ವಲಸೆ ಕಾರ್ಮಿಕರು ಆಂಧ್ರದ ಪ್ರಕಾಶಂನಲ್ಲಿ ಲಾಕ್‌

ಆಹಾರಕ್ಕಾಗಿ ಪರದಾಟ-ಊರಿಗೆ ಹೋಗಲು ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಮೊರೆ

Team Udayavani, May 7, 2020, 3:39 PM IST

7-May-18

ಬಳ್ಳಾರಿ: ಸಿರುಗುಪ್ಪ ತಾಲೂಕು ರಾರಾವಿ ಗ್ರಾಮದ ಹಲವರು ಮಕ್ಕಳೊಂದಿಗೆ ನೆರೆಯ ಆಂಧ್ರದ ಪ್ರಕಾಶಂ ಜಿಲ್ಲೆಯಲ್ಲಿ ಲಾಕ್‌ ಆಗಿರುವುದು.

ಬಳ್ಳಾರಿ: ದುಡಿಯಲೆಂದು ಮಕ್ಕಳು-ಮರಿಗಳೊಂದಿಗೆ ನೆರೆಯ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಗೆ ಹೋಗಿದ್ದ ಸಿರುಗುಪ್ಪ ತಾಲೂಕು ರಾರಾವಿ ಗ್ರಾಮದ ನಿವಾಸಿಗಳು, ಅಲ್ಲಿಯೇ ಲಾಕ್‌ಡೌನ್‌ ಆಗಿದ್ದು, ಊಟಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ.

ಸಿರುಗುಪ್ಪ ತಾಲೂಕು ರಾರಾವಿ ಗ್ರಾಮದ ಹಲವಾರು ಜನರು ತಮ್ಮ ಮಕ್ಕಳು, ಮರಿಗಳೊಂದಿಗೆ ನೆರೆಯ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಗೆ ದುಡಿಯಲೆಂದು ವಲಸೆ ಹೋಗಿದ್ದರು. ಆದರೆ, ಕೇಂದ್ರ ಸರ್ಕಾರ ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ವಿಧಿಸಿರುವ ಪರಿಣಾಮ ಅಲ್ಲಿಯೇ ಲಾಕ್‌ ಡೌನ್‌ ಆಗಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿಮೀ ದೂರದ ಹೊರವಲಯದ ಹೊಲದಲ್ಲಿ ಟೆಂಟ್‌ಗಳಲ್ಲಿ ಉಳಿದುಕೊಂಡಿರುವ ಇವರಿಗೆ ದುಡಿಯಲು ಕೆಲಸವಿಲ್ಲದೆ, ತಿನ್ನಲು ಒಂದು ಹೊತ್ತಿಗೆ ಊಟವೂ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮನ್ನು ಊರಿಗೆ ಕರೆದೊಯ್ಯುವಂತೆ ಬಳ್ಳಾರಿ ಜಿಲ್ಲಾಡಳಿತಕ್ಕೆ ವಲಸೆ ಕಾರ್ಮಿಕರು ಮನವಿ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್‌ ಆಗಿದೆ. ದುಡಿಯಲೆಂದು ದೂರದ ಪ್ರಕಾಶಂ ಜಿಲ್ಲೆಗೆ ಮಕ್ಕಳು ಮರಿಗಳೊಂದಿಗೆ ಬಂದಿದ್ದೇವೆ. ಇದ್ದ ದವಸ ಧಾನ್ಯಗಳು ಎಲ್ಲವೂ ಖಾಲಿಯಾಗಿದೆ. ಊರೊಳಗೆ ಹೋದರೆ ಕರೆದುಕೊಳ್ಳುತ್ತಿಲ್ಲ. ಎಲ್ಲೂ ಹೋಗುವಂತಿಲ್ಲ. ಅನ್ನ, ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ.

ದೊಡ್ಡವರು ಹೇಗೋ ಇರುತ್ತೇವೆ. ಆದರೆ, ಮಕ್ಕಳನ್ನು ಸುಧಾರಿಸುವುದು ಹೇಗೆ ಎಂಬ ಚಿಂತೆ ನಮ್ಮನ್ನು ಕಾಡುತ್ತಿದೆ. ಇಲ್ಲಿ ವಿಷ ಜಂತುಗಳು ಹೆಚ್ಚಾಗಿದ್ದು, ಅಂಗೈಯಲ್ಲಿ ಜೀವ ಹಿಡಿದು ಬದುಕುತ್ತಿದ್ದೇವೆ. ಹಾಗಾಗಿ ಹೇಗಾದರೂ ಮಾಡಿ ನಮ್ಮನ್ನು ನಮ್ಮೂರಿಗೆ ಹೋಗುವಂತೆ ಮಾಡಿ ಎಂದು ವೀಡಿಯೋದಲ್ಲಿ ಬಳ್ಳಾರಿ ಜಿಲ್ಲಾಡಳಿತಕ್ಕೆ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.