ಮದುವೆಗೆ ಬರದಂತೆ ಆಹ್ವಾನ!
ಹೊಸಪೇಟೆ ಮದುಮಗನ ವಿಶಿಷ್ಟ ವಾಟ್ಸ್ ಆ್ಯಪ್ ಆಮಂತ್ರಣ ಪತ್ರಿಕೆ
Team Udayavani, May 9, 2020, 5:21 PM IST
ಬಳ್ಳಾರಿ: ಮದುವೆಗೆ ಬನ್ನಿ ಎಂದು ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸೋದು ಮಾಮೂಲು. ಆದರೆ ಕೋವಿಡ್ ಎಂಬ ಮಹಾಮಾರಿ ಮದುವೆ ಖುಷಿ, ಆಮಂತ್ರಣ ಪತ್ರಿಕೆಯ ಆಹ್ವಾನ ಎಲ್ಲದಕ್ಕೂ ಬ್ರೇಕ್ ಹಾಕಿದೆ. ಆದರೆ, ಲಾಕ್‌ಡೌನ್ ಅವಧಿಯಲ್ಲೇ ಮದುವೆಗೆ ಸಿದ್ಧವಾಗಿರುವ ಹೊಸಪೇಟೆಯ ಮದುಮಗನೊಬ್ಬ ವಾಟ್ಸ್‌ಆ್ಯಪ್ ಆಮಂತ್ರಣ ಪತ್ರಿಕೆಯಲ್ಲಿ ಮದುವೆಗೆ ಬರದಂತೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊಸಪೇಟೆಯ ಚಿರಂಜೀವಿ ಕರಣಂ ಎನ್ನುವವರು ಮೇ 10 ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ವಿಭಿನ್ನ ರೀತಿಯಲ್ಲಿ ಆಮಂತ್ರಣ ಪತ್ರಿಕೆ ರೂಪಿಸಿ ವಾಟ್ಸ್‌ಆ್ಯಪ್ ಮೂಲಕ ಆಹ್ವಾನ ನೀಡುತ್ತಿದ್ದಾರೆ.
ಹೇಗಿದೆ ವಾಟ್ಸ್‌ಆ್ಯಪ್ ಓಲೆ?: “ಸರಸ್ವತಿ ಎನ್ನುವವರೊಂದಿಗೆ ನನ್ನ ವಿವಾಹ ನಡೆಯಲಿದೆ. ಈ ವಿಷಯವನ್ನು ತಮ್ಮ “ಮಾಹಿತಿಗಾಗಿ’ ತಿಳಿಸುವುದಕ್ಕೆ ನನ್ನ ಮನಸ್ಸು ನಿರಾಕರಿಸುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ನನ್ನ ಬಂಧು- ಬಾಂಧವರನ್ನು ಮತ್ತು ಆತ್ಮೀಯರನ್ನು ಆಹ್ವಾನಿಸುವುದು ಕಷ್ಟಸಾಧ್ಯವಾಗುತ್ತಿದೆ. ಕ್ಷಮೆ ಇರಲಿ. ತಾವೆಲ್ಲ ಪರಿಸ್ಥಿತಿಯನ್ನು ಅರಿತುಕೊಂಡು ಮೇ 10 ರಂದು ಭಾನುವಾರ ನಡೆಯಲಿರುವ ನನ್ನ ಮದುವೆಗೆ ತಾವೆಲ್ಲರೂ ತಮ್ಮ ಮನೆಯಿಂದಲೇ ಆಶೀರ್ವದಿಸಬೇಕು ಎಂದು ತುಂಬು ಹೃದಯದಿಂದ ವಿನಂತಿಸುತ್ತೇನೆ. ಮುಂದಿನ ದಿನಗಳಲ್ಲಿ ನಾವೇ ತಮ್ಮ ಮನೆಗಳಿಗೆ ಆಗಮಿಸಿ ತಮ್ಮ ಆಶೀರ್ವಾದ ಪಡೆಯುತ್ತೇವೆ’ ಎಂದವರು ಕೋರಿದ್ದಾರೆ. ಜತೆಗೆ ಮನೆಯಲ್ಲೇ ಇರಿ, ಮಾಸ್ಕ್ ಧರಿಸಿ ಸಂಚರಿಸಿ, ಕೋವಿಡ್ ಓಡಿಸಿ ಎಂಬ ಸಂದೇಶದ ಜತೆಗೆ ಕೋವಿಡ್ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.