BY-Election: ಫಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ
Team Udayavani, Oct 26, 2024, 12:09 AM IST
ಬಳ್ಳಾರಿ: ಹಿಂದೆ ನಮ್ಮ ಜತೆಯಿದ್ದ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಈಗ ನನ್ನ ಜತೆಗಿಲ್ಲ. ಅವರ ಬಗ್ಗೆ ಮಾತನಾಡಲ್ಲ, ಉಪಚುನಾವಣೆ ಫಲಿತಾಂಶ ಬಂದ ಬಳಿಕ ಅವರಿಗೆ ಗೊತ್ತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ. ಶ್ರೀರಾಮುಲು ಅಸಮಾಧಾನಗೊಂಡಿಲ್ಲ. ಗುರುವಾರ ನಾನು, ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದೇವೆ. ಉಪ ಚುನಾವಣೆಯಲ್ಲಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಎಲ್ಲರೂ ಸೇರಿ ಎದುರಿಸುತ್ತಾರೆ ಎಂದರು.
ಸಂಡೂರಿನಲ್ಲಿ ಈವರೆಗೆ ಬಿಜೆಪಿ ಕಮಲ ಅರಳಿಲ್ಲ. ಈ ಬಾರಿ ಗೆಲ್ಲುವ ವಿಶ್ವಾಸವಿದೆ. ನಮ್ಮ ಜತೆಗೆ ಶಾಸಕರಿದ್ದಾರೆ ಎನ್ನುವ ಎಸ್.ಟಿ. ಸೋಮಶೇಖರ್‌ಗೆ ಉಪಚುನಾವಣೆ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಗೊತ್ತಾಗಲಿದೆ ಎಂದರು.
ಎಸ್ಟಿ ನಿಗಮದ ಹಗರಣಕ್ಕೆ ಸಂಬಂ ಧಿಸಿ ದೂರು ನೀಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ. ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಸಚಿವ ಆರ್.ವಿ. ದೇಶಪಾಂಡೆ ಸರಕಾರದ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ. ಸರಕಾರ ತಮ್ಮ ಶಾಸಕರ ವಿರೋಧವನ್ನು ಎದುರಿಸುತ್ತಿದೆ ಎಂದು ಆರೋಪಿಸಿದರು.
ಉಪಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ
ಕೊಟ್ಟೂರು: ಮುಡಾ ಹಗರಣದ ಎ-1 ಆರೋಪಿ ಸಿದ್ದರಾಮಯ್ಯ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅನಂತರ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆಯಲಾರದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಶುಕ್ರವಾರ ಉಜ್ಜಿನಿ ಸದ್ಧರ್ಮ ಪೀಠಕ್ಕೆ ಆಗಮಿಸಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಮುಡಾ ಹಗರಣ ಸಿದ್ದರಾಮಯ್ಯರ ಮುಖವಾಡ ಬಯಲಿಗೆಳೆಯಲಿದೆ. ಚನ್ನಪಟ್ಟಣದಲ್ಲಿ ರಾಜಕೀಯ ಮೇಲಾಟ ನಡೆದಿದ್ದು, ಮೈತ್ರಿ ಅಭ್ಯರ್ಥಿ ಗೆಲುವಿನ ದಡ ತಲುಪಲಿದ್ದಾರೆ. ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಹರಕೆಯ ಕುರಿ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.