ಫಲಾನುಭವಿಗಳಿಗೆ ಯೋಜನೆ ತಲುಪಲಿ

Team Udayavani, Feb 14, 2020, 6:30 PM IST

14-February-35

ಬಳ್ಳಾರಿ: ಸರ್ಕಾರದ ವಿವಿಧ ಇಲಾಖೆಯ ಸೌಲಭ್ಯಗಳನ್ನು ಕಾರ್ಯ ಸುಲಭಗೊಳಿಸುವಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು (ಸಿಎಸ್‌ಸಿ) ಮಾಧ್ಯಮವಾಗಿ ಬಳಸಲಾಗುತ್ತಿದ್ದು, ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಗ್ರಾಮೀಣ ಮಟ್ಟದ ಸ್ವಉದ್ಯಮ ವ್ಯವಸ್ಥಾಪಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ ಅಭಿಪ್ರಾಯ ಪಟ್ಟರು.

ನಗರದ ಬಿಡಿಎಎ ಫುಟ್ಬಾಲ್‌ ಮೈದಾನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಿಎಸ್‌ಸಿಯ ವಿಎಲ್‌ಇಗಳಿಗೆ ಸೇವಾಸಿಂಧು ಯೋಜನೆಯಡಿ ಒಳಪಡುವ ಆನ್‌ಲೈನ್‌ ಸೇವೆಗಳ ಕುರಿತಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಸೇವಾಸಿಂಧು ಯೋಜನೆಯಡಿಯಲ್ಲಿ ಸೇವೆ ನೀಡುವ ಜಿಲ್ಲೆಯಲ್ಲಿ ಬಳ್ಳಾರಿ ಎರಡನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಸರ್ಕಾರದ ಎಲ್ಲ ಸೇವೆಗಳನ್ನು 45 ಇಲಾಖೆಗಳ 415 ವಿವಿಧ ಯೋಜನೆಗಳನ್ನು ಸೇವಾಸಿಂಧುವಿನಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆನ್‌ ಲೈನ್‌ ಅರ್ಜಿ ಸ್ವೀಕಾರ ಸಂದರ್ಭದಲ್ಲಿ ದಾಖಲೆ ನೀಡುವ ವಿಚಾರದಲ್ಲಿ ಕೆಲ ಗೊಂದಲ ಉಂಟಾಗಿ ತಿರಸ್ಕೃತಗೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದ ಜನರಲ್ಲಿ ತಪ್ಪು ಭಾವನೆ ಉಂಟಾಗಿ ಸರ್ಕಾರಿ ಕಚೇರಿಗಳಿಗೆ ಬರುತ್ತಾರೆ. ಆದ್ದರಿಂದ ಸೇವಾ ಕೇಂದ್ರದ ವ್ಯವಸ್ಥಾಪಕರು ಕಾರ್ಯಾಗಾರದಲ್ಲಿ ಸೂಕ್ತ ತರಬೇತಿ ಹಾಗೂ ಮಾಹಿತಿ ಪಡೆದುಕೊಂಡು ಸರಿಯಾದ ಸೇವೆಗಳನ್ನು ನೀಡಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ ಸರ್ಕಾರದ ಆಶಯ ಈಡೇರಿಸಬೇಕು ಎಂದರು.

ಕಾರ್ಮಿಕ ಇಲಾಖೆ ಅಧಿಕಾರಿ ಚಂದ್ರಶೇಖರ ಐಲಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳು ಎಲ್ಲ ವರ್ಗದವರಿಗೂ ತಲುಪಿಸುವ ಉದ್ದೇಶದಿಂದ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸೇವಾ ಸಿಂಧುವಿನ ಯೋಜನೆಯಲ್ಲಿ ಕಾರ್ಮಿಕ ಸಚಿವರಾದ ಸುರೇಶ್‌ ಕುಮಾರ್‌ ಅವರು ಸಹ ಇಲಾಖೆಯ ಸೌಲಭ್ಯ ಸಾರ್ವಜನಿಕರಿಗೆ ತಲುಪಿಸುವಲ್ಲಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇಲಾಖೆ ಸೌಲಭ್ಯಗಳ ಅನುಷ್ಠಾನಕ್ಕೆ 31 ಕಾರ್ಮಿಕ ಬಂಧು ಸಿಬ್ಬಂದಿಯನ್ನು ಜಿಲ್ಲೆಯಾದ್ಯಂತ ನೇಮಿಸಲಾಗಿದ್ದು ವಿಎಲ್‌ಇ ಮತ್ತು ಕಾರ್ಮಿಕ ಬಂಧು ಸಿಬ್ಬಂದಿ ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಜನರಿಗೆ ಸೂಕ್ತ ಸೇವೆಗಳನ್ನು ನೀಡಿ ಎರಡನೇ ಸ್ಥಾನದಲ್ಲಿರುವ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ಬರುವಲ್ಲಿ ಯಶಸ್ವಿಯಾಗಬಹುದು ಎಂದರು.

ಕಾರ್ಯಾಗಾರದಲ್ಲಿ ಅಂಗವಾಗಿ ಆಯ್ದ ಅತ್ಯುತ್ತಮ ವಿಎಲ್‌ಇಗಳಿಗೆ ಪದಕ ವಿತರಣೆ ಹಾಗೂ ಪ್ರಧಾನ ಮಂತ್ರಿ ಶ್ರಮ ಯೋಜನೆ ಫಲಾನುಭವಿಗಳಿಗೆ ಕಾರ್ಡ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಂಗವಿಕಲ ಕಲ್ಯಾಣಾ ಧಿಕಾರಿ ಮಹಾಂತೇಶ್‌,
ಹೊಸಪೇಟೆ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರಾದ ಲಿಯಾಖತ್‌ ಅಲಿ, ಸಿಟಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣಪ್ಪ ಸೇರಿದಂತೆ ವಿವಿಧ ತಾಲೂಕು ಕೇಂದ್ರಗಳ ಸಿಎಸ್‌ಸಿಯ ವಿಎಲ್‌ಇಗಳು ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.