ಜಿಲ್ಲಾದ್ಯಂತ ಗಣರಾಜ್ಯೋತ್ಸವ ಸಂಭ್ರಮ
ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿನಿಗೆ ಸನ್ಮಾನ ಗಮನಸೆಳೆದ ಮಕ್ಕಳ ನೃತ್ಯ ಪ್ರದರ್ಶನ
Team Udayavani, Jan 27, 2020, 12:47 PM IST
ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 71ನೇ ಗಣರಾಜ್ಯೋತ್ಸವದಲ್ಲಿ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.
ಬಳಿಕ ತೆರೆದ ವಾಹನದಲ್ಲಿ ಗೌರವಂದನೆ ಸ್ವೀಕರಿಸಿದರು. ನಂತರ ಪೊಲೀಸ್, ಗೃಹರಕ್ಷಕದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳು ಆಕರ್ಷಕವಾದ ಪಥಸಂಚಲನ ಮೂಲಕ ಧ್ವಜವಂದನೆ ಸಲ್ಲಿಸಿದರು. ಗಣರಾಜ್ಯೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ, ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ, ಜನವರಿ 26ರಂದು ಇಡೀ ಸ್ವತಂತ್ರ ಭಾರತವನ್ನು ‘ಗಣರಾಜ್ಯವೆಂದು’ ಘೋಷಿಸಲಾಯಿತು. ಈ ದಿನದಂದೇ ಮಹಾನ್ ಮಾನವತಾವಾದಿ ಡಾ| ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಂಡಿತು. ಗಣ ರಾಜ್ಯೋತ್ಸವ ಭಾರತದ ಒಂದು ರಾಷ್ಟ್ರೀಯ ಹಬ್ಬವಾಗಿದ್ದು, ಇದನ್ನು “”ಪ್ರಜಾರಾಜ್ಯೋತ್ಸವ” ಎಂಥಲೂ ಕರೆಯುತ್ತೇವೆ. ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ಐತಿಹಾಸಿಕ ದಿನ ಇದಾಗಿದೆ ಎಂದರು.
ಬಳ್ಳಾರಿ ಜಿಲ್ಲೆಯು ಅತ್ಯಂತ ವಿಶಿಷ್ಟ ಜಿಲ್ಲೆಯಾಗಿದೆ. ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆ ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ. ಕೃಷಿ, ಗಣಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳ ಹಿನ್ನೆಲೆಯಲ್ಲಿಯೂ ಈ ಜಿಲ್ಲೆಗೆ ಮಹತ್ವದ ಸ್ಥಾನವಿದೆ. ಜಗತ್ತಿನಲ್ಲಿಯೇ ಶ್ರೇಷ್ಠ ದರ್ಜೆಯ ಕಬ್ಬಿಣ ಮತ್ತು ಉಕ್ಕಿನಾಂಶಗಳಿರುವ ಅಪಾರ ಖನಿಜ ಸಂಪತ್ತನ್ನು ಹೊಂದಿದೆ. ಇಡೀ ದೇಶದಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಕಬ್ಬಿಣದ ಖನಿಜಗಳನ್ನು ಹೊಂದಿದ ದಾಖಲೆ ಈ ಜಿಲ್ಲೆಗಿದೆ. ಐತಿಹಾಸಿಕ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದಲೂ ಈ ಜಿಲ್ಲೆಯಲ್ಲಿ ಹಂಪಿಗೆ ವಿಶೇಷ ಆಕರ್ಷಣೆ ಇದೆ ಎಂದು ಗುಣಗಾನ ಮಾಡಿದರು.
ನಂತರ ಕ್ರೀಡಾಂಗಣದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇವೇಳೆ ಉತ್ತಮವಾಗಿ ಪಥಸಂಚಲನ ನಡೆಸಿದ ಶಾಲಾ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ನೀಡಲಾಯಿತು. ಸಾಧಕರಿಗೆ ಸನ್ಮಾನ: ಇದೇ ವೇಳೆ ರಾಜ್ಯ ಸರ್ಕಾರ ಉತ್ತಮ ಸೇವೆ, ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಆಯ್ಕೆಯಾದ ಜಿಲ್ಲೆಯ ಆರ್ಥಿಕ ಮತ್ತು ಸಾಂಖ್ಯೀಕ ಇಲಾಖೆಯ ಎಸ್.ಎಂ. ವಾಗೀಶ್ ಶಿವಾಚಾರ್ಯ, ಸಹಾಯಕ ಕೃಷಿ ನಿರ್ದೇಶಕ ಎನ್.ನಜೀರ್ ಅಹ್ಮದ್, ಶಸ್ತ್ರ ಚಿಕಿತ್ಸಕ ಡಾ| ಎನ್.ಸಲೀಮ್, ಸಹಾಯಕ ಆಡಳಿತಾ ಧಿಕಾರಿ ಕೆ.ಮಾರುತಿ, ಹ.ಬೊ.ಹಳ್ಳಿ ತಹಶೀಲ್ದಾರ್ ಆಶಪ್ಪ, ಹಡಗಲಿ ತಾಪಂ ಇಒ ಯು.ಎಚ್. ಸೋಮಶೇಖರ್, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಎಸ್.ರಾಜಶೇಖರ್, ಲೆಕ್ಕಾಧೀಕ್ಷಕ ಮಾಲತೇಶ್ ಮರಿಗೌಡರ್, ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ ಗೌಡರನ್ನು ಸನ್ಮಾನಿಸಲಾಯಿತು. ಇವರೊಂದಿಗೆ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಸುದೀಕ್ಷಾ ಅವರನ್ನು ಸನ್ಮಾನಿಸಲಾಯಿತು.
ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಜಿ. ಸೋಮಶೇಖರರೆಡ್ಡಿ, ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಜಿಪಂ ಸಿಇಒ ಕೆ. ನಿತೀಶ್, ಎಸ್ಪಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಎಎಸ್ಪಿ ಲಾವಣ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.