![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 1, 2022, 2:25 PM IST
ಕುರುಗೋಡು: ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಮಣ್ಣೂರು ಘಟಕದ ವತಿಯಿಂದ ಜನವರಿ 1ರ ಅಂಗವಾಗಿ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು.
ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಸಮಿತಿಯ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿದರು. ‘ಮಹಾರ್ ಸೈನಿಕರ ಶೌರ್ಯದ ಸ್ಮರಣಾರ್ಥ ಪ್ರತಿ ವರ್ಷ ಜನವರಿ 1 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುತ್ತಿದೆ’ಎಂದು ಸಮಿತಿಯ ರಾಜ್ಯ ಸಮಿತಿ ಸದಸ್ಯ ಸೋಮಪ್ಪ ಛಲವಾದಿ ತಿಳಿಸಿದರು.
‘ಪೇಶ್ವೆಗಳು ಜಾತಿ ವ್ಯವಸ್ಥೆಯಡಿ ಆಡಳಿತ ನಡೆಸುತ್ತಿದ್ದರು. ಪೇಶ್ವೆ ಬಾಜಿರಾಯನನ್ನು ಸೋಲಿಸಲು ಬಂದ ಬ್ರಿಟಿಷರು ಮಹಾರ ಯೋಧರ ನೆರವು ಕೋರಿದ್ದರು. ಆದರೆ, ಮಹಾರ ಯೋಧರು ಪೇಶ್ವೆಗೆ ಷರತ್ತಿನ ಬೆಂಬಲ ನೀಡಲು ಆತನ ಬಳಿಗೆ ತನ್ನ ದಂಡನಾಯಕ ಸಿದ್ಧನಾಯಕನನ್ನು ಕಳಿಸಿದರು’ ಎಂದು ಹೇಳಿದರು.
‘ಬಾಜಿರಾಯ ಬ್ರಾಹ್ಮಣ ಸಂಪ್ರದಾಯ ಪಾಲಿಸುವುದೇ ತನ್ನ ಧರ್ಮ ಎಂದು ಹೇಳಿ, ಅಸ್ಪೃಶ್ಯ ಯೋಧರ ಬೆಂಬಲ ತಿರಿಸ್ಕರಿಸಿ, ಸಿದ್ಧನಾಯಕನನ್ನು ಅಪಮಾನಿಸಿ ಕಳಿಸುತ್ತಾನೆ. ಇದರಿಂದ ಆಕ್ರೋಶಗೊಂಡ ಮಹಾರ್ ಯೋಧರು ಬಾಜಿರಾಯನ ಬೆನ್ನು ಮೂಳೆ ಮುರಿಯಲು ಬ್ರಿಟಿಷರ ಪರ ಯುದ್ಧ ಮಾಡಲು ಒಪ್ಪಿಕೊಳ್ಳುತ್ತಾರೆ’ ಎಂದು ತಿಳಿಸಿದರು.
‘1818ರ ಜನವರಿ 1 ರಂದು ಈಗಿನ ಪುಣೆ ಹತ್ತಿರದ ಭೀಮಾ ನದಿ ದಂಡೆ ಮೇಲಿನ ಕೋರೆಗಾಂವ್ ಬಳಿ 30 ಸಾವಿರ ಸೈನಿಕರಿದ್ದ ಪೇಶ್ವೆ ಹಾಗೂ 500 ಮಹಾರ್ ಯೋಧರ ಮಧ್ಯೆ ಯುದ್ಧ ನಡೆದು ಬ್ರಿಟಿಷರ ಕೊರಳಿಗೆ ವಿಜಯ ಮಾಲೆ ಬಿದ್ದಿತು. ಬಾಜಿರಾಯ ತಪ್ಪಿಕೊಂಡು ಓಡಿ ಹೋಗುತ್ತಾನೆ’ಎಂದು ವಿವರಿಸಿದರು.
‘ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರತಿ ವರ್ಷ ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಹುತಾತ್ಮರ ಸ್ಮರಣಾರ್ಥ ಬ್ರಿಟಿಷ್ ಸರ್ಕಾರ ನಿರ್ಮಿಸಿರುವ ವೀರ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸುತ್ತಿದ್ದರು’ ಎಂದು ತಿಳಿಸಿದರು.
‘ಮಹಾರ್ ಯೋಧರ ತ್ಯಾಗ ವ್ಯರ್ಥವಾಗಲು ಬಿಡಬಾರದು. ಅವರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು’ಎಂದು ಹೇಳಿದರು.
ಈ ಸಂದರ್ಭದಲ್ಲಿ ಖಾದರಲಿಂಗ, ಸುಧಾಕರ್ ಮಣ್ಣೂರು, ಭೀಮಯ್ಯ, ಅಂಬರೀಷ್, ದೇವೇಂದ್ರ, ಶ್ರೀಹರಿ, ಶ್ರೀಕಾಂತ್, ಹೊನ್ನಪ್ಪ, ಆನಂದ, ಬುಲ್ಲ, ವಶಂತಕುಮಾರ್, ಮುನಿಯ, ಶೇಖ ಸೇರಿದಂತೆ ಇತರರು ಇದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.