ಬಿಹಾರ ವಲಸಿಗರು ಶ್ರಮಿಕ ರೈಲಿನಲ್ಲಿ ಪಯಣ
Team Udayavani, May 17, 2020, 6:31 AM IST
ಬಳ್ಳಾರಿ: ಉದ್ಯೋಗ ಅರಸಿ ಬಳ್ಳಾರಿಗೆ ಬಂದಿದ್ದ ಬಿಹಾರ್ ಮೂಲದ 1452 ಜನರು ನಗರದ ರೈಲು ನಿಲ್ದಾಣದಿಂದ ಶ್ರಮಿಕ ವಿಶೇಷ ರೈಲಿನ ಮೂಲಕ ಶನಿವಾರ ಸಂಜೆ ಬಿಹಾರದತ್ತ ಪ್ರಯಾಣ ಬೆಳೆಸಿದರು.
ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಎಸ್ಪಿ ಸಿ.ಕೆ. ಬಾಬಾ, ಜಿಪಂ ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಅವರನ್ನು ಬೀಳ್ಕೊಟ್ಟರು. ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1452 ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆಯಿಂದಲೇ ವಿಶೇಷ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ 840 ರೂ.ಗಳ ಟಿಕೆಟ್‌ನ್ನು ನೀಡಿ ರೈಲ್ವೆ ನಿಲ್ದಾಣಕ್ಕೆ ಬಸ್‌ಗಳ ಮೂಲಕ ಅವರನ್ನು ತಂದುಬಿಡಲಾಯಿತು. ಆ ವಲಸಿಗರನ್ನು ಅವರಿಗೆ ನೀಡಲಾದ ಟಿಕೇಟ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಕುಳಿತುಕೊಳ್ಳುವಂತೆ ತಿಳಿಸುತ್ತಿದ್ದರು.
ಈ ವಲಸಿಗರು ಹಸಿವಿನಿಂದ ಬಳಲಬಾರದು ಎಂದು ಎರಡು ಬ್ರೆಡ್ ಪ್ಯಾಕ್, ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿರ್ಚಿ ಬಜಿ ಹಾಗೂ ಇನ್ನಿತರ ಆಹಾರ ಸಾಮಗ್ರಿಗಳ ಆಹಾರ ಕಿಟ್‌ಗಳನ್ನು ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ವತಿಯಿಂದ ವಿತರಿಸಲಾಯಿತು. ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್‌ಕ್ರಾಸ್ ಸಂಸ್ಥೆಯವರು ಮಾಸ್ಕ್ಗಳನ್ನು ವಿತರಿಸಿದರು.
ತಮ್ಮ ರಾಜ್ಯದ ಕಡೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ರೈಲ್ವೆ ನಿಲ್ದಾಣದಲ್ಲಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಬಿಹಾರದ ಸಹಸ್ರಾಗೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯಾಗಿರಲಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ.
ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಲಾಗಿದೆ. ಈಗ ಒಂದು ರೈಲು ಬಿಹಾರ ರಾಜ್ಯಕ್ಕೆ ತೆರಳುತ್ತಿದ್ದು, ಇನ್ನೂ ಬಿಹಾರಕ್ಕೆ ವಲಸಿಗರು ತೆರಳುವುದಿದ್ದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಉತ್ತರ ಪ್ರದೇಶಕ್ಕೆ ಎರಡು ರೈಲುಗಳು ಮೇ 17ರಂದು ಬೆಳಗ್ಗೆ 10ಕ್ಕೆ ಹೊಸಪೇಟೆ ಮತ್ತು ಬಳ್ಳಾರಿ ರೈಲು ನಿಲ್ದಾಣದ ಮೂಲಕ ಉತ್ತರ ಪ್ರದೇಶದ ವಲಸಿಗರು ತೆರಳಲಿದ್ದಾರೆ ಎಂದು ವಿವರಿಸಿದ ಅವರು, ಈಗಾಗಲೇ ಅವರೆಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಟಿಕೆಟ್ ಸಹ ನೀಡಲಾಗಿದೆ ಎಂದರು.
ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.