ಸರಗಳ್ಳತನ: ಮೂವರ ಬಂಧನ
Team Udayavani, Mar 21, 2022, 12:44 PM IST
ಬಳ್ಳಾರಿ: ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವ ವೇಳೆ ಸರಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಕುರುಗೋಡು ಪೊಲೀಸರು, 80 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಮಾಂಗಲ್ಯ ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸುಶೀಲಾ (55), ವಿಮಲ್ (55), ಉಷಾ (45) ಬಂಧಿತ ಆರೋಪಿಗಳು.
ಇದೇ ಮಾ.18 ರಂದು ನಡೆದ ಕುರುಗೋಡು ದೊಡ್ಡಬಸವೇಶ್ವರ ಜಾತ್ರೆಗೆ ಕುಟುಂಬ ಸಮೇತ ಬಂದಿದ್ದ ಶಿಲ್ಪಾ (34) ಎನ್ನುವವರು ಅಂದು ಸಂಜೆ 5:40ಕ್ಕೆ ದೇವಸ್ಥಾನದ ಮುಂದೆ ನಡೆದುಕೊಂಡು ಹೋಗುತ್ತಿದ್ದಾಗ ಯಾರೋ ತಳ್ಳಿದ್ದರಿಂದ ಕೆಳಗೆ ಬಿದ್ದಿದ್ದು, ಮೇಲಕ್ಕೆ ಏಳುತ್ತಿದ್ದಾಗ ಅಪರಿಚಿತ ಮಹಿಳೆಯೊಬ್ಬರು ಶಿಲ್ಪಾರ ಕೊರಳಲ್ಲಿದ್ದ 80 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಮಾಂಗಲ್ಯ ಕಿತ್ತುಕೊಂಡು ತನ್ನ ಸಹಚರರೊಂದಿಗೆ ಪರಾರಿಯಾಗಿದ್ದು, ಈ ಕುರಿತು ಕುರುಗೋಡು ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಕುರುಗೋಡು ಪೊಲೀಸರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಮೌನೇಶ್ ರಾಥೋಡ, ಸಿಬ್ಬಂದಿ, ಜಾತ್ರೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂರು ಜನರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಸರಗಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ವೇಳೆ 80 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಮಾಂಗಲ್ಯವನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 1 ಕಬ್ಬಿಣದ ಕಟರ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.