![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 1, 2024, 4:05 PM IST
■ ಉದಯವಾಣಿ ಸಮಾಚಾರ
ಬಳ್ಳಾರಿ: ಕಳೆದ ಹಲವು ವರ್ಷಗಳಿಂದ ಜನರ ಆರೋಗ್ಯ ಕಾಪಾಡುತ್ತ ವೈದ್ಯಕೀಯ ಶಿಕ್ಷಣ ನೀಡುತ್ತ ಬಂದಿರುವ ತಾರಾನಾಥ ವೈದ್ಯಕೀಯ ಕಾಲೇಜು- ಆಸ್ಪತ್ರೆಯ ಕಟ್ಟಡ ಉನ್ನತೀಕರಣ ಹಾಗೂ ಬೋಧನಾ ಔಷಧ ಘಟಕದ ಕಟ್ಟಡ ನಿರ್ಮಾಣ ಆಗಲಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ನಗರದ ಅನಂತಪುರ ರಸ್ತೆಯಲ್ಲಿನ ತಾರಾನಾಥ ಆಯುರ್ವೇದ ಕಾಲೇಜು- ಆಸ್ಪತ್ರೆಯ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಭೂಮಿಪೂಜೆ- ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಎರಡು ಮೂರು ವರ್ಷಗಳಿಂದ ಬಳ್ಳಾರಿಗೆ ಕೆಎಂಇಆರ್‌ಸಿಯ ಅನುದಾನ ಬಿಡುಗಡೆ ಆಗಿರಲಿಲ್ಲ. ಕೆಲವರ
ಆಕ್ಷೇಪಣೆಗಳಿಂದಾಗಿ ಬಿಡುಗಡೆ ವಿಳಂಬ ಆಗಿತ್ತು. ಆದರೆ, ನಾನು ಕೆಎಂಇಆರ್‌ಸಿಯ ಉಸ್ತುವಾರಿ ಹೊತ್ತಿರುವ ನ್ಯಾ|ಸುದರ್ಶನ
ರೆಡ್ಡಿಯವರಿಗೆ ವಸ್ತು ಸ್ಥಿತಿಯನ್ನು ತಿಳಿಸಿದ ಪರಿಣಾಮ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
1200 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿ; ಜಿಲ್ಲೆಯಲ್ಲಿ ತುಂಗಭದ್ರಾ ಜಲಾಶಯ ಇದ್ದರೂ ಕೂಡ ಬಳ್ಳಾರಿ ನಗರಕ್ಕೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಯೋಜನೆ ಮರೀಚಿಕೆಯಾಗಿದೆ. ಹೀಗಾಗಿ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ 1200 ಕೋಟಿ ರೂ.ಗಳ ವೆಚ್ಚದಲ್ಲಿ ಜಲಾಶಯದಿಂದ ನೇರವಾಗಿ ಕುಡಿಯುವ ನೀರಿನ ಪೈಪ್ ಲೈನ್
ಅಳವಡಿಸುವ ಯೋಜನೆ ರೂಪಿಸಲಾಗಿದೆ.
ಕೆಎಂಇಆರ್‌ಸಿ ಅಡಿಯಲ್ಲಿ 1200 ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದ ಶಾಸಕ ಭರತ್ ರೆಡ್ಡಿ ಅವರು, ಈ ಯೋಜನೆಯ ಕಾಮಗಾರಿಯನ್ನು ಆರು ತಿಂಗಳ ಒಳಗೆ ಆರಂಭಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿಯ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ,
ತಾರಾನಾಥ ಆಯುರ್ವೇದ ವೈದ್ಯ ಕಾಲೇಜಿನ ಪ್ರಾಚಾರ್ಯೆ ಡಾ|ಸಯ್ಯದಾ ಅತರ್ ಫಾತೀಮಾ, ಪಾಲಿಕೆಯ ಸದಸ್ಯ ತೆರಿಗೆ ಸ್ಥಾಯಿ
ಸಮಿತಿಯ ಅಧ್ಯಕ್ಷ ನೂರ್ ಅಹ್ಮದ್, ಸದಸ್ಯರಾದ ಕವಿತಾ ಹೊನ್ನಪ್ಪ, ರಾಮಾಂಜ ನೇಯ, ಕಾಂಗ್ರೆಸ್ ಮುಖಂಡರಾದ ಬಿಆರ್
ಎಲ್ ಸೀನಾ, ಹೊನ್ನಪ್ಪ, ಹೊಂಡ್ರಿ ಸೇರಿ ಹಲವರು ಇದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.