28 ಕೋಟಿ ಅನುದಾನದಲ್ಲಿ ರಸ್ತೆ ನಿರ್ಮಾಣ
ಎಚ್‌ಎಲ್‌ಸಿ ಉಪಕಾಲುವೆ ಮೇಲೆ ರಸ್ತೆ ನಿರ್ಮಾಣಕ್ಕೆ ಶಾಸಕ ರೆಡ್ಡಿ ಭೂಮಿಪೂಜೆ
Team Udayavani, Mar 8, 2020, 12:48 PM IST
ಬಳ್ಳಾರಿ: ನಗರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ. ಸೋಮಶೇಖರ ರೆಡ್ಡಿಯವರು ಭೂಮಿಪೂಜೆ ನೆರವೇರಿಸಿ ಶನಿವಾರ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಹೊರವಲಯದ ಎಚ್ ಎಲ್‌ಸಿ ಕಾಲುವೆಯ 14ನೇ ವಿತರಣಾ ಉಪಕಾಲುವೆ ಎಡದಂಡೆಯ ಮೇಲೆ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಲೋಕೋಪಯೋಗಿ ಇಲಾಖೆಯ 28 ಕೋಟಿ ರೂ. ಅನುದಾನದಲ್ಲಿ ಈ ರಸ್ತೆಯನ್ನು ನಿರ್ಮಿಸಲಾಗುತ್ತದೆ. ನಗರದ ಕೊಳಗಲ್ಲು ರಸ್ತೆಯಿಂದ ಮೋಕಾ ರಸ್ತೆವರೆಗಿನ ಕಾಲುವೆ ಮೇಲಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದು ನಗರಕ್ಕೆ ಮಿನಿ ರಿಂಗ್ ರಸ್ತೆಯಾಗಿ ನಿರ್ಮಾಣವಾಗಲಿದೆ. ಈ ರಸ್ತೆಯಿಂದ ನಗರ ಹೊರವಲಯದಲ್ಲಿನ ಜನರಿಗೆ ಅನುಕೂಲವಾಗಲಿದೆ. ಮೇಲಾಗಿ ಕಾಲುವೆ ಮೇಲೆ ರಸ್ತೆ ನಿರ್ಮಿಸಲು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯೂ ಅನುಮತಿ ನೀಡಿದೆ. ಬೃಹತ್ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಶಾಲಾ ಮಿನಿಬಸ್, ಬೈಕ್ ಸೇರಿ ಇನ್ನಿತರೆ ಲಘು ವಾಹನಗಳು ಸಂಚರಿಸಲು ಅನುಕೂಲವಾಗಲಿದೆ ಎಂದವರು ತಿಳಿಸಿದರು.
ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 63 ನಿರ್ಮಾಣ ಕಾಮಗಾರಿ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣವೇನೋ ಗೊತ್ತಿಲ್ಲ. 1200 ಕೋಟಿ ರೂ. ವೆಚ್ಚದಲ್ಲಿ ಆಗಬೇಕಿದ್ದ ಹೆದ್ದಾರಿ ಕಾಮಗಾರಿಗೆ ಗ್ಯಾಮನ್ ಇಂಡಿಯಾ ಕಂಪನಿಯವರು ಕೇವಲ 800 ಕೋಟಿ ರೂ.ಗೆ ಟೆಂಡರ್ ಹಾಕಿದ್ದಾರೆ. ಹಾಗಾಗಿ ನಷ್ಟವಾಗಿರಬಹುದು. ಆದರೂ, ಒಂದು ಭಾಗದ ರಸ್ತೆಯನ್ನು ಪೂರ್ಣಗೊಳಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದ್ದು, ಇದಕ್ಕಾಗಿ ಸಂಸದ ವೈ. ದೇವೇಂದ್ರಪ್ಪ, ಶಾಸಕ ನಾಗೇಂದ್ರ ಸೇರಿ ನಿಯೋಗದೊಂದಿಗೆ ದೆಹಲಿ ತೆರಳಿ ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಕಾಮಗಾರಿ ಪೂರ್ಣಗೊಳಿಸಲು ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ರಾಮಾಯಣವನ್ನು ವಾಲ್ಮೀಕಿ, ಸಂವಿಧಾನವನ್ನು ಅಂಬೇಡ್ಕರ್ ಬರೆದಿದ್ದಾರೆ. ಇಂಥಹ ಮಹಾನ್ ಗ್ರಂಥಗಳನ್ನು ಎಸ್ಸಿ, ಎಸ್ಟಿ ಸಮುದಾಯದವರು ಬರೆದಿದ್ದು, ಅವರನ್ನು ನಾವು ಇಂದು ದೂರ ಇಡುತ್ತಿದ್ದೇವೆ. ಎಲ್ಲಾರೂ ಹೊಂದಿಕೊಂಡು ಹೋಗಬೇಕು ಎಂಬ ಅರ್ಥದಲ್ಲಿ ಯತ್ನಾಳ್ ಹೇಳಿದ್ದಾರೆ. ಇದನ್ನು ಅಪಾರ್ಥ ಮಾಡಿಕೊಳ್ಳುವುದು ಬೇಡ ಎಂದು ಶಾಸಕ ಸೋಮಶೇಖರ ರೆಡ್ಡಿ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಬಳ್ಳಾರಿ ನಗರಾಭಿವೃದ್ಧಿ ಅಧ್ಯಕ್ಷ ಸ್ಥಾನಕ್ಕೆ ಇನ್ನು ಯಾರನ್ನೂ ಆಯ್ಕೆ ಮಾಡಿಲ್ಲ. ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಸಚಿವರಾದ ಆನಂದ್‌ಸಿಂಗ್, ಬಿ. ಶ್ರೀರಾಮುಲು, ನಾನು ಎಲ್ಲರೂ ಸೇರಿ ಚರ್ಚೆ ಮಾಡಿ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ. ಯಾವುದೇ ಹೆಸರನ್ನು ಫೈನಲ್ ಆಗಿಲ್ಲ. ದಮ್ಮೂರು ಶೇಖರ್ ಅವರ ಹೆಸರನ್ನು ಸಹ ಅಂತಿಮಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಬಳ್ಳಾರಿಯಲ್ಲಿ ಶಂಕಿತ ಕೊರೊನಾ ವೈರಸ್ ಪತ್ತೆಯಾಗಿದೆ. ಇಬ್ಬರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಜತೆಗೆ ಅವರಿಗೆ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ. ಯಾವುದೇ ಫ್ಯಾಕ್ಟರಿಗೆ ಬಂದವರಾಗಿದ್ದಾರೆ ಎಂಬ ಮಾಹಿತಿ ಇದೆ. ಇದರಿಂದ ಯಾವುದೇ ಆತಂಕವಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಮಲ್ಲನಗೌಡ, ಮೋತ್ಕರ್ ಶ್ರೀನಿವಾಸ್, ಕೆಎಂಎಫ್ ನಿರ್ದೇಶಕ ವೀರಶೇಖರರೆಡ್ಡಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.