ ವೈರಸ್ ಕುರಿತು ಯಾವುದೇ ರೀತಿಯ ಭಯಬೇಡ ಜಾಗೃತಿ ಇರಲಿ ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ| ಎನ್. ಬಸರೆಡ್ಡಿ, ವಿಮ್ಸ್‌ನ ಡಾ| ಮರಿರಾಜ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಜಾನಕಿರಾಂ, ಡಿಡಿಪಿಐ ರಾಮಪ್ಪ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ, ಖಾಸಗಿ ಆಸ್ಪತ್ರೆಗಳ/ವೈದ್ಯಕೀಯ ಕಾಲೇಜುಗಳ ಸಂಘದ ಪ್ರತಿನಿಧಿ ಗಳು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರತಿನಿಧಿಗಳು ಸೇರಿದಂತೆ ವಿವಿಧ ಪ್ರಮುಖ ಆಸ್ಪತ್ರೆಗಳ ವೈದ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.