ಕೋವಿಡ್ ನಿಂದ ಜಿಲ್ಲೆ ಶೀಘ್ರ ಮುಕ್ತ
ಶೀಘ್ರದಲ್ಲೇ ಜಿಲ್ಲಾಡಳಿತದಿಂದ ಸಿಹಿ ಸುದ್ದಿ |ಕೋವಿಡ್ ವಾರಿಯರ್ಸ್‌ಗೆ ಸರ್ಕಾರದಿಂದ ಸಹಾಯ: ಆನಂದಸಿಂಗ್
Team Udayavani, Apr 26, 2020, 1:00 PM IST
ಬಳ್ಳಾರಿ: ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್ ಮಾತನಾಡಿದರು.
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆ ಶೀಘ್ರದಲ್ಲೇ ಕೋವಿಡ್ ವೈರಸ್‌ನಿಂದ ಮುಕ್ತವಾಗಲಿದ್ದು ಈ ಕುರಿತು ಬಳ್ಳಾರಿ ಜಿಲ್ಲಾಡಳಿತ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್ ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಶನಿವಾರ ನಡೆದ ಸರ್ವ ಪಕ್ಷಗಳ ಸದಸ್ಯರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಬಳ್ಳಾರಿ ಜಿಲ್ಲೆ ಕೋವಿಡ್ ಸೋಂಕು ಆವರಿಸಿದ್ದು, ಇದರಿಂದ ಬಳ್ಳಾರಿ ಜಿಲ್ಲೆ ಮುಕ್ತವಾಗುವ ದಿನ ಹತ್ತಿರದಲ್ಲೇ ಇದ್ದು, ಜಿಲ್ಲಾಡಳಿತ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.
ಸರ್ವ ಪಕ್ಷಗಳ ಶಾಸಕರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಸಂಸದರು, ವಿಧಾನ ಪರಿಷತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಹಲವರು ಆರೋಗ್ಯ ಕ್ಷೇತ್ರ, ರೈತರು, ಬೆಳೆಗಾರರ ಪರವಾಗಿ ಬೆಳೆಹಾನಿಗೆ ಕ್ರಮಕೈಗೊಳ್ಳಬೇಕು ಎಂಬ ವಿಷಯಗಳನ್ನು ಪ್ರಸ್ತಾಪಿಸಲಾಗಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.
ಕೋವಿಡ್ ವಾರಿಯರ್ಗೆ ಸಹಾಯ: ಜಿಲ್ಲೆಯಲ್ಲಿ ಕೋವಿಡ್ ವಿರುದ್ಧ ಹೋರಾಡುತ್ತಿರುವ ವಾರಿಯರ್ ಸಹಾಯಕ್ಕಾಗಿ ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ವೈರಸ್ ನಿಯಂತ್ರಣಕ್ಕೆ ಜಿಲ್ಲಾ ಖನಿಜ ನಿಧಿ ಅನುದಾನ ಬಳಸಿಕೊಳ್ಳಲು ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಗಮನಕ್ಕೂ ತಂದಿದ್ದು ಶೇ. 30ರಷ್ಟು ಅನುದಾನ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ. ಈ ಕುರಿತು ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳಿಗೂ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು. ಸಂಸದರಾದ ವೈ. ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಬಿ. ನಾಗೇಂದ್ರ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಡಿಸಿ ಎಸ್.ಎಸ್. ನಕುಲ್, ಸಿಇಒ ಕೆ. ನಿತೀಶ್, ಎಸ್‌ಪಿ ಸಿ.ಕೆ. ಬಾಬಾ ಮತ್ತಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.