ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಚುನಾವಣಾ ಖರ್ಚನ್ನು ನಿಗದಿಪಡಿಸಲಾಗಿದೆ

Team Udayavani, Mar 29, 2023, 10:11 PM IST

1-qe21ew2qe

ಬಳ್ಳಾರಿ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯಿದ್ದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಪತ್ರಿಕೆಗಳಲ್ಲಿ ಪ್ರಕಟಿಸಿ ಮತದಾರರಿಗೆ ಮಾಹಿತಿ ನೀಡಬೇಕು. ಜತೆಗೆ ಆಯಾ ಪಕ್ಷಗಳು ಸಹ ಆ ಬಗ್ಗೆ ಪತ್ರಿಕೆಗಳ ಮೂಲಕವೇ ಸ್ಪಷ್ಟೀಕರಣ ನೀಡಬೇಕು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ನಿರ್ದೇಶನದಂತೆ ೧೨ ದಿನಗಳ ಅವಧಿಯೊಳಗೆ ಪ್ರತಿ ನಾಲ್ಕು ದಿನಕ್ಕೊಮ್ಮೆ ತಮ್ಮ ಅಪರಾಧದ ಕುರಿತು ಪತ್ರಿಕೆಗಳಲ್ಲಿ ಪ್ರಕಟಿಸಬೇಕು. ಜತೆಗೆ ಅಪರಾಧ ಹಿನ್ನೆಲೆಯುಳ್ಳವರಿಗೆ ಟಿಕೇಟ್ ನೀಡಲು ಕಾರಣವೇನು ಎಂಬುದನ್ನು ಆಯಾ ಪಕ್ಷಗಳು ಸಹ ಪತ್ರಿಕೆಗಳ ಮೂಲಕ ಸ್ಪಷ್ಟನೆ ನೀಡಬೇಕು. ಈ ಮೂಲಕ ಅಭ್ಯರ್ಥಿಗಳೇ ತಮ್ಮ ಹಿನ್ನೆಲೆ ಕುರಿತು ಮತದಾರರಿಗೆ ಸ್ಪಷ್ಟಪಡಿಸಬೇಕು. ಜತೆಗೆ ಅಭ್ಯರ್ಥಿಗಳು ಸಲ್ಲಿಸುವ ಅಫಿಡವಿಟ್‌ನಲ್ಲೂ ಈ ಕುರಿತು ಸ್ವಯಂಘೋಷಣೆ ಮಾಡಿಕೊಂಡಿರಬೇಕು. ಒಂದು ವೇಳೆ ಇದು ಆಗದಿದ್ದಲ್ಲಿ ನಾವು ಸುಪ್ರೀಂಕೋರ್ಟ್ ಮಾಹಿತಿ ಸಲ್ಲಿಸುತ್ತೇವೆ. ನಂತರ ಕೋರ್ಟ್ ಕ್ರಮಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಆನ್‌ಲೈನ್‌ನಲ್ಲಿ ನಾಮಪತ್ರ
ಚುನಾವಣಾ ಆಯೋಗ ಮೊದಲ ಬಾರಿಗೆ ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಸುವಿಧಾ ಪೋರ್ಟಲ್‌ನಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಬಳಿಕ ಆ ಪ್ರತಿಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು.

ಪ್ರತ್ಯೇಕ ಖಾತೆ
ಅಭ್ಯರ್ಥಿಗಳಿಗೆ ಚುನಾವಣಾ ಖರ್ಚನ್ನು ಗರಿಷ್ಠ 40 ಲಕ್ಷ ರೂ.ಗಳಿಗೆ ನಿಗದಿಪಡಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ಲೆಕ್ಕಾಧಿಕಾರಿಯೊಬ್ಬರನ್ನು ನಿಯೋಜಿಸಲಾಗುತ್ತದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಅಭ್ಯರ್ಥಿಗಳು ಪ್ರತ್ಯೇಕವಾಗಿ ಒಂದು ಬ್ಯಾಂಕ್ ಖಾತೆಯನ್ನು ತೆರೆಯಬೇಕು. ಚುನಾವಣೆಗೆ ಸಂಬಂಧಿಸಿದ ಎಲ್ಲ ಖರ್ಚು ವೆಚ್ಚಗಳನ್ನು ಅವರು ಈ ಖಾತೆಯ ಮೂಲಕವೇ ಹಣ ಪಾವತಿಸಬೇಕು. ಅವರು ಚೆಕ್ ಅಥವಾ ಆನ್‌ಲೈನ್ ಮೂಲಕವಾದರೂ ಪಾವತಿ ಮಾಡಿಕೊಳ್ಳಬಹುದು. ಈ ಕುರಿತು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ. ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.