ನಿರೀಕ್ಷಿತರಿಗೇ ದಕ್ಕಿತು ಬಿಜೆಪಿ ಟಿಕೆಟ್
Team Udayavani, Apr 17, 2018, 12:12 PM IST
ಬಳ್ಳಾರಿ: ಬಿಜೆಪಿ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ 5 ಕ್ಷೇತ್ರಗಳಿಗೆ ನಿರೀಕ್ಷಿತ ಅಭ್ಯರ್ಥಿಗಳ ಹೆಸರುಗಳನ್ನೇ ಪ್ರಕಟಿಸಿದೆ. ನಾಲ್ವರು ಮಾಜಿ ಶಾಸಕರು, ಓರ್ವ ಮಾಜಿ ಸಂಸದರಿಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಕೂಡ್ಲಿಗಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಮಾತ್ರ ಬಾಕಿ ಉಳಿಸಿಕೊಂಡಿದ್ದು, ಕುತೂಹಲ ಮೂಡಿಸಿದೆ. ಟಿಕೆಟ್ ಕೈ ತಪ್ಪಿದ ಹಡಗಲಿಯ ನಿವೃತ್ತ ಇಂಜನಿಯರ್ ಓದೋ ಗಂಗಪ್ಪ ಮಂಗಳವಾರ ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದ್ದು, ಉಳಿದಂತೆ ಬಿಜೆಪಿಗೆ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ.
ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಂಡೂರು ಕ್ಷೇತ್ರಕ್ಕೆ ಡಿ. ರಾಘವೇಂದ್ರ, ವಿಜಯನಗರ-ಎಚ್. ಆರ್.ಗವಿಯಪ್ಪ, ಕಂಪ್ಲಿ ಕ್ಷೇತ್ರಕ್ಕೆ ಹಾಲಿ ಶಾಸಕ ಟಿ.ಎಚ್.ಸುರೇಶ್ ಬಾಬು ಅವರ ಹೆಸರು ಪ್ರಕಟಿಸಿತ್ತು. ಈಗ ಎರಡನೇ ಪಟ್ಟಿಯಲ್ಲಿ ಹಡಗಲಿ ಕ್ಷೇತ್ರಕ್ಕೆ ಮಾಜಿ ಶಾಸಕ ಚಂದ್ರಾನಾಯ್ಕ, ಹಗರಿ ಬೊಮ್ಮನಹಳ್ಳಿಗೆ ಮಾಜಿ ಶಾಸಕ ನೇಮಿರಾಜ್ ನಾಯ್ಕ, ಸಿರುಗುಪ್ಪಕ್ಕೆ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ಬಳ್ಳಾರಿ ನಗರಕ್ಕೆ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ರಾಯಚೂರು ಮಾಜಿ ಸಂಸದ ಸಣ್ಣಫಕ್ಕೀರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಕೂಡ್ಲಿಗಿ ಕ್ಷೇತ್ರದಿಂದ ಕೋಡಿಹಳ್ಳಿ ಭೀಮಣ್ಣ ಸೇರಿ ಹಲವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರೂ, ಹೆಸರು ಪ್ರಕಟಿಸದಿರುವುದು ಕುತೂಹಲ ಮೂಡಿಸಿದೆ.
ಗೊಂದಲಕ್ಕೆ ತೆರೆ: ಕಳೆದ 2008ರಲ್ಲಿ ಬಿಜೆಪಿಯಿಂದ ಜಯಗಳಿಸಿ, 2013ರಲ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ, 2018ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ. ವರ್ಷದಿಂದಲೇ ಜನರೊಂದಿಗೆ ಬೆರೆಯುತ್ತಿದ್ದ ಇವರಿಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಎಲ್ಲೆಡೆ ಕೇಳಿಬಂದಿತ್ತು. ಮೇಲಾಗಿ ಬಿಜೆಪಿ ವೈದ್ಯಕೀಯ ಪ್ರಕೋಷ್ಠದಡಿ ಡಾ| ಬಿ.ಕೆ. ಸುಂದರ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗುತ್ತಿತ್ತು. ಹೀಗೆ ಒಂದೆರಡು ದಿನ ಸೋಮಶೇಖರರೆಡ್ಡಿಗೆ ಟಿಕೆಟ್ ಖಚಿತ ಎಂದರೆ, ಮತ್ತೂಂದೆರಡು ದಿನ ಬಿ.ಕೆ. ಸುಂದರ್ ಅವರಿಗೆ ನೀಡಲಾಗುತ್ತದಂತೆ ಎಂಬ ಅಂತೆಕಂತೆಗಳ ಮಾತುಗಳು ಕೇಳಿಬಂದವು. ಇದು ಪಕ್ಷ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದರೆ, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಜಿ.ಸೋಮಶೇಖರರೆಡ್ಡಿ ಅವರಿಗೆ ಟಿಕೆಟ್ ನೀಡಿದ್ದು, ಗೊಂದಲಗಳಿಗೆ ತೆರೆಬಿದ್ದಿದೆ.
ಪ್ರಭಾವ ಬೀರದ ಬಂಡಾಯ: ಇನ್ನು ಎಸ್‌ಸಿ ಮೀಸಲು ಕ್ಷೇತ್ರಗಳಾದ ಹಡಗಲಿ, ಹಗರಿಬೊಮ್ಮನಹಳ್ಳಿ, ಎಸ್‌ಟಿ ಮೀಸಲು ಕ್ಷೇತ್ರಗಳಾದ ಸಿರುಗುಪ್ಪ, ಬಳ್ಳಾರಿ ಗ್ರಾಮೀಣ ಕ್ಷೇತ್ರಗಳಿಗೆ ನಿರೀಕ್ಷಿತ ಅಭ್ಯರ್ಥಿಗಳ ಹೆಸರುಗಳನ್ನೇ ಪ್ರಕಟಿಸಲಾಗಿದೆ. ಹಡಗಲಿಯಲ್ಲಿ ಬಿಜೆಪಿ ಟಿಕೆಟ್‌ಗಾಗಿ ಓದೋ ಗಂಗಪ್ಪ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೂ, ಇವರಿಗೆ ಟಿಕೆಟ್ ದಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಗಂಗಪ್ಪ ಅವರ ಮನೆಯ ಬಳಿ ತೆರಳಿದ ಬೆಂಬಲಿಗರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಇನ್ನು ಹ.ಬೊ.ಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹ್ಯಾಂಡ್ ಎಂದು ಹೇಳಿಕೊಂಡಿದ್ದ ರಾಜೇಂದ್ರ ನಾಯ್ಕ, ತಿರುಮಲೇಶ್ ಅವರು ಟಿಕೆಟ್ ವಂಚಿತರಾಗಿದ್ದು, ಬಂಡಾಯ ಏಳುವ ಸಾಧ್ಯತೆ ತೀರಾ ಕಡಿಮೆಯಿದೆ. ಅದೇ ರೀತಿ ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ, ನಗರ ಕ್ಷೇತ್ರಗಳಲ್ಲಿ ಬಂಡಾಯದ ಪ್ರಭಾವ ಹೇಳಿಕೊಳ್ಳುವಷ್ಟು ಇಲ
ಮೇಲುಗೈ ಸಾಧಿಸಿದ ರಾಮುಲು ಜಿಲ್ಲೆಯ ಮೂರು ಕ್ಷೇತ್ರಗಳಿಗೆ ರೆಡ್ಡಿ ಪಾಳಯದಲ್ಲಿ ಗುರುತಿಸಿಕೊಂಡ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸುವಲ್ಲಿ ಶ್ರೀರಾಮುಲು ಮೇಲುಗೈ ಸಾಧಿಸಿದ್ದಾರೆ. ಕಂಪ್ಲಿ ಕ್ಷೇತ್ರದ ಟಿ.ಎಚ್.ಸುರೇಶ್‌ಬಾಬು, ಗ್ರಾಮೀಣ ಕ್ಷೇತ್ರದಿಂದ ಸಣ್ಣ ಫಕ್ಕೀರಪ್ಪ ಮತ್ತು ನಗರ ಕ್ಷೇತ್ರದಿಂದ ಜಿ.ಸೋಮಶೇಖರ ರೆಡ್ಡಿಯವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.