Vijayanagara ಜಿಲ್ಲೆ: ಎರಡನೇ ಅವಧಿಗೂ ಮುಂದುವರೆದ ಚನ್ನಬಸವನಗೌಡ ಪಾಟೀಲ್
Team Udayavani, Jan 15, 2024, 8:06 AM IST
ಬಳ್ಳಾರಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಹಾಲಿ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಅವರನ್ನೇ ಎರಡನೇ ಅವಧಿಗೂ ಮುಂದುವರೆಸಲಾಗಿದೆ.
ಅವಿಭಜಿತ ಬಳ್ಳಾರಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಚನ್ನಬಸವನಗೌಡ ಪಾಟೀಲ್ ಅವರು, ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯಾಗಿ ವಿಜಯನಗರ ನೂತನ ಜಿಲ್ಲೆಯಾಗಿ ರಚನೆಯಾದ ಬಳಿಕ ವಿಭಜಿತ ಬಳ್ಳಾರಿ ಜಿಲ್ಲಾಧ್ಯಕ್ಷ ಸ್ಥಾನವನ್ನು ತ್ಯಜಿಸಿ, ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಮುಂದುವರೆದರು. ಇದೀಗ ಎರಡನೇ ಅವಧಿಗೂ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರೆಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಜಾತಿ ಲೆಕ್ಕಾಚಾರ:
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರದಲ್ಲಿ ಚನ್ನಬಸವನಗೌಡ ಪಾಟೀಲ್ ಅವರನ್ನೇ ಮುಂದುವರೆಸಲಾಗಿದೆ ಎನ್ನಲಾಗಿದೆ. ಬಳ್ಳಾರಿ ಲೋಕಸಭೆ ವ್ಯಾಪ್ತಿಗೆ ಬರುವ ವಿಜಯನಗರ ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ತಾಲೂಕುಗಳಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿರುವ ಈ ಮತಗಳ ಲೆಕ್ಕಾಚಾರಕ್ಕಾಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅದೇ ಸಮುದಾಯದ ಚನ್ನಬಸವನಗೌಡ ಪಾಟೀಲ್ ಅವರನ್ನೇ ಎರಡನೇ ಅವಧಿಗೂ ಮುಂದುವರೆಸಲಾಗಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.