![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Mar 5, 2020, 6:09 PM IST
ಬಳ್ಳಾರಿ: ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯೋಗಕ್ಕೆ ಮತ್ತಷ್ಟು ವೇಗ ಸಿಕ್ಕಿದೆ ಎಂದು ಪತಂಜಲಿ ಯೋಗ ಸಮಿತಿ ಜಿಲ್ಲಾ ಸಂಯೋಜಕ ಇಸ್ವಿ ಪಂಪಾಪತಿ ಅಭಿಪ್ರಾಯ ಪಟ್ಟರು.
ಇಲ್ಲಿನ ಪಟೇಲ್‌ನಗರ ಬಡಾವಣೆಯ ಬಳ್ಳಾರಿ ಬಿಜಿನೆಸ್ ಮ್ಯಾನೇಜ್‌ಮೆಂಟ್ ಕಾಲೇಜಿನ ಮಹಿಳಾ ವಸತಿ ನಿಲಯದಲ್ಲಿ ಜಿಲ್ಲಾ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 4 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಯೋಗಾಭ್ಯಾಸ ಅನಾದಿಕಾಲದಿಂದಲೂ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಯೋಗಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ದೇಶವಷ್ಟೇ ಅಲ್ಲ, ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಯೋಗ ಮಾಡಲು ಮುಂದಾಗಿದ್ದಾರೆ. ಯೋಗದಿಂದಾಗುವ ಪ್ರಯೋಜನಗಳ ಕುರಿತು ಹಾಗೂ ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಲಾಗುತ್ತಿದೆ. ಇತ್ತೀಚೆಗೆ ಪ್ರತಿಯೊಬ್ಬರೂ ಯೋಗದ ಮಹತ್ವ ಅರಿತು ನಿತ್ಯ ಯೋಗ ಮಾಡಲು ಮುಂದಾಗುತ್ತಿರುವುದು ಸಂತಸ ಮೂಡಿಸಿದೆ ಎಂದರು.
ಪತಂಜಲಿ ಯೋಗ ಸಮಿತಿ ಆಶ್ರಯದಲ್ಲಿ ದೇಶಾದ್ಯಂತ ಉಚಿತ ಯೋಗ ಶಿಬಿರಗಳನ್ನು ನಡೆಸಲಾಗುತ್ತಿದೆ. ಅನುಭವಿ ಶಿಕ್ಷಕರಿಂದ ಜನರಿಗೆ ಉಚಿತ ಯೋಗ ತರಬೇತಿ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಇದರ ಸದುಪಯೋಗವನ್ನು ಪಡೆಯಬಹುದು ಎಂದರು. ವಿಶೇಷವಾಗಿ ವಿದ್ಯಾರ್ಥಿಗಳು ನಿತ್ಯ ಯೋಗ ಮಾಡುವುದರಿಂದ ಮನಸ್ಸಿಗೆ ಶಾಂತಿ, ಮಾನಸಿಕ ನೆಮ್ಮದಿ ದೊರೆಯುವದರ ಜೊತೆಗೆ ನೆನಪಿನ ಶಕ್ತಿ ವೃದ್ಧಿಯಾಗಲಿದೆ.
ನಿತ್ಯ ನಿಗದಿ ತ ಸಮಯದಲ್ಲಿ ಯೋಗಾಭ್ಯಾಸ ಮಾಡುವುದರಿಂದ ಆವರಿಸುವ ನಾನಾ ಖಾಯಿಲೆಗಳು ದೂರವಾಗಲಿವೆ. ಹಾಗಾಗಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದ ಜೊತೆಗೆ ಯೋಗ, ಕ್ರೀಡೆಗಳಿಗೂ ಮೊದಲ ಆದ್ಯತೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ಬಿಜೆನೆಸ್ ಮ್ಯಾನೆಜ್‌ಮೆಂಟ್ ಕಾಲೇಜಿನ ಪ್ರಾಚಾರ್ಯ ಎಂ.ರಾಮಚಂದ್ರಪ್ಪ ಮಾತನಾಡಿ, ಇಂದಿನ ಆಧುನಿಕ ಜೀವನದಲ್ಲಿ ಇತ್ತೀಚಿಗೆ ಆಹಾರ ಪದ್ದತಿ, ವಾತಾವರಣ ಬದಲಾಗಿದೆ. ಜನರು ಸಂತಸವನ್ನೇ ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬರೂ ಒತ್ತಡದ ಬದುಕಿಗೆ ಶರಣರಾಗಿದ್ದಾರೆ. ಇದೆಲ್ಲದಕ್ಕೂ ಯೋಗ ರಾಮಬಾಣವಾಗಿದೆ ಎಂದರು.
ಯುವ ಭಾರತ್ ಅಧ್ಯಕ್ಷ ಲಕ್ಷ್ಮೀರೆಡ್ಡಿ, ಪ್ರಭಾರಿ ಪ್ರಕಾಶ್ ನೂರಾರು
ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸ, ಧ್ಯಾನ, ಪ್ರಾಣಾಯಾಮ ಮಾಡಿಸಿದರು. ನಂತರ ಯೋಗದಿಂದಾಗುವ ಉಪಯುಕ್ತತೆ ಕುರಿತು ತಿಳಿಸಿದರು. ಕಾರ್ಯಕ್ರಮದಲ್ಲಿ ವಸತಿ ನಿಲಯದ ಉಸ್ತುವಾರಿ ಆಸ್ಮಿತ್ ಸೇರಿದಂತೆ 120ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.