ವೇಮನರ ವಿಚಾರಧಾರೆ-ತತ್ವಾದರ್ಶ ಅಳವಡಿಸಿಕೊಳ್ಳಿ

ವೇಮನರ ವಚನಗಳು ಇಡೀ ಮನುಕುಲಕ್ಕೆಕೈಗನ್ನಡಿ: ರೆಡ್ಡಿ

Team Udayavani, Jan 20, 2020, 12:50 PM IST

20-January-23

ಬಳ್ಳಾರಿ: ತೆಲುಗಿನ ಸರ್ವಜ್ಞನೆಂದು ಖ್ಯಾತಿ ಪಡೆದಿರುವ ಮಹಾಯೋಗಿ ವೇಮನ ಅವರ ವಿಚಾರಧಾರೆ, ತತ್ವಾದರ್ಶಗಳು ಹಾಗೂ ಅವರ ಜೀವನಶೈಲಿಯೂ ಇಂದಿಗೂ ಅಮರವಾಗಿವೆ. ಅವರ ತತ್ವಾದರ್ಶಗಳನ್ನು ಯುವಕರು ಪಾಲನೆ ಮಾಡಬೇಕು ಎಂದು ನಗರ ಶಾಸಕ ಜಿ. ಸೋಮಶೇಖ ರೆಡ್ಡಿ ಹೇಳಿದರು.

ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಭಾನುವಾರ ನಡೆದ ಮಹಾಯೋಗಿ ವೇಮನ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಕನ್ನಡದ ಸರ್ವಜ್ಞ, ತಮಿಳಿನ ತಿರುವಳ್ಳರ್‌ ಹಾಗೆಯೇ ತೆಲುಗಿನ ವೇಮನಂತಹ ದಾರ್ಶನಿಕರ ವಚನಗಳು ಇಡೀ ಮನುಕುಲಕ್ಕೆ ಕೈಗನ್ನಡಿಯಾಗಿವೆ. ಹಾಗಾಗಿ ಅವರ ಆದರ್ಶಗಳು ಇಂದಿನ ಯುವಕರು, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂಥ ಮಹನೀಯರ ಜಯಂತಿಗಳು ಕೇವಲ ಜಯಂತಿಗಳಿಗಷ್ಟೇ ಸೀಮಿತವಾಗದೆ, ಅವರ ಮಾನವೀಯ ಮೌಲ್ಯಗಳು ಹಾಗೂ ಸಾಮರಸ್ಯ ಉಂಟು ಮಾಡುವ ನಿಟ್ಟಿನಲ್ಲಿ ಆಚರಣೆಗಳು ಅವಶ್ಯಕವಾಗಿರುತ್ತವೆ. ಯುವಕರು ಕೂಡ ಗುಣಮಟ್ಟದ ಶಿಕ್ಷಣ ಪಡೆದು ಇಂಥ ದಾರ್ಶನಿಕರ ಆದರ್ಶಗಳನ್ನು ಮುಂದಿಟ್ಟುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಮಾತನಾಡಿದರು. ಸಿರುಗುಪ್ಪ ತಾಲೂಕಿನ ಪ್ರೌಢಶಾಲಾ ಶಿಕ್ಷಕ ಬಿ.ವಿಜಯರಂಗಾರೆಡ್ಡಿ ವಿಶೇಷ ಉಪನ್ಯಾಸ ನೀಡಿದರು. ಕೆ.ದೊಡ್ಡಬಸಪ್ಪ ಅವರು ವೇಮನ ಪದ್ಯಗಳ ಗಾಯನ ಪ್ರಸ್ತುತಪಡಿಸಿದರು.

ಅದ್ಧೂರಿ ಮೆರವಣಿಗೆ: ಮಹಾಯೋಗಿ ವೇಮನ ಜಯಂತಿ ನಿಮಿತ್ತ ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಮಹಾಯೋಗಿ ವೇಮನ ಅವರ ಭಾವಚಿತ್ರದ ಮೆರವಣಿಗೆಗೆ ನಗರ ಶಾಸಕರಾದ ಸೋಮಶೇಖರೆಡ್ಡಿ ಚಾಲನೆ ನೀಡಿದರು. ಮೆರವಣಿಗೆಯು ಮುನ್ಸಿಪಲ್‌ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ, ಹೆಚ್‌. ಆರ್‌.ಗವಿಯಪ್ಪ ವೃತ್ತ ಮಾರ್ಗವಾಗಿ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ನೃತ್ಯ ಕಲಾ ಪ್ರಕಾರ ತಂಡಗಳು, ವೀರಗಾಸೆ ಹಾಗೂ ಹಲವು ಜಾನಪದ ಕಲಾತಂಡಗಳು ಭಾಗವಹಿಸಿ ಮೆರವಣಿಗೆಯನ್ನು ಆಕರ್ಷಕಗೊಳಿಸಿದವು. ಈ ವೇಳೆ ಸಮುದಾಯದ ಮುಖಂಡರುಗಳಾದ ಕೋಟೇಶ್ವರ ರೆಡ್ಡಿ, ನಾರಾ ಪ್ರತಾಪ್‌ ರೆಡ್ಡಿ, ಐನಾತರೆಡ್ಡಿ, ಬಸವರಾಜ ರೆಡ್ಡಿ, ಹೇಮಚಂದ್ರ ರೆಡ್ಡಿ, ಡಾ| ಮಹಿಪಾಲ್‌ ರೆಡ್ಡಿ, ಲೇಪಾಕ್ಷಿ ಸೇರಿದಂತೆ ಸಮಾಜದ ಮುಖಂಡರು ಇತರರು ಇದ್ದರು.

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.