ಪ್ರತಿ ತಿಂಗಳು ಗುರಿ ಸಾಧಿಸದಿದ್ದಲ್ಲಿ ಕ್ರಮ: ಸುಧಾಕರ್
ವಿಮ್ಸ್ ಸಿಬ್ಬಂದಿ ಭರ್ತಿಗೆ ಅಗತ್ಯ ಕ್ರಮ 15ಕ್ಕೆ ಟ್ರಾಮಾಕೇರ್ ಸೆಂಟರ್ ಉದ್ಘಾಟನೆ
Team Udayavani, Jun 13, 2020, 1:44 PM IST
ಬಳ್ಳಾರಿ: ವಿಮ್ಸ್ ಆಡಳಿತ ಭವನದಲ್ಲಿ ಶುಕ್ರವಾರ ನಡೆದ ವೈದ್ಯಾಧಿಕಾರಿಗಳ ಸಭೆಯಲ್ಲಿ ಸಚಿವ ಡಾ| ಸುಧಾಕರ್ ಮಾತನಾಡಿದರು.
ಬಳ್ಳಾರಿ: ವಿಮ್ಸ್ ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಪ್ರತಿ ತಿಂಗಳು ಟಾರ್ಗೆಟ್ ಫಿಕ್ಸ್ ಮಾಡಲಾಗುವುದು. ನಿಗದಿಪಡಿಸಿದ ಗುರಿ ಸಾಧಿಸದಿದ್ದರೇ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ಎಚ್ಚರಿಕೆ ನೀಡಿದರು.
ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ನಡೆದ ವಿಮ್ಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ನಲ್ಲಿ ಬಿಜಿಯಾಗಿದ್ದ ಕಾರಣ ಈ ಕಡೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗಿರಲಿಲ್ಲ. ಇನ್ನು ಮುಂದೆ ಹಾಗಾಗುವುದಕ್ಕೆ ಬಿಡುವುದಿಲ್ಲ. ಸಂಸ್ಥೆಯ ನಿರ್ದೇಶಕರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ವಿಷಯದಲ್ಲಿ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ನಿರ್ದೇಶಕರಿಗೆ ಸೂಚನೆ: ಬಳ್ಳಾರಿ ವಿಮ್ಸ್ ಪ್ರತಿನಿತ್ಯ 2,500ಕ್ಕೂ ಹೆಚ್ಚು ಹೊರರೋಗಿಗಳು ಹಾಗೂ 1 ಸಾವಿರದಷ್ಟು ಜನ ಒಳರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಎಬಿಆರ್‌ಕೆ ಹಣ ಪಡೆಯುವಲ್ಲಿ ತೀರಾ ಹಿಂದುಳಿದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಸುಧಾಕರ್ ಅವರು, ಮಂಗಳೂರಿನ ಖಾಸಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯೊಂದರಲ್ಲಿ 1200 ಹೊರರೋಗಿಗಳು ಹಾಗೂ 600 ಒಳರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ವಾರ್ಷಿಕವಾಗಿ 46 ಕೋಟಿ ರೂ. ಎಬಿಆರ್ ಕೆ ಹಣ ಪಡೆಯುತ್ತಿದೆ. ಆದರೆ, ವಿಮ್ಸ್ ಮಾತ್ರ ಬರೀ 49 ಲಕ್ಷ ರೂ. ಪಡೆದಿರುವುದು ಸರಿಯಲ್ಲ. ಕನಿಷ್ಠ ಏನಿಲ್ಲವೆಂದರೂ 100 ಕೋಟಿ ರೂ. ಪಡೆಯಬೇಕು. ಆ ಹಣ ಬಂದ್ರೇ ವಿಮ್ಸ್‌ನಲ್ಲಿ ಇನ್ನಷ್ಟು ಸುಧಾರಣೆ ಕೈಗೊಳ್ಳಬಹುದು. ಪ್ರತಿವಾರ ಈ ವಿಷಯದಲ್ಲಿ ನಿರ್ದೇಶಕರು ನಿಗಾವಹಿಸಬೇಕು ಎಂದು ಸೂಚಿಸಿದರು.
15ಕ್ಕೆ ಟ್ರಾಮಾಕೇರ್ ಸೆಂಟರ್ ಉದ್ಘಾಟನೆ: ಬಳ್ಳಾರಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾಕೇರ್ ಸೆಂಟರ್ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಮುಖ್ಯಮಂತ್ರಿಗಳನ್ನು ಕರೆದುಕೊಂಡು ಬಂದು ಜು.15ರಂದು ಇದನ್ನು ಉದ್ಘಾಟಿಸಲಾಗುವುದು ಎಂದು ಸಚಿವ ಸುಧಾಕರ್ ಹೇಳಿದರು.
ಔಷಧಿ ಸರಬರಾಜು ಮಾಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರೀಕೃತ ವ್ಯವಸ್ಥೆ ಮಾಡುವುದಕ್ಕೆ ಪರಿಶೀಲಿಸಿ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ| ಗಿರೀಶ್ ಅವರಿಗೆ ಸೂಚಿಸಿದರು. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳ ಹಂತವಾರು ಪ್ರಗತಿ ನೋಡಿಕೊಂಡು ಹಾಗೂ ಡಿಎಂಇ ಒಪ್ಪಿಗೆ ಒಡೆದು ಹಣ ಬಿಡುಗಡೆಗೆ ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು. ವಿಮ್ಸ್ ನಲ್ಲಿ ಹಾಜರಾತಿ ಖಾಸಗಿ ಕ್ಲಿನಿಕ್‌ಅನ್ನು ವೈದ್ಯರು ನಡೆಸುತ್ತಿದ್ದಾರೆ ಎಂಬ ದೂರಿಗೆ ಸಂಬಂಧಿಸಿದಂತೆ ಗರಂ ಆದ ಸಚಿವರಾದ ಸುಧಾಕರ್ ಮತ್ತು ಆನಂದಸಿಂಗ್ ಅವರು, ಆ ಪಟ್ಟಿ ನೀಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಸೋಮಶೇಖರ್ ರೆಡ್ಡಿ, ಅಲ್ಲಂ ವೀರಭದ್ರಪ್ಪ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ| ಗಿರೀಶ್, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ವಿಮ್ಸ್ ನಿರ್ದೇಶಕ ಡಾ| ದೇವಾನಂದ ಇದ್ದರು.
ವಿಮ್ಸ್‌ನಲ್ಲಿ ಸಿಬ್ಬಂದಿ ಭರ್ತಿ ಮಾಡಿಕೊಳ್ಳುವುದಕ್ಕೆ ಸಂಬಂಧಿ ಸಿದಂತೆ ಕೋರ್ಟ್‌ನಲ್ಲಿ ಇರುವ ತಡೆಯಾಜ್ಞೆ ತೆರವುಗೊಳಿಸಿ ಸಿಬ್ಬಂದಿ ಭರ್ತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಗಮನ ಹರಿಸುವಂತೆ ವಿಮ್ಸ್ ನಿರ್ದೇಶಕರಿಗೆ ಸಚಿವ ಸುಧಾಕರ್ ಸೂಚಿಸಿದರು. ವಿಮ್ಸ್ ಸುಸಜ್ಜಿತವಾಗಿ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಏನೆಲ್ಲ ಕ್ರಮಗಳು ಬೇಕೋ ಅವುಗಳನ್ನು ಎರಡ್ಮೂರು ತಿಂಗಳಲ್ಲಿ ಕೈಗೊಳ್ಳಲಾಗುವುದು. ಒಟ್ಟಿನಲ್ಲಿ ಸುಸಜ್ಜಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.