ರೈಲಿನಲ್ಲಿ ಜಾರ್ಖಂಡ್‌ಗೆ ಶ್ರಮಿಕರ ಪ್ರಯಾಣ

ವಿವಿಧ ಕ್ಷೇತ್ರಗಳ ಕೆಲಸಕ್ಕೆ ಜಿಲ್ಲೆಗೆ ಬಂದಿದ್ದ 1550 ವಲಸಿಗರು ಜಿಲ್ಲಾಡಳಿತದಿಂದ ಆಹಾರ ವಿತರಣೆ

Team Udayavani, May 23, 2020, 1:04 PM IST

23-May-09

ಸಾಂದರ್ಭಿಕ ಚಿತ್ರ

ಬಳ್ಳಾರಿ: ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಲು ವಲಸೆ ಬಂದಿರುವ ಜಾರ್ಖಂಡ್‌ ಮೂಲದ 1550 ವಲಸೆ ಕಾರ್ಮಿಕರು ನಗರದ ರೈಲು ನಿಲ್ದಾಣದಿಂದ ಶ್ರಮಿಕ ರೈಲು ಮೂಲಕ ತಮ್ಮ ತಮ್ಮ ಊರುಗಳಿಗೆ ಶುಕ್ರವಾರ ಪ್ರಯಾಣ ಬೆಳೆಸಿದರು.

ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌, ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌.ಲಾವಣ್ಯ, ಪ್ರೋಬೆಷನರಿ ಐಎಎಸ್‌ ಈಶ್ವರ್‌ ಕಾಂಡೂ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಡಿವೈಎಸ್ಪಿ ರಾಮರಾವ್‌ ಸೇರಿದಂತೆ ಅನೇಕರು ಸುರಕ್ಷಿತವಾಗಿ ತಮ್ಮೂರಿಗೆ ತಲುಪಿ ಎಂದು ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

ಜಿಲ್ಲೆಯ ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗಾಗಿ ಜಾರ್ಖಂಡ್‌ ರಾಜ್ಯದಿಂದ ಬಂದಿದ್ದ 1550 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ ಟಿಕೆಟ್‌ ಅನ್ನು ಅವರಿಗೆ ನೀಡಲಾಗಿತ್ತು. ಆ ವಲಸಿಗರನ್ನು ಅವರಿಗೆ ನೀಡಲಾದ ಟಿಕೆಟ್‌ ಹಿಂಬದಿಯಲ್ಲಿ ಬರೆಯಲಾದ ಸೀಟ್‌ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್‌ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ಬೆಳಗ್ಗೆ 7ರಿಂದಲೇ ತಿಳಿಸುತ್ತಿದ್ದರು.

ವಲಸಿಗ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬಿಸ್ಕಿತ್‌ ಪ್ಯಾಕೇಟ್‌, ಎರಡು ಬ್ರೆಡ್‌ ಪಾಕೇಟ್‌, ಮೂರು ಲೀಟರ್‌ ನೀರು, ಎರಡು ಪ್ಯಾಕೇಟ್‌ ಆಹಾರ ಪೊಟ್ಟಣ, ಮಿರ್ಚಿ ಬಜಿ ಹಾಗೂ ಇನ್ನಿತರೆ ಆಹಾರ ಸಾಮಗ್ರಿಗಳ ಆಹಾರ ಕಿಟ್‌ಗಳನ್ನು ಪ್ರತಿಯೊಬ್ಬ ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು. ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್‌ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್‌ಕ್ರಾಸ್‌ ಸಂಸ್ಥೆ ಯವರು ಇದೇ ಸಂದರ್ಭದಲ್ಲಿ ಮಾಸ್ಕ್ ಗಳು ಹಾಗೂ ಲಘು ಉಪಹಾರ ವಿತರಿಸಿದರು.

ಜಾರ್ಖಂಡ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು. ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌, ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಅಪರ ಜಿಲ್ಲಾ ಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಎಎಸ್ಪಿ ಲಾವಣ್ಯ ಅವರು ಸ್ಥಳದಲ್ಲಿಯೇ ಉಪಸ್ಥಿತರಿದ್ದು, ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ ಐಲಿ, ಅಲ್ತಾಫ್‌ ಸೇರಿದಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ವಲಸಿಗರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣ ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ.
ಎಸ್‌.ಎಸ್‌.ನಕುಲ್‌,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.