ಉತ್ಸವಕ್ಕೆ ಶೋಭಾಯಾತ್ರೆಯ ಮೆರಗು
Team Udayavani, Mar 3, 2019, 11:37 AM IST
ಹಂಪಿ: ಹಂಪಿ ಉತ್ಸವ ಅಂಗವಾಗಿ ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾಯಾತ್ರೆ ಉತ್ಸವಕ್ಕೆ ಮತ್ತಷ್ಟು ಹೆಚ್ಚು ಮೆರುಗು ನೀಡಿದ್ದು, ಮೆರವಣಿಗೆಯಲ್ಲಿ ಕಲಾ ತಂಡಗಳು ಗಮನ ಸೆಳೆದವು.
ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿರೂಪಾಕ್ಷೇಶ್ವರನಿಗೆ ಪೂಜೆ ಮಾಡುವುದರ ಮೂಲಕ ಆರಂಭವಾದ ಶೋಭಾಯಾತ್ರೆಯಲ್ಲಿ ನಂದಿಧ್ವಜ, ನಾದಸ್ವರ, ವೀರಗಾಸೆ, ಕಹಳೆ ವಾದನ, ತಾಷರಂಡೋಲ್, ಡೊಳ್ಳು ಕುಣಿತ, ಹಗಲುವೇಷ, ಹುಲಿವೇಷ, ಮುಳ್ಳಿನ ಪ್ರದರ್ಶನ, ಗಾರುಡಿಗೊಂಬೆ, ಪಟಕುಣಿತ, ಮಹಿಳಾ ಝಾಂಜ್ ಪಥಕ್, ಕರಡಿ ಮಜಲು, ಸಿಂಗಾರಿ ಮೇಳ, ಮಹಿಳಾ ತಮಟೆ ವಾದನ, ಕೀಲುಕುದುರೆ ಮತ್ತು ಕರಡಿ ಕುಣಿತ ಸೇರಿದಂತೆ 25ಕ್ಕೂ ಹೆಚ್ಚು ಕಲಾ ತಂಡಗಳ ಪ್ರದರ್ಶನ ಅದ್ಭುತವಾಗಿತ್ತು.
500ಕ್ಕೂ ಹೆಚ್ಚು ಕಲಾವಿದರು ಈ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ಗೊರವರ ಕುಣಿತ, ಪೂಜಾ ಕುಣಿತ, ಪುರವಂತಿಕೆ, ಚಿಟ್ಟಿಮೇಳ, ದಟ್ಟಿಕುಣಿತ, ಜಗ್ಗಲಿಗಿ, ಜಾಂಜ್ ಮೇಳ, ಚಿಲಿಪಿಲಿ ಗೊಂಬೆ, ವೀರಭದ್ರ ಕುಣಿತ, ಸೋಮನ ಕುಣಿತ, ಕತ್ತಿ ವರಸೆ ಹೀಗೆ ಹಲವು ಸಾಂಪ್ರದಾಯಿಕ ನೃತ್ಯಗಳು ಗಮನ ಸೆಳೆದವು.
ಸಾವಿರ ಕುಂಭಹೊತ್ತ ಮಹಿಳೆಯರು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಎದುರು ಬಸವಣ್ಣ ಮಂಟಪದವರೆಗೆ ಯಾತ್ರೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಮಹೇಶ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.