ಬಳ್ಳಾರಿ ವಿವಾದ: ದಶಕದಲ್ಲಿ ಐವರು ಸಚಿವರ ರಾಜೀನಾಮೆ!
ಜನಾರ್ದನ ರೆಡ್ಡಿ, ಶ್ರೀರಾಮುಲು, ಪರಮೇಶ್ವರ್ ನಾಯ್ಕ, ಸಂತೋಷ್ ಲಾಡ್ ಬಳಿಕ ನಾಗೇಂದ್ರ ಸರದಿ
Team Udayavani, Jun 7, 2024, 6:30 AM IST
ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯ ರಾಜಕೀಯ ನಾಯಕರಿಗೂ ವಿವಾದಕ್ಕೂ ಬೆಂಬಿಡದ ನಂಟು ಇದ್ದಂತಿದೆ. ಒಂದು ದಶಕದಲ್ಲಿ ಹಲವು ರಾಜಕೀಯ ನಾಯಕರು ವಿವಾದ, ಅಕ್ರಮದ ಆರೋಪಕ್ಕೆ ತುತ್ತಾಗಿದ್ದಾರೆ. ಕೆಲವರು ರಾಜೀನಾಮೆ ಸಲ್ಲಿಸಿ ಅಧಿಕಾರ ಕಳೆದುಕೊಂಡಿದ್ದಾರೆ. ಈಗ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿ ಸಿ ನಾಗೇಂದ್ರ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ನಾಗೇಂದ್ರ ಕೂಡ ಇದೇ ಬಳ್ಳಾರಿಯವರು.
ನೈಸರ್ಗಿಕ ಸಂಪತ್ತು, ಐತಿಹಾಸಿಕ ಪ್ರವಾಸಿ ತಾಣಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬಳ್ಳಾರಿ, ಅಕ್ರಮ ಗಣಿಗಾರಿಕೆಯಿಂದ ಅಷ್ಟೇ ಕುಖ್ಯಾತಿಯನ್ನೂ ಪಡೆದಿದೆ. ಹೀಗಾಗಿ ಅಕ್ರಮ ಗಣಿಗಾರಿಕೆ ಸಹಿತ ಇನ್ನಿತರ ಭ್ರಷ್ಟಾಚಾರದ ಆರೋಪಗಳಿಗೆ ಜಿಲ್ಲೆಯ ಸಚಿವರ ತಲೆದಂಡಗಳೂ ಆಗಿವೆ.
ಕಳೆದ ಒಂದು ದಶಕದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು, ಧಾರವಾಡ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ಅವರು ಅಕ್ರಮಗಳ ಆರೋಪಕ್ಕೆ ಸಂಬಂಧಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ನಾಗೇಂದ್ರ ಸರದಿ.
ಅಕ್ರಮ ಗಣಿಗಾರಿಕೆ ಉರುಳು
2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿ ಕಾರದಲ್ಲಿದ್ದಾಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ ಹೆಚ್ಚು ಸದ್ದು ಮಾಡಿತು. ಹಾಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಿಂದಲೇ ಬಳ್ಳಾರಿಗೆ ಪಾದಯಾತ್ರೆ ಮಾಡಿದರು. ಪರಿಣಾಮ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸ್ವಾಭಾವಿಕವಾಗಿ ಅಂದಿನ ಸಚಿವರಾಗಿದ್ದ ಜಿ.ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲು ಸಹಿತ ಹಲವರು ಸಚಿವ ಸ್ಥಾನ ಕಳೆದುಕೊಂಡಿದ್ದರು. ಅಲ್ಲದೆ, ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಸಿಬಿಐ ಬಂಧನಕ್ಕೊಳಗಾಗಿದ್ದರು. ಲೋಕಾಯುಕ್ತ ವರದಿಯಲ್ಲಿ ಹೆಸರು ಬಂದಿದ್ದಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅ ಧಿಕಾರ ಕಳೆದುಕೊಳ್ಳಬೇಕಾಯಿತು.
ಲಾಡ್ ರಾಜೀನಾಮೆ
2013ರಲ್ಲಿ ರಾಜ್ಯದಲ್ಲಿ ಅ ಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದಲ್ಲಿ ಸಿಎಂ ಸಿದ್ದರಾಮಯ್ಯ, ಮೊದಲ ಅವ ಧಿಯಲ್ಲೇ ಸಂತೋಷ್ ಎಸ್.ಲಾಡ್ ಅವರಿಗೆ ವಾರ್ತಾ ಮತ್ತು ಪ್ರಸಾರ ಖಾತೆ ನೀಡುವ ಜತೆಗೆ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ವಹಿಸಿದ್ದರು. ಆದರೆ ಅಧಿ ಕಾರ ವಹಿಸಿಕೊಂಡ 6 ತಿಂಗಳಲ್ಲೇ ಇವರ ವಿರುದ್ಧ ಅಕ್ರಮ ಗಣಿಗಾರಿಕೆ, ಅರಣ್ಯ ನಾಶ ಪ್ರಕರಣಕ್ಕೆ ಸಂಬಂಧಿ ಸಿ ಅಂದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಆರೋಪಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
– ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.