ತೀರ್ಥಯಾತ್ರೆಯಿಂದ ಬಂದವಗೆ ಸೋಂಕು

ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ | 8 ಜನ ಗುಣಮುಖ| ಕೌಲ್‌ಬಜಾರ್‌ ಕಂಟೇನ್ಮೆಂಟ್‌ ಪ್ರದೇಶ

Team Udayavani, May 6, 2020, 1:34 PM IST

Udayavani Kannada Newspaper

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರು ಗುಣಮುಖರಾಗಿ ಮನೆ ಸೇರುತ್ತಿರುವ ಬೆನ್ನಲ್ಲೇ ನಗರದ ಕೌಲ್‌ಬಜಾರ್‌ ಪ್ರದೇಶದಲ್ಲಿ ಮತ್ತೂಂದು ಕೋವಿಡ್‌-19 ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 8 ಜನರು ಗುಣಮುಖರಾಗಿ ಮನೆ ಸೇರಿದ್ದು, ಬಾಕಿ ಆರು ಜನರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ತಿಳಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ಕೌಲ್‌ಬಜಾರ್‌ ಪ್ರದೇಶದ 43 ವರ್ಷದ ವ್ಯಕ್ತಿಗೆ ಕೋವಿಡ್‌-19 ಸೋಂಕು ಪತ್ತೆಯಾಗಿದೆ. ಸೋಂಕಿತರು ಕಳೆದ ಮಾರ್ಚ್‌ ತಿಂಗಳಲ್ಲಿ ಕೌಲ್‌ಬಜಾರ್‌ನ 14, ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಕಣೇಕಲ್‌ ಗ್ರಾಮದ 4 ಜನರು ಸೇರಿ ಒಟ್ಟು 18 ಜನರು ತೀರ್ಥ ಕ್ಷೇತ್ರಗಳಿಗೆ ತೆರಳಿದ್ದು, ಉತ್ತರಾಖಂಡ್‌ ರಾಜ್ಯದ ಲುಡಿಕಿ ಎಂಬ ಊರಲ್ಲಿ ಲಾಕ್‌ಡೌನ್‌ ಆಗಿದ್ದರು. 37 ದಿನಗಳ ಕಾಲ ಅಲ್ಲಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಇವರು, ಬಳ್ಳಾರಿ ಶಾಸಕರು ಸೇರಿ ಹಲವು ದಾನಿಗಳು ಆರ್ಥಿಕ ಸಹಾಯ ಮಾಡಿದ್ದು, ಕಳೆದ ಮೇ 2 ರಂದು ಬಳ್ಳಾರಿಗೆ ಬಂದಿದ್ದಾರೆ. ಆಗ ಎಲ್ಲರನ್ನೂ ತಪಾಸಣೆಗೊಳಪಡಿಸಿ ಸ್ವ್ಯಾಬ್‌ ಪಡೆದು ಹೋಂ ಕ್ವಾರಂಟೈನ್‌ ಮಾಡಲಾಗಿತ್ತು. ಸೋಮವಾರ ವರದಿ ಬಂದಿದ್ದು, ಇವರಲ್ಲಿ ಬಳ್ಳಾರಿಯ ಕೌಲ್‌ಬಜಾರ್‌ನ 43 ವರ್ಷದ ನಿವಾಸಿಗೆ ಕೋವಿಡ್‌ -19 ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಇನ್ನುಳಿದ 13 ಜನರನ್ನು ಸರ್ಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ವಿವರಿಸಿದರು.

1 ಕಿಮೀ ವ್ಯಾಪ್ತಿ ಕಂಟೇನ್ಮೆಂಟ್‌ ಜೋನ್‌: ಕೌಲ್‌ ಬಜಾರ್‌ನ ಪ್ರದೇಶವೊಂದರಲ್ಲಿ ಕೋವಿಡ್‌-19 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರದೇಶದ ಸುತ್ತಲೂ ಒಂದು ಕಿಮೀ ವ್ಯಾಪ್ತಿಯನ್ನು ಕಂಟೇನ್ಮೆಂಟ್‌ ಜೋನ್‌ ಎಂದು ಘೋಷಿಸಿ, ಎಲ್ಲ ರಸ್ತೆಗಳನ್ನು ಬಂದ್‌ ಮಾಡಲಾಗುತ್ತದೆ. ಯಾರೊಬ್ಬರೂ ಆ ಪ್ರದೇಶದಿಂದ ಒಳಗೆ-ಹೊರಗೆ ಓಡಾಡುವಂತಿಲ್ಲ ಎಂದ ಡಿಸಿ ನಕುಲ್‌, ಕಂಟೇನ್ಮೆಂಟ್‌ ಜೋನ್‌ನಲ್ಲಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭಿಸಿದ್ದಾರೆ. ಜತೆಗೆ ಎಲ್ಲೆಡೆ ಫಾಗಿಂಗ್‌ ಮಾಡಲಾಗುತ್ತಿದೆ ಎಂದರು.

ಕೋವಿಡ್‌-19 ಸೋಂಕಿತರಿಗೆ ಈಗಾಗಲೇ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಸೋಂಕಿತರ ಮಗಳು, ಅಳಿಯ ಸೇರಿ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 22 ಜನರನ್ನು ಸಹ ಸಾಂಸ್ಥಿಕ ಪ್ರತ್ಯೇಕ ವಾಸದಲ್ಲಿಡಲಾಗಿದೆ. ಸೋಂಕಿತರು ಉತ್ತರಾಖಂಡದಿಂದ ಬಂದ ನಂತರ ಕೌಲ್‌ಬಜಾರ್‌ನ ಕೆಲ ಸ್ಥಳಗಳಲ್ಲಿ ತಿರುಗಾಡಿದ್ದಾನೆ ಎಂಬ ಮಾಹಿತಿ ಲಭ್ಯವಿದೆ. ಕೆಲವರು ಸ್ವಯಂ ಪ್ರೇರಣೆಯಿಂದ ತಪಾಸಣೆಗೆ ಒಳಗಾಗುತ್ತಿದ್ದಾರೆ. ಇನ್ನು ಕೆಲವರನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಅಂತಾರಾಜ್ಯದಿಂದ ಬಂದರೆ ಕ್ವಾರಂಟೈನ್‌ ಕಡ್ಡಾಯ: ನೆರೆಯ ಆಂಧ್ರಪ್ರದೇಶ, ತೆಲಂಗಾಣ ಸೇರಿ ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಯಾರೇ ಬಂದರೂ ಅಂತಹವರನ್ನು 14 ದಿನಗಳ ಕಾಲ ಸಾಂಸ್ಥಿಕ ಪ್ರತ್ಯೇಕ ವಾಸದಲ್ಲಿ ಇಡುವುದು ಕಡ್ಡಾಯ. ಒಂದು ವೇಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್‌ಗೆ ಬರುವವರು ಅಲ್ಲಿನ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಆಂಬ್ಯುಲೆನ್ಸ್‌ನಲ್ಲಿ ಮಾತ್ರ ಬರುವವರಿಗೆ ಅವಕಾಶ ನೀಡಲಾಗುವುದು. ಅದನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಜಿಲ್ಲೆಗೆ ಬಂದರೆ ಅಂತಹವರನ್ನು 14 ದಿನಗಳ ಕಾಲ ಸಾಂಸ್ಥಿಕ ಪ್ರತ್ಯೇಕ ವಾಸದಲ್ಲಿಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಸ್‌ಪಿ ಸಿ.ಕೆ.ಬಾಬಾ ಮಾತನಾಡಿ, ನೆರೆ ರಾಜ್ಯದಿಂದ ಜನರು ನುಸುಳದಂತೆ ತೀವ್ರ ನಿಗಾ ವಹಿಸಲಾಗಿದ್ದು, ಮುಖ್ಯ ರಸ್ತೆ ಬಿಟ್ಟು, ಕಾಲುವೆ ದಾರಿ, ಹೊಲಗಳ ಮೂಲಕ ಬರುವವರ ಮೇಲೂ ಸಹ ಕಣ್ಣಿಡಲಾಗಿದೆ. ಆಂಧ್ರದೊಂದಿಗೆ ಗಡಿ ಸಂಪರ್ಕ ಹೊಂದಿರುವ ಸಂಡೂರು, ಬಳ್ಳಾರಿ ಮತ್ತು ಸಿರಗುಪ್ಪದ 65 ಹಳ್ಳಿಗಳಲ್ಲಿ ಪ್ರತಿನಿತ್ಯ ಮೂರು ಗಸ್ತು ವಾಹನಗಳು ನಿರಂತರವಾಗಿ ಸಂಚರಿಸುತ್ತಿವೆ. ಜನರು ನುಸುಳದಂತೆ ನಿಗಾವಹಿಸುವ ನಿಟ್ಟಿನಲ್ಲಿ ಈಗಾಗಲೇ ಪ್ರತಿ ತಾಲೂಕಿಗೆ ಒಬ್ಬರನ್ನು ನೋಡಲ್‌ ಅಧಿಕಾರಿಗಳನ್ನ ನೇಮಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಕೆ.ನಿತೀಶ್‌, ಅಪರ ಜಿಲ್ಲಾಧಿಕಾರಿ ಮಂಜುನಾಥ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.