ದಾರ್ಶನಿಕರ ಜಯಂತಿ ನೆಪಮಾತ್ರಕ್ಕೆ ಆಚರಣೆ: ಆನಂದಸಿಂಗ್‌


Team Udayavani, Jan 22, 2018, 3:55 PM IST

22-40.jpg

ಹೊಸಪೇಟೆ: ಸಮಾಜ ಸುಧಾರಣೆಗಾಗಿ ತಮ್ಮನ್ನು ಮುಡುಪಾಗಿಟ್ಟಿಕೊಂಡಿದ್ದ ಸಂತರ, ಶರಣರ ಹಾಗೂ ವಚನಕಾರರ ಜಯಂತಿಗಳು ಇಂದು ಕಾಟಾಚಾರಕ್ಕೆ ಎಂಬಂತೆ ಆಚರಿಸಲಾಗುತ್ತಿದ್ದು, ಯುವಜನರು ಜಯಂತಿಯಲ್ಲಿ ಡಿಜಿಗಳ (ಧ್ವನಿ ವರ್ಧಕ) ಮೂಲಕ ಕುಣಿದು-ಕುಪ್ಪಳಿಸಿ, ಅವರಿಗೆ ಅಗೌರವ ಸೂಚಿಸುತ್ತಿದ್ದಾರೆ ಎಂದು ಶಾಸಕ ಆನಂದ ಸಿಂಗ್‌ ಬೇಸರ ವ್ಯಕ್ತಪಡಿಸಿದರು. 

ಸ್ಥಳೀಯ ಎಂ.ಪಿ. ಪ್ರಕಾಶ ಕಲಾ ಮಂದಿರದಲ್ಲಿ ತಾಲೂಕು ಆಡಳಿತ ಹಾಗೂ ಗಂಗಾಮತ ಸಮಾಜ ಭಾನುವಾರ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ವರ್ಷವಿಡೀ ಜಯಂತಿ ಆಚರಣೆಗೆ ಮುಂದಾದರೂ ಸಮಾಜ ಬಾಂಧವರು ಹಾಗೂ ಅಧಿಕಾರಿಗಳು, ಅರ್ಥಪೂರ್ಣ ಜಯಂತಿ ಆಚರಣೆ ಮಾಡುವಲ್ಲಿ ವಿಫ‌ಲರಾಗಿದ್ದಾರೆ. ಯುವಕರು ಜಯಂತಿ ಮೆರವಣಿಗೆಯಲ್ಲಿ ಕುಡಿದು (ಕುಣಿದು) ಕುಪ್ಪಳಿಸಿ, ಈ ನಾಡಿನ ಮಹನೀಯರಿಗೆ ಅಪಮಾನ ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದರು.

ಮುಖ್ಯಭಾಷಾಣಕಾರ ಶಿಕ್ಷಕ ಎನ್‌. ನಾಗರಾಜ, 12ನೇ ಶತಮಾನದಲ್ಲಿ ಪ್ರಗತಿಪರ ಶರಣ ನಡೆಯನ್ನೆ ಪ್ರಶ್ನೆಸಿದ ಬಂಡಾಯ ವಚನಕಾರರಾಗಿ ರೂಪಗೊಂಡ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಜಾತಿ, ಮೌಡ್ಯ-ಕಂದಾರ ವಿರುದ್ಧ ಜಾಗೃತಿ ಉಂಟುಮಾಡಿದ್ದರು. ಅವರ ವಿಚಾರಧಾರೆ ಹಾಗೂ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ತಹಶೀಲ್ದಾರ್‌ ಎಚ್‌.ವಿಶ್ವನಾಥ, ಗಂಗಾಮತ ಸಮಾಜದ ಅಧ್ಯಕ್ಷ ಅಭಿಮನ್ಯು, ಉಪಾಧ್ಯಕ್ಷ ಮಡ್ಡಿ ಹನುಮಂತಪ್ಪ, ಗೌರವಾಧ್ಯಕ್ಷ ಬಿ.ಸುದರ್ಶನ, ಮಾಜಿ ಅಧ್ಯಕ್ಷ ಎಸ್‌.ಗಾಳೆಪ್ಪ, ನಗರಸಭೆ ಸದಸ್ಯ ಕೆ.ಗೌಸ್‌, ಮಾಜಿ ಸದಸ್ಯ ಪೂಜಾರಿ ವೆಂಕಟೇಶ, ಸಮಾಜದ ಮುಖಂಡ ವೈ ಯಮುನೇಶ, ಗೋವಿಂದರಾಜ್‌, ಮಡ್ಡಿಮಂಜುನಾಥ, ಮುಸ್ಲಿಂ ಸಮಾಜದ ಮುಖಂಡ ಬಸೀರ್‌ ಅಮ್ಮದ್‌ ಇದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆ ನಡೆಯಿತು. ಟಿ.ವೆಂಕೋಬಪ್ಪ ಸ್ವಾಗತಿಸಿದರು. 
ಮಾ.ಬ.ಸೋಮಣ್ಣ ನಿರೂಪಿಸಿದರು. 

ನಗರಸಭೆ ಆವರಣದಲ್ಲಿರುವ ಎಂ.ಪಿ. ಪ್ರಕಾಶ ಕಲಾಮಂದಿರ ತೀರ ಹದೆಗೆಟ್ಟಿದ್ದು, ಯಾವುದೇ ಕಾರ್ಯಕ್ರಮ ಮಾಡಲು ಯೋಗ್ಯವಿಲ್ಲದಂತಾಗಿದೆ. ಸಭಾಂಗಣದಲ್ಲಿ ಮುರಿದು ಬಿದ್ದಿರುವ ಆಸನಗಳು ಇದಕ್ಕೆ ಸಾಕ್ಷಿ. ಈ ಕಲಾ ಮಂದಿರವನ್ನು ಮರ ನಿರ್ಮಾಣ
ಮಾಡುವ ಮೂಲಕ ಮಾಜಿ ಉಪಮುಖ್ಯಮಂತ್ರಿ ದಿ| ಎಂ.ಪಿ. ಪ್ರಕಾಶ ಅವರ ಹೆಸರಿಗೆ ಇನಷ್ಟು ಗೌರವ ತರುವಂತ ಕೆಲಸ ಮಾಡಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿ, ಬಜೆಟ್‌ನಲ್ಲಿ ನೂತನ ಕಲಾ ಮಂದಿರ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೋರಲಾಗುವುದು. ಆನಂದಸಿಂಗ್‌, ಶಾಸಕ, ವಿಜಯನಗರ ಕ್ಷೇತ್ರ

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.