ಬಸವ ಜಯಂತಿಗೆ ಗ್ರಾಪಂ ಪಿಡಿಒ- ಕಾರ್ಯದರ್ಶಿ ಗೈರು: ಕ್ರಮಕ್ಕೆ ಆಗ್ರಹ
Team Udayavani, Apr 27, 2020, 5:00 PM IST
ಭರಮಸಾಗರ: ಇಲ್ಲಿನ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬಸವ ಜಯಂತಿ ಆಚರಿಸಲಾಯಿತು.
ಭರಮಸಾಗರ: ಇಲ್ಲಿನ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮಕ್ಕೆ ಪಿಡಿಒ ಕೆ.ಎಸ್. ಶ್ರೀದೇವಿ ಮತ್ತು ಕಾರ್ಯದರ್ಶಿ ಕೆ.ಎಸ್. ವೈಶಾಲಿ ಗೈರುಹಾಜರಾಗುವ ಮೂಲಕ ಕರ್ತವ್ಯ ಲೋಪ ಎಸಗಿದ್ದಾರೆ. ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಪಂ ಸಿಇಒ ಹಾಗೂ ತಾಪಂ ಇಒ ಅವರಿಗೆ ಗ್ರಾಪಂ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್ ಮತ್ತು ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಪತ್ರ ಬರೆಯಲಾಗಿದೆ.
ಬಸವ ಜಯಂತಿ ಆಚರಣೆ ಕುರಿತು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಮಾಹಿತಿಯನ್ನೂ ನೀಡದ ಪಿಡಿಒ, ಕಾರ್ಯದರ್ಶಿ ಸ್ವತಃ ತಾವೇ ಗೈರುಹಾಜರಾಗಿದ್ದಾರೆ. ಗ್ರಾಪಂನಲ್ಲಿ ನಡೆಯುವ ಎಲ್ಲಾ ಜಯಂತಿ ಮತ್ತು ಸಭೆಗಳಿಗೆ ಪಿಡಿಒ ಸಕಾಲಕ್ಕೆ ಹಾಜರಾಗದೆ ನಿರ್ಲಕ್ಷé ತೋರುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರ ಕೆಲಸ ಕಾರ್ಯಗಳ ನಿರ್ವಹಣೆಯಲ್ಲೂ ವಿಫಲರಾಗಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಗ್ರಾಪಂ ಮಾಜಿ ಅಧ್ಯಕ್ಷ ಸಂತೋಷ್ ಹಾಗೂ ಸದಸ್ಯ ಎ.ಬಿ.ಟಿ. ನಿರಂಜನಮೂರ್ತಿ ನೇತೃತ್ವದಲ್ಲಿ ಕಚೇರಿಯಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು. ಗ್ರಾಪಂ ಪಿಡಿಒ, ಕಾರ್ಯದರ್ಶಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯಿತ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಎನ್. ಪ್ರವೀಣ್, ಬಸವ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳದ ಗ್ರಾಪಂ ಪಿಡಿಒ, ಡ್ರೈವರ್ ಒಬ್ಬರ ಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವದಾಗಿ ತಿಳಿಸಿದ್ದಾರೆ. ಈ ರೀತಿ ಬೇಜವಾಬ್ದಾರಿ ಉತ್ತರ ನೀಡಿರುವ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.