ಮೆಕ್ಕೆಜೋಳ ಖರೀದಿಯಲ್ಲಿ ಮಾರ್ಪಾಟು ಅಗತ್ಯ: ಕಾಂತಪ್ಪ
Team Udayavani, May 14, 2020, 2:47 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿಗೆ ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ, ಕೆಲ ಮಾರ್ಪಾಟು ಮಾಡಬೇಕಿದೆ ಎಂದು ರಾಬಕೊ ಹಾಲು ಒಕ್ಕೂಟದ ನಿರ್ದೇಶಕ ಶ್ರೀಕಾಂತಪ್ಪ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಣ್ಣ, ಅತಿ ಸಣ್ಣ ರೈತರಿಂದ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಸುವುದಾಗಿ ತಿಳಿಸಿದ್ದಾರೆ.ಆದರೆ, ಸಣ್ಣ ಅತಿ ಸಣ್ಣ ರೈತರು ಸಹ 100 ಕ್ವಿಂಟಲ್ ಮೆಕ್ಕೆಜೋಳ ಬೆಳೆಯುತ್ತಾರೆ. ಹೀಗಾಗಿ ಕೇವಲ 50 ಕ್ವಿಂಟಲ್ ಮಾತ್ರ ಖರೀದಿಸಿದರೆ ಉಳಿದ 50 ಕ್ವಿಂ. ಮಾರಲು ರೈತ ಎಲ್ಲಿ ಹೋಗಬೇಕು? ಹೀಗಾಗಿ ಸಣ್ಣ, ಅತಿ ಸಣ್ಣ ರೈತರ ಪೂರ್ಣ ಮೆಕ್ಕೆಜೋಳ ಖರೀದಿಗೆ ಕ್ರಮ ವಹಿಸಬೇಕು ಎಂದು ಅವರು ಹೇಳಿದ್ದಾರೆ.
ಇನ್ನು ಮೆಕ್ಕೆಜೋಳ ಮಾರುವ ರೈತ ನಿರ್ದಿಷ್ಟ ನಗರಕ್ಕೆ ಹೋಗಬೇಕು. ಬಳ್ಳಾರಿ ರೈತರು ಧಾರವಾಡಕ್ಕೆ ಹೋಗಬೇಕಿದೆ. ಇದು ಕಷ್ಟ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿಗೆ ಪ್ರತಿ ಜಿಲ್ಲೆಯಲ್ಲಿ ಕೇಂದ್ರ ತೆರೆಯಬೇಕು. ಜೊತೆಗೆ ಚಿಕ್ಕ, ದೊಡ್ಡ ರೈತ ಎಂದು ಬೇಧ ಭಾವ ಮಾಡದೆ ಎಲ್ಲರಿಂದಲೂ ಮೆಕ್ಕೆಜೋಳ ಖರೀದಿಸಬೇಕು. ಈ ಕುರಿತು ಈಗಾಗಲೇ ರಾಬಕೊ ಅಧ್ಯಕ್ಷ, ಕೆಎಂಎಫ್ ನಿರ್ದೇಶಕ, ಶಾಸಕ ಭೀಮಾನಾಯ್ಕ, ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕರ ಗಮನ ಸೆಳೆಯಲಾಗಿದೆ. ಶಾಸಕರು, ಕೆಎಂಎಫ್ ಅಧ್ಯಕ್ಷರು ಈ ಕುರಿತು ನಿರ್ಣಯ ಕೈಗೊಂಡು, ಶೀಘ್ರ ಎಲ್ಲಾ ಜಿಲ್ಲಾ ಕೇಂದ್ರ ಅಥವಾ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುವ ಪ್ರದೇಶದಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.