ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಉತ್ತರಾಖಂಡ್‌ದಿಂದ ವಾಪಸ್ ಬಂದವರಿಗೆ ಮಾಡಬೇಕಿತ್ತು ಸಾಂಸ್ಥಿಕ ಕ್ವಾರಂಟೈನ್
Team Udayavani, May 10, 2020, 2:43 PM IST
ಬಳ್ಳಾರಿ: ಬೊಮ್ಮನಹಾಳ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಸೋಮಶೇಖರ ರೆಡ್ಡಿ ಭೂಮಿಪೂಜೆ ನೆರವೇರಿಸಿದರು
ಬಳ್ಳಾರಿ: ಕಳೆದ ಒಂದು ದಶಕದಿಂದ ಹದಗೆಟ್ಟಿದ್ದ ನಗರದ ಬೊಮ್ಮನಹಾಳ್ ರಸ್ತೆಗೆ ಕೊನೆಗೂ ಅಭಿವೃದ್ಧಿ ಭಾಗ್ಯ ಕೂಡಿ ಬಂದಿದ್ದು, ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಬೊಮ್ಮನಹಾಳ್ ರಸ್ತೆಯು ಹದಗೆಟ್ಟಿದ್ದು, ಕಳೆದ ಹನ್ನೊಂದು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾರ್ಯ ನಡೆಯದೆ ನನೆ ಗುದಿಗೆ ಬಿದ್ದಿತ್ತು. ಇದೀಗ ಅಭಿವೃದ್ಧಿ ಭಾಗ್ಯ ಕೂಡಿಬಂದಿದ್ದು, ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೊರೊನಾ ಭೀತಿ ಇದೆಯಾದರೂ, ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಕುಂಠಿತವಾಗಲ್ಲ ಎಂದರು.
ಪ್ರವಾಸಕ್ಕೆಂದು ಉತ್ತರಾಖಂಡ್‌ಗೆ ತೆರಳಿ ವಾಪಸ್ ಬಂದವರನ್ನು ಜಿಲ್ಲಾಡಳಿತ ಎಚ್ಚರಿಕೆ ವಹಿಸಿ ಹೋಂ ಕ್ವಾರಂಟೈನ್ ಮಾಡುವ ಬದಲು ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕಿತ್ತು. ಉತ್ತರಾಖಂಡ್‌ದಿಂದ ವಾಪಸ್‌ಬಂದ 18 ಜನರ ಪೈಕಿ ಒಬ್ಬನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಅಲ್ಲದೇ, ಉತ್ತರಾಖಂಡ್‌ನಿಂದ ಪ್ರವಾಸಿಗರನ್ನು ವಾಪಸ್ ಕರೆತರಲು ಸಹಕರಿಸಿದವರನ್ನು ಸಹ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಶೀಘ್ರದಲ್ಲೇ ಬಳ್ಳರಿ ಜಿಲ್ಲೆ ಕೊರೊನಾ ಮುಕ್ತವಾಗುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಹೊರ ದೇಶಗಳಲ್ಲಿದ್ದ ಭಾರತೀಯರನ್ನು ದೇಶಕ್ಕೆ ವಾಪಸ್ ಕರೆತಂದಂತೆ ಹೊರ ರಾಜ್ಯದಲ್ಲಿರುವವರನ್ನು ಸಹ ಕರೆತರುವ ಪ್ರಯತ್ನ ಮಾಡುತ್ತೇವೆ. ಸಿಎಂ ಯಡಿಯೂರಪ್ಪನವರು ಆ ಕೆಲಸ ಮಾಡುತ್ತಾರೆ ಎಂದವರು ತಿಳಿಸಿದರು. ಪಾಲಿಕೆ ಸದಸ್ಯ ಮೋತ್ಕರ್ ಶ್ರೀನಿವಾಸ್, ಮಲ್ಲನಗೌಡ, ಮಾಜಿ ಮೇಯರ್ ಇಬ್ರಾಹಿಂ ಬಾಬು ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.