By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

Team Udayavani, Oct 25, 2024, 4:05 PM IST

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

ಬಳ್ಳಾರಿ: ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಒಟ್ಟಗೆ ಕಾಣಿಸಿಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಜನಾರ್ದನ ರೆಡ್ಡಿ, ಕಳೆದೊಂದು ವಾರದಿಂದ ಸಂಡೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಸುತ್ತಾಡಿದ್ದೇನೆ. ಜನರು ಸ್ವಯಂಪ್ರೇರಿತವಾಗಿ ಬರುತ್ತಿದ್ದಾರೆ. ಹೆಚ್ಚು ಹೆಚ್ಚು ಜನರು ಬಿಜೆಪಿ ಸೇರುತ್ತಿದ್ದಾರೆ. ಕಾಂಗ್ರೆಸ್ ನ ಎಷ್ಟೋ ಹೇಳಿಕೆಗಳು ಹುಸಿಯಾಗಿವೆ. ನಾನು ಬಳ್ಳಾರಿ ಉಸ್ತುವಾರಿಯಾಗಿದ್ದಾಗ 250 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದ್ದೇನೆ. ಕಾಂಗ್ರೆಸ್ ನವರು ಹಾಕಿದ ರಸ್ತೆ ಕಿತ್ತು ಹೋಗ್ತಿವೆ. ಡಿಎಂಎಫ್, ಸಿಎಸ್ ಆರ್ ಫಂಡ್ ದುರುಪಯೋಗ ಆಗುತ್ತಿದೆ ಎಂದರು.

ನಾನು, ನನ್ನ ಗೆಳೆಯ ಶ್ರೀರಾಮುಲು ಇಬ್ಬರೂ ಪ್ರಚಾರ ಮಾಡುತ್ತೇವೆ. ತುಕಾರಾಂ ತಮ್ಮನ್ನು ತಾವೇ ರಾಜ ಎಂದು ಹೇಳಿಕೊಂಡಿದ್ದಾರೆ. ಬಡ ಕುಟುಂಬದಲ್ಲಿ ಹುಟ್ಟಿ ದೊಡ್ಡ ಮಟ್ಟಕ್ಕೆ ಬೆಳೆದ ಶ್ರೀರಾಮುಲು ಯಾವತ್ತೂ ಹಾಗೇ ಹೇಳಿಲ್ಲ. ತುಕಾರಾಂ ಲೂಟಿ ರಾಜ ಎಂದು ರೆಡ್ಡಿ ಲೇವಡಿ ಮಾಡಿದರು.

ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ ಹಣ ಎಷ್ಟು ಬಳಕೆಯಾಗಿದೆ ಎನ್ನುವುದು ಗೊತ್ತಿದೆ. ಬಳ್ಳಾರಿ, ಕಂಪ್ಲಿ, ಸಂಡೂರು, ಕೂಡ್ಲಿಗಿಯ ನಾಲ್ಕು ಶಾಸಕರ ಮೂಲಕ ವಾಲ್ಮೀಕಿ ನಿಗಮದ ಹಣ ಹಂಚಿದ್ದಾರೆ. ಇದೆಲ್ಲವನ್ನೂ ಇಡಿಯವರು ಚಾರ್ಜ್ ಶೀಟ್ ಉಲ್ಲೇಖ ಮಾಡಿದ್ದಾರೆ. ಆದರೆ ತುಕಾರಾಂ ಕೆಳಗೆ ಬಿದ್ದರೂ ಮಣ್ಣು ತಗುಲಿಲ್ಲ ಅಂತಿದ್ದಾರೆ. ತುಕಾರಾಂಗೆ ಇದು ಕೊನೆಯ ಚುನಾವಣೆ. ನಾನು ಯಾವುದೇ ಆಪರೇಷನ್ ಮಾಡಿಲ್ಲ. ಸ್ವಯಂಪ್ರೇರಿತರಾಗಿ ಬಿಜೆಪಿ ಶಾಲು ಹಾಕಿ ಜನರು ಜಯಘೋಷ ಕೂಗುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಯಾವುದೇ ಅಸಮಾಧಾನವಿಲ್ಲ: ರಾಮುಲು

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ಯಾವುದೇ ಅಸಮಾಧಾನವಿಲ್ಲ. ನಾನು ಇಲ್ಲೇ ಇದ್ದೇನೆ ಪ್ರಚಾರ ಮಾಡುತ್ತೇನೆ. ನಾಮಪತ್ರ ಸಲ್ಲಿಕೆ ನಂತರ ಪ್ರಚಾರಕ್ಕೆ ಬರಬೇಕೆಂದು ಅಂದುಕೊಂಡಿದ್ದೆ ಹೀಗಾಗಿ ಈಗ ಬಂದಿದ್ದೇನೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಹಿನ್ನೆಡೆಯಾಗಿದೆ. ಅದಕ್ಕೆ ವಾಲ್ಮೀಕಿ ನಿಗಮದ ಹಣ ಬಳಸಿರುವುದು ಕಾರಣ. ಲೋಕಸಭೆ ಚುನಾವಣೆಯಲ್ಲಿ 21 ಕೋಟಿ ಹಣ ದುರ್ಬಳಕೆಯಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ವೇಳೆ ಇಡಿ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ನಾಗೇಂದ್ರ ಮತ್ತು ಅವರ ಪಿಎ ವಿಜಯ್ ಹಣ ದುರ್ಬಳಕೆ ಬಗ್ಗೆ ತಮ್ಮ ಮೊಬೈಲ್ ನಲ್ಲಿ ಉಲ್ಲೇಖ ಮಾಡಿದರು. ಯಾರಿಗೆ, ಎಲ್ಲಿ ಎಷ್ಟು ಹಣ ಕೊಟ್ಟಿದ್ದೇನೆ ಎಂದು ಫೈಲ್ ನಲ್ಲಿ ಬರೆದಿದ್ದರು. ಸಂಡೂರು ಜನರನ್ನು ಮರುಳು ಮಾಡಿ ಸುಳ್ಳು ಹೇಳಿ ಕಾಂಗ್ರೆಸ್ ಗೆದ್ದಿದೆ. ಈ ಬಾರಿ ಗೆದ್ದು ತೋರಿಸಲಿ ನೋಡೋಣ ಎಂದು ಶ್ರೀರಾಮುಲು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.