ಮೆಕ್ಕೆ ಜೋಳ ಬೆಳೆಗಾರರಿಗೆ ಅನ್ಯಾಯ
Team Udayavani, May 16, 2020, 3:15 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಇಲ್ಲಿನ ರಾಬಕೊ ಹಾಲು ಉತ್ಪಾದಕರ ಒಕ್ಕೂಟದಿಂದ ಹೆಚ್ಚುವರಿಯಾಗಿ ಮೆಕ್ಕೆಜೋಳ ಖರೀದಿಸಬೇಕು ಎಂದು ಒತ್ತಾಯಿಸಿ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬುಕ್ಕಾ ಮಲ್ಲಿಕಾರ್ಜುನಗೆ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಮನವಿ ಸಲ್ಲಿಸಿದರು.
ರಾಜ್ಯದ ಹಾಲು ಉತ್ಪಾದಕರ ಸಹಕಾರ ಸಂಘದ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿ ಹೊಳಿಯವರು ರಾಜ್ಯದಲ್ಲಿ ರೈತರು ಬೆಳೆದಿರುವ ಮೆಕ್ಕೆಜೋಳವನ್ನು ಸರ್ಕಾರದ ಬೆಂಬಲ ಬೆಲೆ 1760 ರೂಳಿಗೆ ಖರೀದಿಸುತ್ತೇವೆ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ. ಆದರೆ, ಬಳ್ಳಾರಿ ಜಿಲ್ಲೆಯಲ್ಲಿ ಹಡಗಲಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲೂಕುಗಳಿಗೆ ಸೇರಿದ ಕೇವಲ 89 ರೈತರು ಬೆಳೆದಿದ್ದ 4024 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ನೋಂದಾಯಿಸಿಕೊಳ್ಳಲಾಗಿದೆ. ಆದರೆ, ಜಿಲ್ಲೆಯ ಸಿರುಗುಪ್ಪ, ಬಳ್ಳಾರಿ ಗ್ರಾಮಾಂತರ, ಕುರುಗೋಡು, ಕಂಪ್ಲಿ, ಹೊಸಪೇಟೆ, ಸಂಡೂರು ಭಾಗದಲ್ಲಿ ಮೆಕ್ಕೆಜೋಳ ಬೆಳೆದಿರುವ ರೈತರ ನೋಂದಣಿ ಆಗಿಲ್ಲ. ಈ ಕುರಿತು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬುಕ್ಕಾ ಮಲ್ಲಿಕಾರ್ಜುನ ಅವರನ್ನು ಕೇಳಿದರೆ, ಧಾರವಾಡಕ್ಕೆ ಮೆಕ್ಕೆಜೋಳ ಸಾಕು ಎಂದು ತಿಳಿಸಿದ್ದಾರೆ.
ಇದು ಸರಿಯಲ್ಲ. ರಾಜ್ಯ ಸರ್ಕಾರ ರೈತರಿಂದ ಮೆಕ್ಕಜೋಳ ಖರೀದಿಸುವುದಾಗಿ ತಿಳಿಸಿ ಇದೀಗ ಕೇವಲ ಉತ್ತರ ಕರ್ನಾಟಕದಿಂದ 75000 ಕ್ವಿಂಟಲ್ ಸಾಕು ಎಂದು ತಿಳಿಸಿದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ರೈತರಿಗೆ ಸಂಪೂರ್ಣ ಅನ್ಯಾಯವಾಗಲಿದೆ. ಈ ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ದೂರವಾಣಿ ಕರೆ ಮಾಡಿ ಈ ಅನ್ಯಾಯದ ಕುರಿತು ಪರಿಶೀಲಿಸಿ ಹೆಚ್ಚುವರಿ ಖರೀದಿಸಬೇಕಾಗಿ ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.